ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಪ್ರಕರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ನೀಡಲಾಗಿರುವ ಜಾಮೀನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನಡೆಸಿದ ಕರ್ನಾಟಕ ಹೈಕೋರ್ಟ್ ಸದ್ಯ ತನಿಖೆಗೆ ಮಧ್ಯಂತರ ತಡೆಯನ್ನು ವಿಧಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಗುರುವಾರ ಅರ್ಜಿಯ ವಿಚಾರಣೆಯನ್ನು ನಡೆಸಿದೆ. ಹಾಗೆಯೇ ಈ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿರುವ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.
ಇದನ್ನು ಓದಿದ್ದೀರಾ? ವಾಲ್ಮೀಕಿ ನಿಗಮ ಪ್ರಕರಣ | ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ 95 ಕೋಟಿ ರೂಪಾಯಿ ವರ್ಗಾಯಿಸಿರುವ ಆರೋಪವು ಮಾಜಿ ಸಚಿವ ಬಿ ನಾಗೇಂದ್ರ ಅವರ ಮೇಲಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ₹95 ಕೋಟಿ ಹಣ ವರ್ಗಾಯಿಸಿರುವ ಆರೋಪ ಸಂಬಂಧ ಮಾಜಿ ಸಚಿವ ಬಿ ನಾಗೇಂದ್ರಗೆ ವಿಶೇಷ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲಿರುವ ಕರ್ನಾಟಕ ಹೈಕೋರ್ಟ್. pic.twitter.com/qKztfOL8A0
— ಬಾರ್ & ಬೆಂಚ್ – Kannada Bar & Bench (@Kbarandbench) December 5, 2024
ಈಗಾಗಲೇ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸದ್ಯ ತನಿಖೆಗೆ ಮಧ್ಯಂತರ ತಡೆ ನೀಡಿದೆ.
