ಅಪಘಾತದಲ್ಲಿ ಗಾಯಗೊಂಡು ಬೀದರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಮೃತಪಟ್ಟಿದ್ದಾನೆ.
ಔರಾದ್ ತಾಲೂಕಿನ ಜೀರ್ಗಾ(ಬಿ) ಗ್ರಾಮದ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿಕಾಸ ಸೋಪಾನ (14) ಮೃತ ವಿದ್ಯಾರ್ಥಿ.
ನವೆಂಬರ್ 26 ರಂದು ಬೆಳಿಗ್ಗೆ ಬೀದರ್ – ಔರಾದ್ ರಾಷ್ಟ್ರೀಯ ಹೆದ್ದಾರಿ ‘161ಎ’ಯಲ್ಲಿ ಜೀರ್ಗಾ(ಬಿ) ಗ್ರಾಮದ ಬಳಿ ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಗೆ ಔರಾದ ಕಡೆಯಿಂದ ವೇಗವಾಗಿ ಚಲಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿ 10 ಅಡಿ ಹಾರಿ ಬಿದಿದ್ದರು.
ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಜೀರ್ಗಾ(ಬಿ) ಗ್ರಾಮದ ರಾಷ್ಟ್ರೀಯ ಹೆದ್ದಾರಿ 161ಎ ಯಲ್ಲಿ ಮಂಗಳವಾರ ಬೆಳಗ್ಗೆ 9 ಸುಮಾರಿಗೆ ವಿದ್ಯಾರ್ಥಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಪರಿಣಾಮ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ವಿಕಾಸ ಸೋಪಾನ (14) ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ. ಸಿಸಿಟಿವಿಯಲ್ಲಿ ದೃಶ್ಯ ಸೆರೆ. pic.twitter.com/2ZKddUlYk1
— eedina.com ಈ ದಿನ.ಕಾಮ್ (@eedinanews) November 26, 2024
ಅಪಘಾತದಲ್ಲಿ ತೀವ್ರ ಗಾಯಗೊಂಡ ವಿದ್ಯಾರ್ಥಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೀದರ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮಧ್ಯಾಹ್ನ ಸಾವನಪ್ಪಿದ್ದಾನೆ. ಮೃತದೇಹ ಮರಣೋತ್ತರ ಪರೀಕ್ಷೆಗೆ ಬ್ರಿಮ್ಸ್‌ಗೆ ರವಾನಿಸಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ, ವಿದ್ಯಾರ್ಥಿಗೆ ಗಂಭೀರ ಗಾಯ; ಗ್ರಾಮಸ್ಥರ ಪ್ರತಿಭಟನೆ
ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.