ದಾವಣಗೆರೆ | ಕೆಚ್ಚೇನಹಳ್ಳಿ ಗ್ರಾ.ಪಂ. ಕಾರ್ಯದರ್ಶಿ ಗಾಯತ್ರಿದೇವಿ ಅಮಾನತಿಗೆ ಆಗ್ರಹ

Date:

Advertisements

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕೆಚ್ಚೇನಹಳ್ಳಿ ಗ್ರಾಮ ಪಂಚಾಯಿತಿಯ ಕರ್ತವ್ಯ ಮತ್ತು ಕಾರ್ಯನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಕಾರ್ಯದರ್ಶಿ ಗಾಯತ್ರಿ ದೇವಿ ಎಂಬುವವರನ್ನು ಕೂಡಲೇ ಬೇರೆಡೆಗೆ ವರ್ಗಾಯಿಸುವಂತೆ ಆಗ್ರಹಿಸಿ ಸಾರ್ವಜನಿಕರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

“ಗ್ರಾಮ ಪಂಚಾಯಿತಿ ಕಾರ್ಯದರ್ಶಿಯ ಕರ್ತವ್ಯ ನಿರ್ಲಕ್ಷ್ಯದಿಂದ ಕಚೇರಿಯ ಕೆಲಸಗಳು ಬಾಕಿ ಉಳಿದಿದೆ. ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ. ಗ್ರಾಮದ ಅಭಿವೃದ್ಧಿ ಮರೀಚಿಕೆಯಾಗಿದೆ. ಮನರೇಗಾ ಸಮರ್ಪಕವಾಗಿ ಜಾರಿಯಾಗಿಲ್ಲ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ. ಸಮರ್ಪಕ ಮೂಲಭೂತ ಸೌಕರ್ಯಗಳ ಕೊರತೆಗಳು ಎದುರಾಗಿದೆ. ಇದರಿಂದ ಗ್ರಾಮಸ್ಥರಿಗೆ ತೊಂದರೆಯಾಗುತ್ತದೆ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಚಿಕ್ಕಮ್ಮನಹಟ್ಟಿ ಮಂಜಣ್ಣ ಮಾತನಾಡಿ, “ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗಾಯತ್ರಿ ದೇವಿಯವರು ಸಾರ್ವಜನಿಕರೊಡನೆ ಮತ್ತು ಅಧ್ಯಕ್ಷರು, ಸದಸ್ಯರೊಡನೆ ಸೂಕ್ತವಾಗಿ ಸ್ಪಂದಿಸದೆ ಸರಿಯಾಗಿ ಕಾರ್ಯ ನಿರ್ವಹಣೆಯಾಗುತ್ತಿಲ್ಲ. ಕಳೆದ ಕೋವಿಡ್‌ನಿಂದಲೂ ಗ್ರಾಮ ಪಂಚಾಯಿತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದೆ. ಕಂಪ್ಯೂಟರ್ ಆಪರೇಟರ್ ಇಲ್ಲದೆ ಮನರೇಗಾ ಕಾಮಗಾರಿ ಕೂಡ ಸಾಧ್ಯವಾಗುತ್ತಿಲ್ಲ. ಅಲ್ಲದೆ ಇ-ಸ್ವತ್ತು ವಿಳಂಬವಾಗುತ್ತಿದ್ದು, ಸಾರ್ವಜನಿಕರಿಗೂ ತೊಂದರೆಯಾಗುತ್ತಿದೆ. ಕಾರ್ಯದರ್ಶಿಗಳು ಸಾರ್ವಜನಿಕರಿಗೆ ಮತ್ತು ಫಲಾನುಭವಿಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಸಾಕಷ್ಟು ದೂರುಗಳೂ ಕೂಡ ಕೇಳಿಬಂದಿವೆ” ಎಂದು ಆರೋಪಿಸಿದರು.

Advertisements

“ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಾಸದೇವ ಅವರು ಬೇರೊಂದು ಗ್ರಾಮ ಪಂಚಾಯಿತಿಯಲ್ಲಿ ಪ್ರಭಾರಿಯಾಗಿದ್ದು, ಮೂರು ದಿನಗಳ ಕಾಲ ಮಾತ್ರ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಶ್ನಿಸಿದರೆ ಕಾರ್ಯದರ್ಶಿಯ ಮೇಲೆ ಪಿಡಿಒ, ಪಿಡಿಒ ಮೇಲೆ ಕಾರ್ಯದರ್ಶಿ ಸಬೂಬು ಹೇಳಿಕೊಂಡು ಅಭಿವೃದ್ಧಿ ಮರೀಚಿಕೆಯಾಗಿದೆ “ಎಂದು ಆರೋಪಿಸಿದರು.

