ಅಧಿಕಾರ ಹಂಚಿಕೆಯಾಗಿದ್ದರೆ ನಾವೆಲ್ಲ ಯಾಕಿರಬೇಕು: ಗೃಹ ಸಚಿವ ಪರಮೇಶ್ವರ್‌ ಪ್ರಶ್ನೆ

Date:

Advertisements

ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿರುವ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ ದೆಹಲಿ ಮತ್ತು ರಾಜ್ಯದಲ್ಲಿ ಇಬ್ಬರು, ಮೂವರನ್ನು ಕೇಳಿದ್ದೇನೆ. ಒಪ್ಪಂದ ಆಗಿದೆ ಅಂತ ಯಾರು ಹೇಳಿಲ್ಲ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಅಂತಹ ಒಪ್ಪಂದ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ. ಈಗ ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು” ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪ್ರಶ್ನಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅವರಿಬ್ಬರೇ ರಾಜಕಾರಣ ನಡೆಸಲಿ. ಬೇರೆಯವರು ಇರುವುದೇ ಬೇಡವೇ? ಆ ರೀತಿ ಒಪ್ಪಂದ ಆಗಿರಲು ಸಾಧ್ಯವಿಲ್ಲ. ಆದ್ದರಿಂದ ಹೈಕಮಾಂಡ್ ಅಂತಿಮವಾಗಿ ಏನು ತೀರ್ಮಾನ ಮಾಡುತ್ತದೆ ಅದಕ್ಕೆ ನಾವು ಬದ್ಧವಾಗಿರುತ್ತೇವೆ. ನಾವ್ಯಾರು ಕೂಡ ಹೈಕಮಾಂಡ್ ಅನ್ನು ಬಿಟ್ಟು ಹೋದವರಲ್ಲ‌. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆ ಅದನ್ನು ಒಪ್ಪಿಕೊಳ್ಳುತ್ತೇವೆ” ಎಂದು ತಿಳಿಸಿದರು.

“ಕೆಪಿಸಿಸಿ ಮತ್ತು ಸ್ವಾಭಿಮಾನಿಗಳ ಒಕ್ಕೂಟ ಒಟ್ಟಾಗಿ ಸಮಾವೇಶ ಮಾಡುತ್ತಿದ್ದು, ಯಾವುದೇ ಗೊಂದಲಗಳು ಇಲ್ಲ‌. ಕಾಂಗ್ರೆಸ್ ಪಕ್ಷ‌ಮತ್ತು ಸರ್ಕಾರದ ಮೇಲೆ ಸ್ವಾಭಿಮಾನಿ ಒಕ್ಕೂಟಕ್ಕೆ ಸಹಾನುಭೂತಿ ಇದೆ. ಹೀಗಾಗಿ ಒಟ್ಟಿಗೆ ಸಮಾವೇಶ ಮಾಡುತ್ತಿದ್ದು, ಇದರಲ್ಲಿ ಯಾವುದೇ ಗೊಂದಲವಿಲ್ಲ. ಗೊಂದಲ ಇದೆ ಎಂಬಂತೆ ಅವರಿರವರು ಸೃಷ್ಟಿ ಮಾಡುತ್ತಿದ್ದಾರೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾರ್ಕಡವಾಡಿ ಎಂಬ ಪುಟ್ಟ ಹಳ್ಳಿಯ ಅಣಕು ಮತದಾನಕ್ಕೆ ಈ ಪರಿ ಬೆಚ್ಚಿಬೀಳುವುದೇಕೆ?

“ನಾವು ರಾಜ್ಯದ ಜನತೆಗೆ ಚುನಾವಣೆಯ ಸಂದರ್ಭದಲ್ಲಿ ರಾಜಕೀಯವಾಗಿ ಏನೆಲ್ಲ ಮಾತನಾಡಿದ್ದೇವೆ, ಅದೆಲ್ಲವನ್ನು ನಾವು ಜನಗಳಿಗೆ ಹೇಳಬೇಕು. ಸರ್ಕಾರದ ಕಾರ್ಯಕ್ರಮಗಳಲ್ಲಿ ಅನೇಕ ರಾಜಕೀಯ ವಿಚಾರಗಳನ್ನು ಪ್ರಸ್ತಾಪ ಮಾಡಲು ಆಗುವುದಿಲ್ಲ. ಅದಕ್ಕಾಗಿ ಈ ಸಮಾವೇಶದಲ್ಲಿ ರಾಜಕೀಯ ವಿಚಾರಗಳನ್ನು ಪ್ರಸ್ತಾಪ‌ ಮಾಡುತ್ತೇವೆ. ಜನಗಳಿಗೆ ಸತ್ಯಾಂಶ ಗೊತ್ತಾಗಬೇಕು. ಅನೇಕ ವಿಚಾರದಲ್ಲಿ ವಿರೋಧ ಪಕ್ಷದವರು ಮಾಡುವ ಆಪಾದನೆಗಳಿಗೆ ರಾಜಕೀಯವಾಗಿ ಉತ್ತರ ಕೊಡುತ್ತೇವೆ” ಎಂದು ಹೇಳಿದರು.

“ಕಾಂಗ್ರೆಸ್‌ ಪಕ್ಷದ ಸಮಾವೇಶ ಆಗಿರುವುದರಿಂದ ಯಾವುದೇ ಬಣ ಇಲ್ಲ. ಬಿಜೆಪಿಯಲ್ಲಿ ಮೂರು ಬಣ ಮಾಡಿಕೊಂಡಿದ್ದರಲ್ಲ. ಆ ರೀತಿ ನಮ್ಮ ಪಕ್ಷದಲ್ಲಿ ಬಣ ಇಲ್ಲ. ನಾವೆಲ್ಲ ಒಟ್ಟಿಗಿದ್ದೇವೆ, ಒಟ್ಟಾಗಿ ಆಡಳಿತ ಮಾಡುತ್ತಿದ್ದೇವೆ. ಬಿಜೆಪಿ ಮತ್ತು ಜೆಡಿಎಸ್‌ನವರು ನಮ್ಮನ್ನು ಜನಸಮುದಾಯದಿಂದ ಬೇರ್ಪಡಿಸಲು ಪ್ರಯತ್ನ ಮಾಡಬಹುದು. ಅದು ಸಾಧ್ಯವಾಗುವುದಿಲ್ಲ” ಎಂದರು.

“ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಅನೇಕ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಾರೆ. ಅದಕ್ಕೆಲ್ಲ‌ ನಾವು ಉತ್ತರ ಕೊಡಬೇಕಿಲ್ಲ. ಅವರು ತಮ್ಮ ಅಭಿಪ್ರಾಯವನ್ನು ಹೇಳಿಕೊಂಡಿರುತ್ತಾರೆ. ಸಂದರ್ಭ ಬಂದಾಗ ನಾವು ಉತ್ತರ ಕೊಡುತ್ತೇವೆ‌” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X