ನಾಗಮಂಗಲ | ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ವೆಂಕಟೇಶ್ ವಿರುದ್ಧ ತನಿಖೆಗೆ ಆದೇಶ

Date:

Advertisements

ಮಂಡ್ಯ ಜಿಲ್ಲೆಯ ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಡಾ.ವೆಂಕಟೇಶ್ ವಿರುದ್ದ ಕೇಳಿ ಬಂದಿರುವ ಹಣ ದುರುಪಯೋಗದ ದೂರುಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ತಂಡವನ್ನು ರಚಿಸಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

IMG 20241203 201003 1

ನಿಕಟಪೂರ್ವ ಆಡಳಿತ ವೈದ್ಯಾಧಿಕಾರಿ ಮತ್ತು ಹಾಲಿ ನಾಗಮಂಗಲ ಸಾರ್ವಜನಿಕ ಆಸ್ಪತ್ರೆ ಕೀಲು ಮೂಳೆ ತಜ್ಞ ಕಳೆದ 2 ವರ್ಷಗಳಿಂದ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿದ್ದ ಅವಧಿಯಲ್ಲಿ ಆರೋಗ್ಯ ರಕ್ಷಾ ಸಮಿತಿ ಹಾಗೂ ಆಯುಷ್ಮಾನ್ ಯೋಜನೆಗಳ ಹಣ ದುರುಪಯೋಗಪಡಿಸಿಕೊಂಡಿರುವ ಬಗ್ಗೆ ತನಿಖೆ ನಡೆಸಿ ಸ್ಪಷ್ಟ ಅಭಿಪ್ರಾಯದೊಂದಿಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ.

ಇದನ್ನು ಓದಿದ್ದೀರಾ? ಕೃಷ್ಣರಾಜಪೇಟೆ | ಡಿ.4ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

Advertisements

ಮಂಡ್ಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್ ಹೆಚ್, ಜಿಲ್ಲಾ ಕುಟುಂಬ ನಿಯಂತ್ರಣಾಧಿಕಾರಿ ಡಾ.ಸೋಮಶೇಖರ್ ಎಂ.ಸಿ., ಡಿಎಚ್ಒ ಕಚೇರಿ ಅಧೀಕ್ಷಕ ಸುರೇಶ್ ಬಾಬು, ಪ್ರಥಮ ದರ್ಜೆ ಸಹಾಯಕರಾದ ಶಂಕರ್, ರವೀಶ್ ಹಾಗೂ ಜಿಆರ್‌ಸಿಎಚ್ ಅಧಿಕಾರಿಗಳ ಕಚೇರಿಯ ಸೋಮಶೇಖರ್ ಅವರನ್ನೊಳಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತನಿಖಾ ತಂಡವನ್ನು ರಚಿಸಲಾಗಿದೆ.

ಇದನ್ನು ನೋಡಿದ್ದೀರಾ? ಮಂಡ್ಯ | ಕನ್ನಂಬಾಡಿ ಕಟ್ಟಿದ ತಮಿಳರ ಎತ್ತಂಗಡಿ?

ನಾಗಮಂಗಲ ತಾಲೂಕು ಆಸ್ಪತ್ರೆಯಲ್ಲಿ ಎಬಿಆರ್‌ಕೆ ಮತ್ತು ಆರೋಗ್ಯ ರಕ್ಷಾ ನಿಧಿ ದುರ್ಬಳಕೆ ಮಾಡಿಕೊಂಡಿರುವ ಕುರಿತು ಕಳೆದ ನವೆಂಬರ್‌ 29ರಂದು ಕರುನಾಡ ಸೇವಕರು ಸಂಘಟನೆಯ ಮೈಸೂರು ವಿಭಾಗೀಯ ಅಧ್ಯಕ್ಷ ಎಂ ಬಿ ನಾಗಣ್ಣಗೌಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ದೂರು ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಡಿಎಚ್‌ಒ ಡಾ.ಮೋಹನ್ ಅಕ್ರಮಗಳ ತನಿಖೆಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತನಿಖಾ ತಂಡ ರಚಿಸಿ ಆದೇಶ ಹೊರಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X