“ಸಂಬಂಧಪಟ್ಟ ಮೇಲಧಿಕಾರಿಗಳು ಎಚ್ಚೆತ್ತು ಕಾರ್ಯದರ್ಶಿ ಗಾಯತ್ರಿ ದೇವಿ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಿ ಸೂಕ್ತ ಅಧಿಕಾರಿಯನ್ನು ನಿಯೋಜಿಸಬೇಕು. ಇಲ್ಲವಾದಲ್ಲಿ ಪಂಚಾಯಿತಿಯ ಎಲ್ಲ ಸದಸ್ಯರು ಸಾಮೂಹಿಕ ರಾಜೀನಾಮೆಗೆ ಸಿದ್ದರಿದ್ದೇವೆ” ಎಂದು ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಕೆಂಚಪ್ಪ ಅವರ ಬಳಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕರ್ನಾಟಕದ ಕಾಶ್ಮೀರ ಎನಿಸಿಕೊಂಡಿರುವ ಕೊಡಗಿನ ‘ಮಡಿಕೇರಿ’ಗೆ ಪರಿಶುದ್ಧ ಗಾಳಿ ಪಟ್ಟಿಯಲ್ಲಿ ಅಗ್ರಸ್ಥಾನ

ಈ ವೇಳೆ ಸ್ಥಳಕ್ಕೆ ಆಗಮಿಸಿದ ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಕೆಂಚಪ್ಪ ಸಮಸ್ಯೆ ಬಗ್ಗೆ ಪ್ರತಿಕ್ರಿಯಿಸಿ, “ಕೆಚ್ಚೇನಹಳ್ಳಿ ಗ್ರಾಮ ಪಂಚಾಯಿತಿಗೆ ದೇವಿಕೆರೆ ಗ್ರಾಮ ಪಂಚಾಯಿತಿಯ ಆಪರೇಟರ್‌ಗೆ ಪೂರ್ಣಾವಧಿಗೆ ಕಾರ್ಯ ನಿರ್ವಹಿಸುವಂತೆ ನಿಯೋಜಿಸಲಾಗುತ್ತದೆ. ರಾಜ್ಯದಲ್ಲಿ ಕಂಪ್ಯೂಟರ್ ಆಪರೇಟರ್ ನೇಮಕಾತಿ ಪ್ರಕ್ರಿಯೆಯಲ್ಲಿದೆ.‌ ಗ್ರಾ.ಪಂ ಅಧ್ಯಕ್ಷ ರು, ಸದಸ್ಯರುಗಳು ಸಹಕರಿಸಬೇಕು. ಇ-ಸ್ವತ್ತು ಸೇರಿದಂತೆ ಇತರೆ ಸಾರ್ವಜನಿಕರ ದೂರುಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ಸಮಸ್ಯೆ ಇತ್ಯರ್ಥಪಡಿಸಲಾಗುವುದು” ಎಂದು ಗ್ರಾಮಸ್ಥರಿಗೆ ಗ್ರಾಮ ಪಂಚಾಯಿತಿ ಸದಸ್ಯರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ತಾ.ಪಂ ಸಹಾಯಕ ನಿರ್ದೇಶಕ ಬೋರಯ್ಯ, ಗ್ರಾ.ಪಂ ಅಧ್ಯಕ್ಷೆ ಲಕ್ಷಮ್ಮ ಮಾರಪ್ಪ, ಸದಸ್ಯರಾದ ಕೆಚ್ಚೇನಹಳ್ಳಿ ಓಬಳೇಶ್, ಬೊಮ್ಮಕ್ಕ, ಸುಧಾಮಣಿ, ಮುಖಂಡರಾದ ಚಿಕ್ಕಮ್ಮನ ಹಟ್ಟಿ ಕಾಟಪ್ಪ, ಮಹಾಂತೇಶ್, ಲೋಕೇಶ್ ಸೇರಿದಂತೆ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

Download Eedina App Android / iOS

X