ಬಸವಣ್ಣನ ಬಗ್ಗೆ ಹೇಳಿಕೆ | ಯತ್ನಾಳ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ; ಭಾವಚಿತ್ರ ದಹನ

Date:

Advertisements

ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಯತ್ನಾಳ್ ಹೇಳಿಕೆಯನ್ನು ಖಂಡಿಸಿ ಭಾವಚಿತ್ರ ದಹಿಸಿ ಪ್ರತಿಭಟಿಸಿರುವ ಕಾಂಗ್ರೆಸ್, ಯತ್ನಾಳ್ ಬಂಧನಕ್ಕೆ ಆಗ್ರಹಿಸಿದ್ದಾರೆ.

“ಬಸವಣ್ಣನವರಂತೆ ಹೊಳ್ಯಾಗ ಜಿಗಿಯಬೇಕು, ಇಲ್ಲವಾದರೆ ಸಾಬ್ರು ಆಗಿ” ಎಂದು ಯತ್ನಾಳ್ ನವೆಂಬರ್ 25ರಂದು ಬೀದರ್‌ನಲ್ಲಿ ವಕ್ಫ್ ವಿರೋಧಿ ಪ್ರತಿಭಟನಾ ಸಭೆಯಲ್ಲಿ ಹೇಳಿದ್ದರು.

ಈ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತನಾಡಿದ ಎಸ್ ಮನೋಹರ್ ವಕ್ತಾರ ಎಸ್ ಮನೋಹರ್, “ಇಡೀ ವಿಶ್ವಕ್ಕೆ ಸಮಾನತೆಯ ದಾರಿಯನ್ನು ತೋರಿದ ವಿಶ್ವಗುರು ಬಸವಣ್ಣನವರ ಇಂದಿಗೂ ವಿಶ್ವಕ್ಕೆ ದಾರಿದೀಪವಾಗಿದ್ದಾರೆ. ಬಸವಣ್ಣನವರ ಕುರಿತು ಅವಹೇಳನ ಮಾಡಿರುವ ಹಾಗೂ ರಾಜಕೀಯಕ್ಕೆ ಅವರ ಹೆಸರನ್ನು ಬಳಸಿಕೊಂಡಿರುವ ತುಚ್ಛ ನಾಲಿಗೆಯ ಬಸನಗೌಡ ಪಾಟೀಲರನ್ನು ಕೂಡಲೇ ಬಿಜೆಪಿ ಉಚ್ಚಾಟಿಸಬೇಕು. ಆತನ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಬೀದರ್ | ಯತ್ನಾಳ್ ಮಾತುಗಳು ಇತಿಹಾಸದ ಅರಿವಿಲ್ಲದ ಮಾತು : ಬಸವಲಿಂಗ ಪಟ್ಟದ್ದೇವರು

“ಬಿಜೆಪಿ ನಾಯಕರು ಬಸವಣ್ಣನವರ ಹೆಸರಿನಲ್ಲಿ ರಾಜಕೀಯ ಮಾಡುತ್ತಾರೆ. ಅವರನ್ನು ಅವಹೇಳನ ಮಾಡಿರುವ ಬಸನಗೌಡ ಪಾಟೀಲ್ ಯತ್ನಾಳ್‌ರನ್ನ ಬಿಜೆಪಿಯಿಂದ ಉಚ್ಛಾಟಿಸುವ ಶಕ್ತಿಯನ್ನು ಕರ್ನಾಟಕ ಹಾಗೂ ಕೇಂದ್ರದ ಬಿಜೆಪಿ ನಾಯಕರು ಕಳೆದುಕೊಂಡಿದ್ದಾರೆ. ಬಿಜೆಪಿ ಪಕ್ಷಕ್ಕೆ ಕರ್ನಾಟಕದಲ್ಲಿ ನಾಯಕತ್ವವೇ ಇಲ್ಲದಂತಾಗಿದೆ. ಬಿಜೆಪಿ ನಾಯಕರು ದಾರಿ ತಪ್ಪಿದ ಮಕ್ಕಳಂತಾಗಿದ್ದಾರೆ” ಎಂದು ಟೀಕಿಸಿದರು.

ಬಸವಣ್ಣನವರ ಬಗ್ಗೆ ಮಾತನಾಡುವ ಯೋಗ್ಯತೆ ಅರ್ಹತೆ ಬಿಜೆಪಿ ನಾಯಕರಿಗೆ ಇಲ್ಲ. ಬಿಜೆಪಿ ನಾಯಕರು ಇನ್ನು ಮುಂದೆ ವಿಶ್ವಗುರು ಬಸವಣ್ಣನವರ ಹೆಸರನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಈಗ ಬಳಸಿಕೊಂಡು ಬಸವಣ್ಣನವರನ್ನು ಹೀಯಾಳಿಸಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಯತ್ನಾಳ್1 2

ಈ ವೇಳೆಯಲ್ಲೇ “ಕಾಂಗ್ರೆಸ್ ಸರ್ಕಾರದ ವಿರುದ್ಧ ಆಧಾರ ರಹಿತವಾದಂತ ಆರೋಪ ಮಾಡಿ ಇಂದು ರಾಜ್ಯದ ಜನತೆ ಮುಂದೆ ಬಿಜೆಪಿಯ ನಾಯಕರುಗಳ ಭ್ರಷ್ಟಾಚಾರದ ಬಣ್ಣವನ್ನು ಸ್ವತಃ ಅವರೇ ಬಹಿರಂಗಪಡಿಸಿಕೊಂಡಿದ್ದಾರೆ” ಎಂದರು.

ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಎಂ.ಇ.ಐ ಅಧ್ಯಕ್ಷರಾದ ಎಸ್ ಮನೋಹರ್, ಕಾಂಗ್ರೆಸ್ ಮುಖಂಡರುಗಳಾದ ಜಿ, ಪ್ರಕಾಶ್, ಹೇಮರಾಜ್, ಚಂದ್ರಶೇಖರ್, ಪುಟ್ಟರಾಜು, ಉಮೇಶ್ ,ಒಬಳೇಶ್ ಚಿನ್ನಿಪ್ರಕಾಶ್, ರವಿ, ಮಾಧವ, ಕುಶಾಲ್ ಅರವೇಗೌಡ, ನವೀನ್ ಸಾಯಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X