ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆಯಾಗಿದ್ದು ನಾಳೆ (ಡಿಸೆಂಬರ್ 5) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.
ಇನ್ನು ಇಂದು ಮುಂಬೈನಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ನಾಯಕರಾಗಿಯೂ ದೇವೇಂದ್ರ ಫಡ್ನವೀಸ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಬೇರೆ ಯಾರ ಹೆಸರೂ ಕೂಡಾ ಪ್ರಸ್ತಾಪಿಸಲಾಗಿಲ್ಲ ಎಂದು ವರದಿಯಾಗಿದೆ.
VIDEO | Maharashtra: The name of Devendra Fadnavis was proposed for the party leader (Maharashtra CM) during BJP legislature party meeting being held in Mumbai.#MaharshtraCM #DevendraFadnavis pic.twitter.com/0rm9PjZ2g8
— Press Trust of India (@PTI_News) December 4, 2024
ಬುಧವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಇನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಫಡ್ನವೀಸ್ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಉಪಸ್ಥಿತರಿದ್ದರು ಎಂದು ಹೇಳಲಾಗಿದೆ.

ಶಿಂಧೆ ಮತ್ತು ಪವಾರನ ಅಂ ಸಂಸ್ಕಾರ ಮಾಡಿದರು,,, ನಕಲಿ ರಾಷ್ಟ್ರವಾದಿಗಳ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಎಲ್ಲಾ ಪ್ರಾದೇಶಿಕ ಪಕ್ಷಗಳು ಬಹುತೇಕ ಕೊನೆಗಳೊಳಿಸುವರು,, ತಾತ್ಕಾಲಿಕ ಅಧಿಕಾರಕ್ಕಾಗಿ ತಮ್ಮನ್ನು ತಾವೇ ಬಲಿಕೊಟ್ಟುಕೊಳ್ಳುವ ಪ್ರಾದೇಶಿಕ ಪಕ್ಷಗಳು