ಈಜಲು ಹೋಗಿದ್ದ ಇಬ್ಬರು ಬಾಲಕರು ಜಲಾಶಯದ ನೀರಿನಲ್ಲಿ ಮುಳುಗಿ ಸಾವಪ್ಪಿರುವ ದಾರುಣ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗುಮ್ಮಲದಲ್ಲಿ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿಗಳಾದ ಶ್ರೀಶ(13) ಮತ್ತು ಪ್ರಜ್ವಲ್(14) ಎಂದು ಗುರುತಿಸಲಾಗಿದೆ.ಒಟ್ಟು ನಾಲ್ಕು ಮಂದಿ ಬಾಲಕರು ರಜೆ ಹಿನ್ನೆಲೆಯಲ್ಲಿ ಗುಮ್ಮಲದಲ್ಲಿರುವ ಜಲಾಶಯದಲ್ಲಿ ಈಜಲು ತೆರಳಿದ್ದರು. ಈ ವೇಳೆ, ಶ್ರೀಶ ಮತ್ತು ಪ್ರಜ್ವಲ್ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಶಂಕರ ನಾರಾಯಣ ಪೊಲೀಸ್ ಠಾಣೆಯ ಪೊಲೀಸರು ತೆರಳಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.