ಸಂಘಪರಿವಾರದ ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಕೂಡಾ ಭಾಗಿಯಾಗಲಿದ್ದಾರೆ ಎಂಬ ವದಂತಿಗಳು ಹರಡುತ್ತಿದ್ದಂತೆ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಖ್ ಖರ್ಗೆ, “ನನಗೆ ಆಹ್ವಾನ ನೀಡದೆಯೇ ನನ್ನ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿ ಹಂಚುವುದು ಸಮಂಜಸವಲ್ಲ” ಎಂದು ಹೇಳಿದ್ದಾರೆ.
“ಭಾರತ ವಿಕಾಸ ಸಂಗಮ ಸಂಸ್ಥೆ ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಎಂಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವುದನ್ನು ಮಾಧ್ಯಮಗಳ ಮೂಲಕ ಗಮನಿಸಿದೆ. ನನಗೆ ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ಇಲ್ಲ, ನನಗೆ ಆಹ್ವಾನವೂ ಬಂದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನು ಓದಿದ್ದೀರಾ? ಸಂಘಪರಿವಾರದ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಜನವರಿ ತಿಂಗಳಲ್ಲಿ ಕಲಬುರ್ಗಿಯ ಸೇಡಂನಲ್ಲಿ ಭಾರತ ವಿಕಾಸ ಸಂಗಮ ಎಂಬ ಸಂಸ್ಥೆಯು ‘ಭಾರತೀಯ ಸಂಸ್ಕೃತಿ ಉತ್ಸವ-7’ ಎಂಬ ಕಾರ್ಯಕ್ರಮ ಆಯೋಜಿಸಿದೆ. ಆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ, ಪ್ರಿಯಾಂಕ್ ಖರ್ಗೆ ಭಾಗಿಯಾಗಲಿದ್ದಾರೆ ಎಂಬ ಮಾಹಿತಿಯೊಂದಿಗೆ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.
ಹಾಗೆಯೇ ಸೈದ್ಧಾಂತಿಕವಾಗಿ ಸಂಘಪರಿವಾರವನ್ನು ವಿರೋಧಿಸುವ ಕಾಂಗ್ರೆಸ್ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾತ್ತಿದ್ದಾರೆ ಎಂಬುದು ತೀವ್ರ ವಿರೋಧ, ಆಕ್ಷೇಪಕ್ಕೆ ಕಾರಣವಾಗಿತ್ತು.
ಭಾರತ ವಿಕಾಸ ಸಂಗಮ ಸಂಸ್ಥೆ ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಎಂಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವುದನ್ನು ಮಾಧ್ಯಮಗಳ ಮೂಲಕ ಗಮನಿಸಿದೆ.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) December 1, 2024
ನನಗೆ ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ಇಲ್ಲ, ನನಗೆ ಆಹ್ವಾನವೂ ಬಂದಿಲ್ಲ.
ನನಗೆ ಆಹ್ವಾನ ನೀಡದೆಯೇ ನನ್ನ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿ ಹಂಚುವುದು…
ಇದಾದ ಬೆನ್ನಲ್ಲೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂಘ ಪರಿವಾರದ ಕೆ.ಎನ್ ಗೋವಿಂದಾಚಾರ್ಯ ಅವರು ಸ್ಥಾಪಿಸಿರುವ ಭಾರತ ವಿಕಾಸ ಸಂಗಮ ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಈ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದು, “ಭಾರತ ವಿಕಾಸ ಸಂಗಮ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವದನ್ನು ಗಮನಿಸಿದ್ದೇನೆ. ಈ ಬಗ್ಗೆ ನನಗೆ ಅಧಿಕೃತ ಆಹ್ವಾನ ಬಂದಿಲ್ಲ. ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಹಿನ್ನೆಲೆಯ ವಿವರವನ್ನು ತರಿಸಿ ಪರಿಶೀಲಿಸಿದ ನಂತರ ಅದರಲ್ಲಿ ಭಾಗವಹಿಸದೆ ಇರಲು ತೀರ್ಮಾನಿಸಿದ್ದೇನೆ” ಎಂದು ಹೇಳಿದ್ದಾರೆ.
