ಬಾಟಲ್ ನೀರು ʼಅಧಿಕ ಅಪಾಯದ ಆಹಾರ ವರ್ಗʼ: FSSAI ಘೋಷಣೆ

Date:

Advertisements

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಪ್ಯಾಕೇಜ್ ಮಾಡಲಾದ ಕುಡಿಯುವ ಮಿನರಲ್ ವಾಟರ್ ಮತ್ತು ಖನಿಜಯುಕ್ತ ನೀರನ್ನು ʼಹೆಚ್ಚಿನ ಅಪಾಯದ ಆಹಾರ ವರ್ಗʼ ಎಂದು ಪರಿಗಣಿಸಿದ್ದು, ವಾರ್ಷಿಕ ತಪಾಸಣೆಗಳನ್ನು ಕಡ್ಡಾಯಗೊಳಿಸಿದೆ.

ಪ್ಯಾಕ್ ಮಾಡಲಾದ ಕುಡಿಯುವ ಮತ್ತು ಖನಿಜಯುಕ್ತ ನೀರಿನ ಉದ್ಯಮಕ್ಕಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್‌ ನಿಂದ ಪ್ರಮಾಣೀಕರಣ ಪಡೆಯಬೇಕಾದ ಕಡ್ಡಾಯ ಷರತ್ತನ್ನು ತೆಗೆದು ಹಾಕಲು ಸರ್ಕಾರ ತೀರ್ಮಾನ ಮಾಡಿತ್ತು. ಇದರಿಂದ ಕೆಲವು ಉತ್ಪನ್ನಗಳಿಗೆ ಕಡ್ಡಾಯ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಪ್ರಮಾಣೀಕರಣ ಅಗತ್ಯವಾಗಿಲ್ಲದ ಕಾರಣ, ‘ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಮತ್ತು ಮಿನರಲ್ ವಾಟರ್’ ಅನ್ನು ‘ಅಧಿಕ ಅಪಾಯದ ಆಹಾರ ವರ್ಗಗಳ’ ಅಡಿಯಲ್ಲಿ ಪರಿಗಣಿಸಲಾಗುತ್ತದೆ’ ಎಂದು FSSAI ಆದೇಶದಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಬ್ಬರು ಕರೆ ಕೊಡುವುದು, ಇನ್ನೊಬ್ಬರು ಗೇಲಿ ಮಾಡುವುದು, ಏನಿದು ಮಕ್ಕಳಾಟ?

Advertisements

ಪ್ಯಾಕೇಜ್ ಮಾಡಲಾದ ಕುಡಿಯುವ ನೀರನ್ನು ʼಹೆಚ್ಚಿನ ಅಪಾಯದ ಆಹಾರ ವರ್ಗʼ ಎಂದು ಘೋಷಿಸಿದ FSSAI ಗ್ರಾಹಕರ ರಕ್ಷಣೆ ಮತ್ತು ಪ್ಯಾಕೇಜ್ ಮಾಡಿದ ನೀರಿನ ಉದ್ಯಮದಲ್ಲಿ ಗುಣಮಟ್ಟ ಕಾಪಾಡಲು ಈ ಆದೇಶ ನೀಡಲಾಗಿದೆ ಎನ್ನಲಾಗಿದೆ. ʼʼಹೆಚ್ಚಿನ ಅಪಾಯದ ಆಹಾರ ವರ್ಗʼದ ಅಡಿಯಲ್ಲಿ ಬರುವ ಆಹಾರ ಉತ್ಪನ್ನಗಳನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಲಾಗುತ್ತದೆ. ಪ್ಯಾಕೇಜ್ಡ್ ಕುಡಿಯುವ ನೀರು ಮತ್ತು ಖನಿಜಯುಕ್ತ ನೀರಿನ ತಯಾರಕರು ಪ್ರತಿ ವರ್ಷಕ್ಕೊಮ್ಮೆ ಅಪಾಯ ಆಧಾರಿತ ತಪಾಸಣೆಗೆ ಒಳಗಾಗುತ್ತಾರೆ. ಪರವಾನಗಿ ಅಥವಾ ನೋಂದಣಿಯನ್ನು ನೀಡುವ ಮೊದಲು ಕೂಡ ತಪಾಸಣೆ ನಡೆಸಲಾಗುತ್ತದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X