ಬಾಣಂತಿಯರ ಸಾವು ಪ್ರಕರಣ: ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ

Date:

Advertisements

ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗಿರಬಹುದಾದ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ರಾಜ್ಯದ ಔಷಧಿ ನಿಯಂತ್ರಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಐವಿ ದ್ರಾವಣದ 22 ಬ್ಯಾಚ್‌ಗಳು ಅತ್ಯುನ್ನತ ಗುಣಮಟ್ಟ ಹೊಂದಿಲ್ಲ ಎಂಬ ವರದಿ ಹಿನ್ನೆಲೆಯಲ್ಲಿ ಕಂಪನಿಯ ವಿರುದ್ಧ ಪ್ರಕರಣ ದಾಖಲಿಸಿ ಎಂದು ಸೂಚಿಸಿದರು.

ಈ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದ ಅಧಿಕಾರಿಗಳು, ರಾಜ್ಯದ ಔಷಧ ನಿಯಂತ್ರಣ ನೀಡಿದ 22 ಬ್ಯಾಚ್ ಗಳ NSQ ವರದಿಯಲ್ಲಿ 13 ಬ್ಯಾಚ್‌ಗಳ ವರದಿ ಪ್ರಶ್ನಿಸಿ ಕಂಪನಿಯವರು ಕೇಂದ್ರ ಔಷಧ ಪ್ರಯೋಗಾಲಯದ ಮೆಟ್ಟಿಲೇರಿದ್ದಾರೆ. ಅದರಲ್ಲಿ 4 ಬ್ಯಾಚ್‌ಗಳು ಗುಣಮಟ್ಟ ಹೊಂದಿವೆ ಎಂದು ಕೇಂದ್ರ ಔಷಧ ಪ್ರಯೋಗಾಲಯ ವರದಿ ನೀಡಿದೆ. ಅಲ್ಲದೇ 13 ಬ್ಯಾಚ್‌ಗಳ ಬಗ್ಗೆ ಕೇಂದ್ರ ಔಷಧ ಪ್ರಯೋಗಾಲಯದಿಂದ ವರದಿ ಬರಬೇಕಿದೆ ಎಂದು ಸ್ಪಷ್ಟನೆ ನೀಡಿದರು. ಉಳಿದ 9 ಬ್ಯಾಚ್‌ಗಳ ವಿಚಾರವಾಗಿ ಕಂಪನಿಯವರನ್ನು ತನಿಖೆಗೆ ಒಳಪಡಿಸಬಹುದಲ್ಲ ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

Advertisements

ಅಲ್ಲದೇ ರಾಜ್ಯದ ಔಷಧ ನಿಯಂತ್ರಣ ಪರೀಕ್ಷೆಯಲ್ಲಿ NSQ ವರದಿ ಬಂದ ಮೇಲೆ ಕೇಂದ್ರ ಔಷಧ ಪ್ರಯೋಗಾಲಯದಲ್ಲಿ ಹೇಗೆ SQ ವರದಿ ಬರಲು ಸಾಧ್ಯ ಎಂಬುದರ ಕುರಿತು ವಿವರವಾಗಿ ಪರಿಶೀಲಿಸಿ ವರದಿ ನೀಡುವಂತೆ ರಾಜ್ಯ ಔಷಧಿ ನಿಯಂತ್ರಣ ಅಧಿಕಾರಿಗೆ ಸಚಿವರು ಸೂಚನೆ ನೀಡಿದರು. ಸಮಯಕ್ಕೆ ಸರಿಯಾಗಿ ಔಷಧಿಗಳನ್ನು ಸೂಕ್ತ ರೀತಿಯಲ್ಲಿ ಪರೀಕ್ಷೆ ನಡೆಸಿ. ಜನರ ಜೀವದ ಜೊತೆ ಚೆಲ್ಲಾಟ ಆಡಬೇಡಿ. ಜವಾಬ್ದಾರಿಯುತವಾಗಿ ನಡೆದುಕೊಳ್ಳುವಂತೆ ಪರೀಕ್ಷೆ ನಡೆಸುವ ಅಧಿಕಾರಿಗಳಿಗೆ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ತರಾಟೆ ತೆಗೆದುಕೊಂಡರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಬ್ಬರು ಕರೆ ಕೊಡುವುದು, ಇನ್ನೊಬ್ಬರು ಗೇಲಿ ಮಾಡುವುದು, ಏನಿದು ಮಕ್ಕಳಾಟ?

