ಅಪರಿಚಿತ ವಾಹನವೊಂದು ತಾಯಿ-ಮಗುವಿಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ‘ಹಿಟ್ ಆ್ಯಂಡ್ ರನ್’ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯಲ್ಲಿ ತಾಯಿ ಮೃತಪಟ್ಟಿದ್ದು, ಮಗುವಿನ ಸ್ಥಿತಿ ಗಂಭೀರವಾಗಿದೆ.
ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ನಂದಿಮೋರಿ ಎಂಬಲ್ಲಿ ದುರ್ಘಟನೆ ನಡೆದಿದೆ. ಘಟನೆಯಲ್ಲಿ ದೊಡ್ಡಬಳ್ಳಾಪುರದ ಪಾಲನಜೋಗಹಳ್ಳಿ ನಿವಾಸಿ ಭಾನುಪ್ರಿಯ (25) ಮೃತಪಟ್ಟಿದ್ದಾರೆ. ಅವರ ಪುತ್ರ ಮನೋಜ್ (4) ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಾಲೆಗೆ ತೆರಳಿದ್ದ ಮಗುವನ್ನು ಮನೆಗೆ ವಾಪಸ್ ಕರೆದೊಯ್ಯುವಾಗ ದುರ್ಘಟನೆ ನಡೆದಿದೆ. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ರಕ್ತ ಸಾವ್ರದಿಂದ ಭಾನುಪ್ರಿಯ ಸಾವನ್ನಪ್ಪಿದ್ದಾರೆ. ಮಗುವಿನ ತಲೆಗೆ ಗಂಭೀರ ಗಾಯವಾಗಿದ್ದು, ಬೆಂಗಳೂರಿನ ಆಸ್ವತ್ರೆಗೆ ದಾಖಲಿಸಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.