ಅಶ್ಲೀಲ ಚಿತ್ರ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ.
ಅಶ್ಲೀಲ ಚಲನಚಿತ್ರಗಳ ಅಕ್ರಮ ವಿತರಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಇಡಿ ರಾಜ್ ಕುಂದ್ರಾಗೆ ಸಮನ್ಸ್ ನೀಡಿದೆ ಎಂದು ವರದಿಯಾಗಿದೆ.
ಇನ್ನು ಈ ಪ್ರಕರಣವನ್ನು ವಜಾಗೊಳಿಸುವಂತೆ ತನಿಖಾಧಿಕಾರಿಯ ಮುಂದೆ ಕುಂದ್ರಾ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಇನ್ನು ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಕೆಲವರಿಗೂ ಸಮನ್ಸ್ ನೀಡಲಾಗಿದೆ.
ಇದನ್ನು ಓದಿದ್ದೀರಾ? ಶಿಲ್ಪಾ ಶೆಟ್ಟಿ ಹೋಟೆಲ್‌ನಲ್ಲಿ 80 ಲಕ್ಷ ರೂ. ಮೌಲ್ಯದ BMW ಕಾರು ಕಳವು
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಡಿಸೆಂಬರ್ 29ರಂದು ಮುಂಬೈನ ಕುಂದ್ರಾ ಮತ್ತು ಉತ್ತರ ಪ್ರದೇಶದ ಕೆಲವು ನಗರಗಳಲ್ಲಿರುವ ಆರೋಪಿಗಳ ನಿವಾಸ, ಕಚೇರಿಗಳಿಗೆ ದಾಳಿ ನಡೆದಿದೆ. ಕಳೆದ ನಾಲ್ಕು ವರ್ಷಗಳಿಂದ ಈ ಪ್ರಕರಣದ ತನಿಖೆ ನಡೆಯುತ್ತಿದೆ.
“ಸತ್ಯ ಹೊರಬರಲು ತನಿಖೆಗೆ ಸಹಕರಿಸುತ್ತಿದ್ದಾರೆ” ಎಂದು ಕುಂದ್ರಾ ಪರ ವಕೀಲರು ಶನಿವಾರ ಮಾಧ್ಯಮಕ್ಕೆ ತಿಳಿಸಿದ್ದಾರೆ.