ಬಳ್ಳಾರಿಯಲ್ಲಿ ಬಾಣಂತಿಯರ ಸಾವಿಗೆ ಐವಿ ದ್ರಾವಣ ಕೂಡ ಒಂದು ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ರೀತಿಯ ವರದಿಗಳಿರುವಾಗ ರಾಜ್ಯದ ಔಷಧಿ ನಿಯಂತ್ರಣ ಅಧಿಕಾರಿಗಳು ಏನು ಕ್ರಮ ವಹಿಸಿದ್ದಾರೆ. ಪರೀಕ್ಷೆ ವರದಿಗಳನ್ನು ಶೀಘ್ರದಲ್ಲಿ ಕೊಡಬೇಕು. ಪರೀಕ್ಷೆ ವರದಿಗಳನ್ನು ನೀಡಲು ವಿಳಂಬ ನೀತಿ ಏಕೆ. ಅಲ್ಲದೇ ಕೇಂದ್ರ ಔಷಧ ಪ್ರಯೋಗಾಲಯದಿಂದ ಕೂಡ ಪರೀಕ್ಷೆ ವರದಿಗಳು ಬರುವುದು ವಿಳಂಬವಾಗುತ್ತಿರುವುದು ಏಕೆ. ನಿಮಗೆ ಜವಾಬ್ದಾರಿ ಇಲ್ಲವೇ ಎಂದು ಅಧಿಕಾರಿಗಳ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಗರಂ ಆದರು.

ಐವಿ ರಿಂಗರ್ ಲ್ಯಾಕ್ಟೇಟ್ ನ 192 ಬ್ಯಾಚ್‌ಗಳಲ್ಲಿ ಪರೀಕ್ಷೆಗೆ ಬಾಕಿ ಇರುವ ಬ್ಯಾಚ್‌ಗಳ ವರದಿ ಶೀಘ್ರದಲ್ಲೇ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ತಾಕೀತು ಮಾಡಿದರು. ಅಲ್ಲದೇ NABL ಪ್ರಯೋಗಾಲಯದಲ್ಲಿ 192 ಬ್ಯಾಚ್ ಗಳು ಐವಿ ದ್ರಾವಣ ಪಾಸಿಟಿವ್ ವರದಿ ಬಂದಿದ್ದು ಹೇಗೆ ಎಂದು ಪ್ರಶ್ನಿಸಿದ ಸಚಿವರು ಈ ಬಗ್ಗೆ ಪರಿಶೀಲನೆ ನಡೆಸಿ ಎಂದರು. ರಾಜ್ಯದ ಔಷಧಿ ನಿಯಂತ್ರಣ ನೀಡಿದ ವರದಿಯಲ್ಲಿ 22 ಬ್ಯಾಚ್‌ಗಳು ಅತ್ಯುನ್ನತ ಗುಣಮಟ್ಟ ಹೊಂದಿಲ್ಲ ಎಂದು ವರದಿಯಿದೆ. ಇದರಲ್ಲಿ ಸೆಂಟ್ರಲ್ ಲ್ಯಾಬ್ ನವರು 4 ಬ್ಯಾಚ್‌ಗಳಿಗೆ ಮಾತ್ರ ಗುಣಮಟ್ಟ ಹೊಂದಿದೆ ಎಂದು ವರದಿ ನೀಡಿದ್ದಾರೆ. ಆದರೆ NABL ಪ್ರಯೋಗಾಲಯದವರು 192 ಬ್ಯಾಚ್‌ಗಳು ಅತ್ಯುನ್ನತ ಗುಣಮಟ್ಟ ಹೊಂದಿದೆ ಎಂದು ವರದಿ ನೀಡಿದ್ದಾರೆ. ಇದು ಹೇಗೆ ಸಾಧ್ಯ. ಈ ಬಗ್ಗೆ ಪರಿಶೀಲನೆ ನಡೆಸಿ. ಪ್ರಯೋಗಾಲಯದ ವಿರುದ್ಧ ಪ್ರಕರಣ ದಾಖಲಿಸಿ ಎಂದು ಔಷಧಿ ಸರಬರಾಜು ನಿಗಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X