ಸಂಘಪರಿವಾರದ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Date:

Advertisements

ಸಂಘ ಪರಿವಾರದ ಕೆ.ಎನ್ ಗೋವಿಂದಾಚಾರ್ಯ ಅವರು ಸ್ಥಾಪಿಸಿರುವ ಭಾರತ ವಿಕಾಸ ಸಂಗಮ ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ತಮ್ಮ ಭಾಗವಹಿಸುವಿಕೆ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಜನವರಿ ತಿಂಗಳಲ್ಲಿ ಕಲಬುರ್ಗಿಯ ಸೇಡಂನಲ್ಲಿ ಭಾರತ ವಿಕಾಸ ಸಂಗಮ ಎಂಬ ಸಂಸ್ಥೆಯು ‘ಭಾರತೀಯ ಸಂಸ್ಕೃತಿ ಉತ್ಸವ-7’ ಎಂಬ ಕಾರ್ಯಕ್ರಮ ಆಯೋಜಿಸಿದೆ. ಆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂಬ ಮಾಹಿತಿಯೊಂದಿಗೆ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಂಘಪರಿವಾರವನ್ನು ಸೈದ್ಧಾಂತಿಕವಾಗಿ ವಿರೋಧಿಸುವ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ ಎಂಬುದು ಸಾಕಷ್ಟು ವಿರೋಧ, ಆಕ್ಷೇಪ, ಪ್ರಶ್ನೆಗಳನ್ನು ಹುಟ್ಟುಹಾಕಿತ್ತು.

ಈ ಬೆನ್ನಲ್ಲೇ, ಊಹಾಪೋಹಗಳಿಗೆ, ಚರ್ಚೆಗಳಿಗೆ ತೆರೆ ಎಳೆದಿರುವ ಸಿದ್ದರಾಮಯ್ಯ ಅವರು ಸಂಘಪರಿವಾರದ ಕಾರ್ಯಕ್ರಮದಲ್ಲಿ ತಾವು ಭಾಗವಹಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Advertisements

ಈ ಬಗ್ಗೆ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದು, “ಭಾರತ ವಿಕಾಸ ಸಂಗಮ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವದನ್ನು ಗಮನಿಸಿದ್ದೇನೆ. ಈ ಬಗ್ಗೆ ನನಗೆ ಅಧಿಕೃತ ಆಹ್ವಾನ ಬಂದಿಲ್ಲ. ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಹಿನ್ನೆಲೆಯ ವಿವರವನ್ನು ತರಿಸಿ ಪರಿಶೀಲಿಸಿದ ನಂತರ ಅದರಲ್ಲಿ ಭಾಗವಹಿಸದೆ ಇರಲು ತೀರ್ಮಾನಿಸಿದ್ದೇನೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X