ತುಮಕೂರು | ತಲಾದಾಯ ಹೆಚ್ಚಳದಲ್ಲಿ ರಾಜ್ಯ ನಂಬರ್ ಒನ್ : ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

ದೇಶದ ತಲಾದಾಯ(ಜಿಡಿಪಿ) ಹೆಚ್ಚಳದಲ್ಲಿ ಕರ್ನಾಟಕ ರಾಜ್ಯವು ನಂಬರ್ ಒನ್ ಸ್ಥಾನದಲ್ಲಿದೆಯಲ್ಲದೆ, ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿಯೂ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ತುಮಕೂರು ಜಿಲ್ಲಾಡಳಿತದ ವತಿಯಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಭೌತಿಕ ಸವಲತ್ತುಗಳ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲಾ ಸಮುದಾಯದ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ತಲಾದಾಯ ಹೆಚ್ಚಳವಾಗಲು ಸಾಧ್ಯ. ಯಾವುದೇ ದೇಶದ ಅಭಿವೃದ್ಧಿಯು ಹಳ್ಳಿ, ತಾಲ್ಲೂಕು, ಜಿಲ್ಲೆಗಳ ಅಭಿವೃದ್ಧಿಯ ಮೇಲೆ ನಿಂತಿದೆ. ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಎಲ್ಲಾ ಧರ್ಮ, ಎಲ್ಲಾ ಜಾತಿಯ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ತಲಾದಾಯ ಹೆಚ್ಚಳವಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಯಾವುದೇ ಜಾತಿ, ಧರ್ಮ, ಪಕ್ಷ ಬೇಧವಿಲ್ಲದೆ ರಾಜ್ಯದ ಜನತೆಗೆ ಆರ್ಥಿಕ ಶಕ್ತಿ ನೀಡಲು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಸಂವಿಧಾನದ ಆಶಯದಂತೆ ಸಮ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಈ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿದ್ದು, ಎಲ್ಲಾ ವರ್ಗದ ಜನರೂ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಇದರಿಂದ ರಾಜ್ಯದ ಆರ್ಥಿಕತೆಯ ವೇಗವೂ ಹೆಚ್ಚಾಗಿದೆ ಎಂದು ತಿಳಿಸಿದರು.  

1000727870

ಕಳೆದ ಜನವರಿ ಮಾಹೆಯಲ್ಲಿ ಇದೇ ವೇದಿಕೆಯಲ್ಲಿ 697 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ವಿವಿಧ ಯೋಜನೆಗಳಲ್ಲಿ 30,000 ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಗಿತ್ತು. ಇಂದು ಈ ವೇದಿಕೆಯಿಂದ 1250 ಕೋಟಿ ರೂ.ಗಳಿಗೂ ಹೆಚ್ಚಿನ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ 1.50 ಲಕ್ಷ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸುತ್ತಿರುವುದು ನನಗೆ ಸಂತಸ ತಂದಿದೆ. ಗ್ಯಾರಂಟಿ ಯೋಜನೆಗಳ ಅನುಷ್ಟಾನದಿಂದ ಅಭಿವೃದ್ಧಿ ಕಾಮಗಾರಿಗೆ ಹಣವಿಲ್ಲವೆಂದು ಟೀಕಿಸುವವರಿಗೆ ಇಂತಹ ಕಾರ್ಯಕ್ರಮಗಳು ಉತ್ತರವಾಗಲಿದೆ ಎಂದರು.

Advertisements

ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ಕೊಡುತ್ತಲೇ ಬಂದಿದೆ. ಅಲ್ಲದೆ, ಹಿಂದುಳಿದವರ, ದುರ್ಬಲರ ಏಳಿಗೆಗೆ ವಿಶೇಷ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಪ.ಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯನ್ನು ಜಾರಿ ಮಾಡಲಾಗಿದೆ. ಈ ಯೋಜನೆಗಳನ್ನು ರಾಜ್ಯದಲ್ಲಿ ಮಾತ್ರ ಅನುಷ್ಟಾನ ಮಾಡಲಾಗಿದೆ ಎಂದು ತಿಳಿಸಿದರಲ್ಲದೆ, ನಮ್ಮ ಸರ್ಕಾರ ಮಹಿಳೆಯರು, ಎಲ್ಲಾ ಜಾತಿ ಹಾಗೂ ಧರ್ಮ, ಬಡವರ, ಹಿಂದುಳಿದವರ, ದಲಿತರ ಪರವಾಗಿರುವ ಸರ್ಕಾರ ಎಂದರು.

1000727944

ಇತರೆ ಜಿಲ್ಲೆಗಳಲ್ಲಿಯೂ ಜನ ಕಲ್ಯಾಣ ಕಾರ್ಯಕ್ರಮ :

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ನಮ್ಮ ಸರ್ಕಾರದ ಸಾಧನೆಗೆ ನೆರೆದಿರುವ ಜನಸ್ತೋಮವೇ ಸಾಕ್ಷಿ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಗ್ರಾಮ ಪಂಚಾಯತಿಯಿAದ ಎಲ್ಲಾ ಇಲಾಖೆ, ನಿಗಮ, ಮಂಡಳಿಗಳು ಸಾವಿರಾರು ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡುತ್ತಿರುವುದು ಸರ್ಕಾರಕ್ಕೆ ಸಂತಸ ತಂದಿದೆ. ಇಂತಹ ಜನಕಲ್ಯಾಣ ಕಾರ್ಯಕ್ರಮಗಳು ಇತರೆ ಜಿಲ್ಲೆಗಳಲ್ಲಿಯೂ ಆಯೋಜಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.  

