ಸೋತಿದ್ದೇವೆ ಎಂದು ಧೈರ್ಯ ಕಳೆದುಕೊಳ್ಳದೇ ಜನರ ಜತೆ ನಿಂತು ಕೆಲಸ ಮಾಡೋಣ: ಹೆಚ್‌ ಡಿ ದೇವೇಗೌಡ

Date:

Advertisements
  • 19 ಸೀಟು ಗೆದ್ದಿದ್ದೇವೆ ಎಂಬ ಆತಂಕದಲ್ಲೇ ಕುಳಿತುಕೊಳ್ಳಬೇಡಿ: ಕಿವಿಮಾತು
  • ಮುಂದಿನ ಚುನಾವಣೆಯಲ್ಲಿ 119 ಸೀಟು ಗೆಲ್ಲುವ ದಿಕ್ಕಿನತ್ತ ಕೆಲಸ ಮಾಡೋಣ

“ಸೋತಿದ್ದೇವೆ ಎಂದು ಯಾರೂ ಧೈರ್ಯ ಕಳೆದುಕೊಳ್ಳಬೇಡಿ. ಚುನಾವಣೆಯಲ್ಲಿ ಸೋಲು ಗೆಲವು ಸಾಮಾನ್ಯ. ನಾವು ಎಲ್ಲಿ ತಪ್ಪು ಮಾಡಿದ್ದೇವೆ ಎಂಬುದನ್ನು ಅರ್ಥ ಮಾಡಿಕೊಳ್ಳೋಣ. ಜನರ ಜತೆ ನಿಂತು ಕೆಲಸ ಮಾಡೋಣ. ಪ್ರಾಮಾಣಿಕತೆ, ಬದ್ಧತೆ, ಅಚಲತೆಯಿಂದ ದುಡಿದರೆ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಕಷ್ಟವಲ್ಲ” ಎಂದು ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಹೇಳಿದರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಬುಧವಾರ ಕರೆದಿದ್ದ ಸಭೆಯಲ್ಲಿ ಪಕ್ಷದ ನೂತನ ಶಾಸಕರಿಗೆ ಧೈರ್ಯ ತುಂಬಿ ಮಾತನಾಡಿದರು.

‘ಸದನದಲ್ಲಿ ಸಂಖ್ಯಾಬಲ ಕಡಿಮೆ ಇದೆ ಎಂದು ಎದೆಗುಂದಬೇಡಿ. ಹಿಂದಿನ ಲೋಕಸಭೆಯಲ್ಲೂ ನಾನು ನಮ್ಮ ಪಕ್ಷದ ಪರವಾಗಿ ಒಬ್ಬನೇ ಇದ್ದೆ. ಈಗಲೂ ನಮಗೆ ಒಬ್ಬರೇ ಸದಸ್ಯರಿದ್ದಾರೆ. ಹಾಗಂತ ನಮ್ಮ ಹೋರಾಟದ ಕಿಚ್ಚು ಕಡಿಮೆ ಆಗಿದೆಯಾ?’ ಎಂದರು.

Advertisements

“19 ಸೀಟು ಗೆದ್ದಿದ್ದೇವೆ ಎಂಬ ಆತಂಕದಲ್ಲೇ ಕುಳಿತುಕೊಳ್ಳಬೇಡಿ. ಮುಂದಿನ ಚುನಾವಣೆಯಲ್ಲಿ 119 ಸೀಟು ಗೆಲ್ಲುವ ದಿಕ್ಕಿನತ್ತ ಕೆಲಸ ಮಾಡೋಣ. ನಾನು ಬದುಕಿರುವ ತನಕ ಪಕ್ಷಕ್ಕಾಗಿ ದುಡಿಯುತ್ತೇನೆ” ಎಂದು ಹೇಳಿದರು.

“ವಿವಿಧ ಚುನಾವಣೆಗಳು ನಮ್ಮ ಮುಂದಿವೆ. ಲೋಕಸಭೆ ಚುನಾವಣೆ ಕೂಡ ಬರುತ್ತದೆ. ಈಗಿನಿಂದಲೇ ನಾವು ತಯಾರಾಗಬೇಕು. ನಿಮ್ಮ ಜತೆ ನಾನು, ಕುಮಾರಸ್ವಾಮಿ ಇರುತ್ತೇವೆ. ಹೆದರಿ ಹಿಂದೆ ಸರಿಯುವ ಪ್ರಶ್ನೆ ಇಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು: ಅಂಡರ್‌ಪಾಸ್, ಫ್ಲೈಓವರ್, ರಸ್ತೆ ಗುಂಡಿ; ಹೆಜ್ಜೆ ಹೆಜ್ಜೆಗೂ ಕಾಡುವ ಸಾವು!

“ಚುನಾವಣೆಯಲ್ಲಿ ನಾನು ಕೂಡ ಸೋಲು-ಗೆಲುವು ಕಂಡಿರುವೆ. ಸೋತಾಗ ಹೆದರಿ ಮನೆ ಸೇರಿಕೊಂಡಿಲ್ಲ, ಗೆದ್ದಾಗ ಬೀಗಿಲ್ಲ. ಎಲ್ಲ ಸಮಯದಲ್ಲೂ ಶ್ರದ್ಧೆ, ವಿನಯದಿಂದ ಜನರ ಕೆಲಸ ಮಾಡಿದ್ದೇನೆ” ಎಂದು ತಿಳಿಸಿದರು.

“1962ರಲ್ಲಿ ಪಕ್ಷೇತರ ಶಾಸಕನಾಗಿ ಗೆದ್ದುಬಂದು ಈ ನೆಲ ಜಲಕ್ಕಾಗಿ ಹೋರಾಟ ನಡೆಸಿದವನು ನಾನು. ಒಬ್ಬನೇ ಶಾಸಕ ಎಂದು ನಾನು ಕೈಕಟ್ಟಿ ಕೂತಿದ್ದರೆ ಕಾವೇರಿ ನೀರಿನ ಸದ್ಬಳಕೆ ಸಾಧ್ಯ ಆಗುತ್ತಿತ್ತಾ? ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳು ತಲೆ ಎತ್ತುತ್ತಿದ್ದವಾ? ಮನಸ್ಸಿಟ್ಟು ಯೋಚನೆ ಮಾಡಿ” ಎಂದು ಹುರಿದುಂಬಿಸಿದರು.

ಎಚ್‌ ಡಿ ಕುಮಾರಸ್ವಾಮಿ, ಸಿಎಂ ಇಬ್ರಾಹಿಂ, ಜಿ ಟಿ ದೇವೇಗೌಡ, ಟಿ ಎ ಶರವಣ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X