ರಸ್ತೆಯಲ್ಲಿ ಆಟೊ ಚಲಿಸುತ್ತಿದ್ದ ವೇಳೆ ಅಡ್ಡ ಬಂದ ಮಂಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಸವಕಲ್ಯಾಣ ಹೊರವಲಯದ ಪರ್ತಾಪುರ ರಸ್ತೆಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಬಸವಕಲ್ಯಾಣ ತಾಲೂಕಿನ ಮೋರಖಂಡಿ ವಾಡಿ ಗ್ರಾಮದ ನಿವಾಸಿ ಶಿವಾಜಿ ಪಾಲಂಪಲ್ಲೆ (70) ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸುದ್ದಿ ತಿಳಿದಂತೆ ಪಿಎಸ್ಐ ಅಂಬರೀಶ್ ವಾಗ್ಮೋಡೆಯ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.