1000727919

ಕ್ರಾಂತಿಯೋಗಿ ಬಸವಣ್ಣ, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಕರ್ಮಭೂಮಿಯಾದ ರಾಜ್ಯದ ಅಭಿವೃದ್ಧಿಗೆ ಗ್ಯಾರಂಟಿ ಯೋಜನೆಗಳು ಶಕ್ತಿ ನೀಡಿದೆ. ಸರ್ಕಾರ ಅಧಿಕಾರಕ್ಕೆ ಬಂದಾಗ ಹತ್ತಾರು ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಭೂಸ್ವಾಧೀನ, ಹಕ್ಕುಪತ್ರ ವಿತರಣೆ ಸಾಧನೆ ಮಾಡಿದ ಕಂದಾಯ ಇಲಾಖೆಗೆ ಅಭಿನಂದನೆ ತಿಳಿಸಿದರಲ್ಲದೆ, ಜಿಲ್ಲೆಗೆ ಕುಡಿಯುವ ನೀರು ಒದಗಿಸಲು ನೀರಾವರಿ ಯೋಜನೆಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು. ಜಿಲ್ಲೆಯ 7 ಶಾಸಕರನ್ನು ಆಯ್ಕೆ ಮಾಡಿ ಸರ್ಕಾರದ ಅಭ್ಯುದಯಕ್ಕೆ ಕಾರಣರಾಗಿ ಆಡಳಿತವನ್ನು ಮುನ್ನೆಡೆಸಲು ಶಕ್ತಿ ನೀಡಿದ ಈ ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಸರ್ಕಾರ ಬದ್ಧವಾಗಿದೆ. ಜನರು ನಮ್ಮ ಸರ್ಕಾರವನ್ನು ನಂಬಿ ಗೆಲ್ಲಿಸಿದ್ದಾರೆ. ಜನರ ನಂಬಿಕೆಯನ್ನು ಹುಸಿ ಮಾಡುವುದಿಲ್ಲವೆಂದು ಭರವಸೆ ನೀಡಿದರು. 

1000727941

ಟೀಕಾಕಾರರಿಗೆ ಉತ್ತರ ನೀಡುತ್ತೇವೆ :

ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಾತನಾಡಿ, ಜಿಲ್ಲೆಯ ರೈತರ, ಬಡವರ, ದೀನದಲಿತರ ಅಭ್ಯುದಯಕ್ಕಾಗಿ ಏರ್ಪಡಿಸಿರುವ ಜಿಲ್ಲೆಯ ಈ ಕಾರ್ಯಕ್ರಮ ಇತರೆ ಜಿಲ್ಲೆಗಳಿಗೆ ಮಾದರಿಯಾಗಿದೆ. ಬಡವರ ಹಸಿವನ್ನು ನೀಗಿಸುವ ಮನಸ್ಥಿತಿ ನಮ್ಮ ಸರ್ಕಾರಕ್ಕಿದೆ. ಬಡವರ ಪರವಾಗಿರುವ ಈ ಸರ್ಕಾರ ನುಡಿದಂತೆ ನಡೆದಿದೆ. ಗ್ಯಾರಂಟಿ ಯೋಜನೆಗಳ ಜಾರಿಯಿಂದ ಸರ್ಕಾರ ನಡೆಸಲು ಸಾಧ್ಯವಿಲ್ಲವೆಂಬ ಟೀಕಾಕಾರರ ಮಾತುಗಳಿಗೆ ಬೀಗ ಹಾಕಿದಂತಾಗಿದೆ. ಯಾವುದೇ ಸರ್ಕಾರ ಇಂತಹ ಆಡಳಿತ ನೀಡಿಲ್ಲ. ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ಇಂತಹ ಕಾರ್ಯಕ್ರಮ ಆಯೋಜಿಸುವ ಮೂಲಕ ಟೀಕಾಕಾರರಿಗೆ ಉತ್ತರ ನೀಡುತ್ತೇವೆ ಎಂದು ತಿಳಿಸಿದರು.

 

1000727940

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಶ್ರೀನಿವಾಸ್, ಶಾಸಕರಾದ ಜಿ.ಬಿ.ಜ್ಯೋತಿಗಣೆಶ್, ಬಿ.ಸುರೇಶ್‌ಗೌಡ, ಹೆಚ್.ವಿ.ವೆಂಕಟೇಶ್, ಕೆ.ಷಡಕ್ಷರಿ, ಎಂ.ಟಿ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಡಿ.ಟಿ.ಶ್ರೀನಿವಾಸ್, ಸಿ.ಬಿ. ಸುರೇಶ್ ಬಾಬು, ಆರ್.ರಾಜೇಂದ್ರ, ಚಿದಾನಂದ ಎಂ.ಗೌಡ, ಮಾಜಿ ಕೇಂದ್ರ ವಲಯ ಐಜಿಪಿ ಲಾಭೂ ರಾಮ್ ಹಾಗೂ ಕೃಷಿ ಆಯುಕ್ತ ವೈ.ಎಸ್.ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಅಧ್ಯಕ್ಷ ಚಂದ್ರಶೇಖರ್, ಸರ್ಕಾರದ ಉನ್ನತ ಅಧಿಕಾರಿಗಳು, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಮಹಾನಗರಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಸೇರಿದಂತೆ ಮತ್ತಿತರ ಅಧಿಕಾರಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X