ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ‘ಬಹುಸಂಸ್ಕೃತಿ ಉತ್ಸವ’ ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ಜಿಲ್ಲಾಡಳಿತದ ಪ್ರಕಟಣೆಯಲ್ಲಿ ತಿಳಿಸಿದೆ.
“ಮಂಗಳೂರಿನ ಪುರಭವನದಲ್ಲಿ ಡಿಸೆಂಬರ್ 3 ಮತ್ತು 4ರಂದು ಹಮ್ಮಿಕೊಂಡಿದ್ದ “ಬಹುಸಂಸ್ಕೃತಿ ಉತ್ಸವ’ ಕಾರ್ಯಕ್ರಮವನ್ನು ಫೆಂಗಲ್ ಚಂಡಮಾರುತದಂತಹ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಮುನ್ನೂಡಲಾಗಿದೆ” ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದೆ.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಂವಿಧಾನ ವಿರೋಧಿ, ದ್ವೇಷ ಭಾಷಣ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮಕ್ಕೆ ಹಲವು ಸಂಘಟನೆಗಳ ಆಗ್ರಹ
ಸುವರ್ಣ ಕರ್ನಾಟಕ ಸಂಭ್ರಮದ ಭಾಗವಾಗಿ, ಕರ್ನಾಟಕ ತುಳು ಸಾಹಿತ್ಯ ಅಕಾಡಮಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ, ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿ ಹಾಗೂ ಕರ್ನಾಟಕ ಯಕ್ಷಗಾನ ಅಕಾಡಮಿಗಳು ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲಾಡಳಿತ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ “ಬಹುಸಂಸ್ಕೃತಿ ಉತ್ಸವ’ ಕಾರ್ಯಕ್ರಮ ಆಯೋಜಿಸಲಾಗಿದ್ದು, ಹವಾಮಾನ ವೈಪರೀತ್ಯದ ಕಾರಣದಿಂದ ಮುಂದಾಡಲಾಗಿದೆ.