ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಹಿಂದೂಪರ ಸಂಘಟನೆಗಳಿಂದ ನಡೆದ ಪ್ರತಿಭಟನೆಯಲ್ಲಿ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳನ್ನು ಬಳಸಿಕೊಂಡಿದ್ದು ಖಂಡನೀಯ ಎಂದು ಪ್ರಗತಿಪರ ಚಿಂತಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
“ಬಾಂಗ್ಲಾ ದೇಶದಲ್ಲಿ ಇಸ್ಕಾನ್ ದೇವಾಲಯ, ಹಿಂದೂ ಧರ್ಮಗುರು ಚಿನ್ಮಯಕೃಷ್ಣ ದಾಸ್ ಸ್ವಾಮೀಜಿಯನ್ನು ಬಂಧಿಸಿದ್ದನ್ನು ವಿರೋಧಿಸಿ ಕೈಗೊಂಡ ಪ್ರತಿಭಟನೆಯಲ್ಲಿ ವಿವಿಧ ಸ್ವಾಮೀಜಿಗಳು, ಹಿಂದೂಪರ ಸಂಘಟನೆಗಳ ಮುಖಂಡರು, ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಆದರೆ ಡಾ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಕೆಲ ಕಾಲ ರಸ್ತೆ ಸಂಚಾರಕ್ಕೆ ಸಮಸ್ಯೆಯಾಗಿದ್ದಲ್ಲದೇ ವಿದ್ಯಾರ್ಥಿನಿಯರನ್ನು ಸುಡು ಬಿಸಿಲಿನಲ್ಲಿ ಕೂರಿಸಿ ರಾಜಕೀಯವಾಗಿ, ಹಿಂದೂಗಳ ಪರವಾಗಿ ಬಳಸಿಕೊಂಡು ಅಮಾಯಕತನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ” ಎಂದು ಪ್ರಗತಿಪರ ಸಂಘಟನೆಗಳ ಮುಖಂಡರು ಆಕ್ರೋಶ ಹೊರಹಾಕಿದರು.
ಈ ಸುದ್ದಿ ಓದಿದ್ದೀರಾ? ತುಮಕೂರು | ನಿರಾಶ್ರಿತ ಮಹಿಳೆ ರಾಬಿಯಾಗೆ ಒಂದೇ ದಿನದಲ್ಲಿ ನಿವೇಶನ ನೀಡಲು ಜಿಲ್ಲಾಡಳಿತದಿಂದ ಠರಾವು
“ಸ್ಥಳೀಯ ಪಶ್ಚಿಮ ಪೊಲೀಸ್ ಠಾಣೆಯ ಪೊಲೀಸರು ಸ್ಥಳದಲ್ಲಿದ್ಧರೂ ಮೂಕಪ್ರೇಕ್ಷಕರಾಗಿದ್ದರು” ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಬಳಸಿಕೊಂಡಿದ್ದಕ್ಕೆ ಭಾರತೀಯ ಕ್ರಾಂತಿಕಾರಿ ಯುವಜನ ಒಕ್ಕೂಟದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ದಲಿತಪರ ಸಂಘಟನೆಗಳು, ಅಜೀಜ ಜಾಗೀರದಾರ್, ರವಿಚಂದ್ರ ಪರಶುರಾಮ ಅರೋಲಿ ಈ ನಡೆಯನ್ನು ಖಂಡಿಸಿದರು.
