ಕಲಬುರಗಿ | ಮಕ್ಕಳ ಮೇಲೆ ದೌರ್ಜನ್ಯ, ಹಲ್ಲೆ; ಕಾನ್‌ಸ್ಟೆಬಲ್ ವಿರುದ್ಧ ಪ್ರಕರಣ ದಾಖಲು

Date:

Advertisements

ತನ್ನ ಇಬ್ಬರು ಅಪ್ರಾಪ್ತ ವಯಸ್ಸಿನ ಗಂಡು ಮಕ್ಕಳ ಮೇಲೆ ಪತಿ ದೌರ್ಜನ್ಯ ಎಸಗುತ್ತಿದ್ದು, ಹಲ್ಲೆ ನಡೆಸುತ್ತಿದ್ದಾರೆಂದು ಆರೋಪಿಸಿ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಕಲಬುರಗಿಯ ವಿಶ್ವವಿದ್ಯಾಲಯ ಪೊಲೀಸರು ಡಿಎಆರ್ ಕಾನ್‌ಸ್ಟೆಬಲ್ ತಾರಾಸಿಂಗ್‌ ರಾಠೋಡ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

“ಪತಿ ತಾರಾಸಿಂಗ್ 16 ಮತ್ತು 12 ವಯೋಮಾನದ ಗಂಡುಮಕ್ಕಳ ಮೇಲೆ ಹಲ್ಲೆ ಮಾಡಿ, ಅಸಭ್ಯವಾಗಿ ವರ್ತಿಸುತ್ತಿದ್ದರು. ನಮ್ಮ ನಡುವೆ ಇರಬೇಕಿದ್ದ ಖಾಸಗಿತನವನ್ನು ಮಕ್ಕಳೂ ನೋಡುವಂತೆ ಒತ್ತಾಯಿಸುತ್ತಾರೆ. ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಮನೆಯಲ್ಲಿ ಅಸುರಕ್ಷಿತ ಹಾಗೂ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಅಕ್ರಮ ಚಟುವಟಿಕೆ ತಾಣವಾದ ಇಂದಿರಾ ಕ್ಯಾಂಟಿನ್; ಅಧಿಕಾರಿಗಳ ನಿರ್ಲಕ್ಷ್ಯ

Advertisements

“ಪತಿಯ ವರ್ತನೆ ತೀವ್ರ ಆಘಾತವನ್ನುಂಟು ಮಾಡಿದೆ. ಹಿರಿಯ ಪುತ್ರನಿಗೆ ಶಾಲೆಗೆ ಹೋಗಲು ಬಿಡುತ್ತಿಲ್ಲ. ಇದೀಗ ಆತ ಶಿಕ್ಷಣದಿಂದ ವಂಚಿತವಾಗಿದ್ದೇನೆ. ಹೀಗಾಗಿ ಪತಿ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ನನಗೆ ಹಾಗೂ ಮಕ್ಕಳಿಗೆ ರಕ್ಷಣೆ ನೀಡಬೇಕು” ಎಂದು ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X