ರಾಜಸ್ಥಾನ | ಸುರಂಗ ಕುಸಿತ; ಓರ್ವ ಕಾರ್ಮಿಕ ಸಾವು, ಇಬ್ಬರಿಗೆ ಗಾಯ

Date:

Advertisements

ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಭಾಗ ಕುಸಿದು ಕಾರ್ಮಿಕರೊಬ್ಬರು ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಕಾರ್ಮಿಕನನ್ನು ಶಂಶೇರ್ ಸಿಂಗ್ (33) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಕೋಟಾ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಸುಜಿತ್ ಶಂಕರ್, “ಕುಸಿದ ಸುರಂಗ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಭಾಗವಾಗಿದೆ. ರಾಮಗಂಜ್ ಮಂಡಿಯ ಮೋದಕ್ ಪ್ರದೇಶದಲ್ಲಿ ಶನಿವಾರ ರಾತ್ರಿ ಸುರಂಗದ ಒಂದು ಭಾಗ ಕುಸಿದಿದೆ” ಎಂದು ಭಾನುವಾರ ಹೇಳಿದ್ದಾರೆ.

Advertisements

ಇದನ್ನು ಓದಿದ್ದೀರಾ? ರಾಯಚೂರು | ಸರ್ಕಾರಗಳ ಗುತ್ತಿಗೆ ಪದ್ಧತಿಯಿಂದ ಕಾರ್ಮಿಕರನ್ನು ಒಕ್ಕಲೆಬ್ಬಿಸುತ್ತಿದ್ದಾರೆ: ಸೈಯದ್ ಮುಜೀಬ್

ಇನ್ನು ಸುರಂಗದಡಿ ಸಿಲುಕಿದ ಕಾರ್ಮಿಕರ ಪೈಕಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು ಉಳಿದ ಕಾರ್ಮಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸುಜಿತ್ ಶಂಕರ್ ತಿಳಿಸಿದ್ದಾರೆ.

ಇನ್ನು ಈ ದುರ್ಘಟನೆ ನಡೆದ ಬಳಿಕ ಪೊಲೀಸರು ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X