ಬೆಳಗಾವಿ | ₹50 ಲಕ್ಷ ಇನ್ಷೂರೆನ್ಸ್ ಹಣಕ್ಕಾಗಿ ಸ್ವಂತ ಅಣ್ಣನನ್ನೇ ಕೊಲೆ ಮಾಡಿದ ಆರೋಪಿ

Date:

Advertisements

₹50 ಲಕ್ಷ ಇನ್ಷೂರೆನ್ಸ್ ಹಣಕ್ಕಾಗಿ ಸ್ವಂತ ಅಣ್ಣನನ್ನೇ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ನಡೆದಿದೆ.

ಹಣಮಂತ ಗೋಪಾಲ ತಳವಾರ(35) ಕೊಲೆಯಾದ ವ್ಯಕ್ತಿ. ಬಸವರಾಜ ತಳವಾರ ಎಂಬಾತ ತನ್ನ ಮೂವರು ಸ್ನೇಹಿತರ ಜೊತೆಗೂಡಿ ಅಣ್ಣನನ್ನು ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ.

ಹಣಮಂತ ಎಂಬುವವರು ತನ್ನ ಹೆಸರಲ್ಲಿ ₹50 ಲಕ್ಷ ಇನ್ಷೂರೆನ್ಸ್‌ ಮಾಡಿಸಿದ್ದರು. ಅಲ್ಲದೆ ಆ ಇನ್ಷೂರೆನ್ಸ್‌ಗೆ ಆರೋಪಿ ಬಸವರಾಜ ನಾಮಿನಿಯಾಗಿದ್ದ. ಅಣ್ಣ ಸತ್ತರೆ ತನಗೆ ಲಾಭವೆಂದು ಭಾವಿಸಿ ಆತನನ್ನೇ ಹತ್ಯೆ ಮಾಡಲು ಬಸವರಾಜ ಸಂಚು ರೂಪಿಸಿದ್ದ. ಅಕ್ಟೋಬರ್ 7ರಂದು ಕಂಠಪೂರ್ತಿ ಕುಡಿಸಿ ತನ್ನ ಗ್ಯಾಂಗ್‌ನೊಂದಿಗೆ ಅಣ್ಣನನ್ನು ಶ್ರೀಗಂಧದ ಕಟ್ಟಿಗೆಗಳಿವೆ, ಅದನ್ನು ತರಲು ಹೋಗೋಣ ಬಾ ಎಂದು ಕರೆದುಕೊಂಡು ಹೋಗಿದ್ದ. ಈ ವೇಳೆ ಹಣಮಂತನ ತಲೆಗೆ ರಾಡ್‌ನಿಂದ ಹೊಡೆದು ಆರೋಪಿಗಳು ಕೊಲೆ ಮಾಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

Advertisements

ಬಳಿಕ ಕಬ್ಬಿನ ಹೊಲದಲ್ಲಿ ಹಣಮಂತನ ಶವ ಪತ್ತೆಯಾಗಿತ್ತು. ಹಣಮಂತನ ಶವ ಸಿಗುತ್ತಿದ್ದಂತೆ, ಆರೋಪಿಗಳು ಊರಿನಿಂದ ಪರಾರಿಯಾಗಿದ್ದರು. ಮೊಬೈಲ್‌ ಟವ‌ರ್ ಲೊಕೇಷನ್‌ ಆಧರಿಸಿ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಘಟಪ್ರಭಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ವ್ಯಾಟ್ಸಾಪ್ ಸ್ಟೇಟಸ್‌ಗೆ ಫೋಟೋ ಹಾಕಿದ ಪ್ರಿಯಕರ; ವಿವಾಹಿತ ಮಹಿಳೆ ಆತ್ಮಹತ್ಯೆ

“ಮೃತ ಹಣಮಂತನ ಆರೋಪಿ ಸಹೋದರ ಬಸವರಾಜ್ ತಳವಾರ, ಆತನ ಸ್ನೇಹಿತರಾದ ಬಾಪು ಶೇಖ್‌, ಈರಪ್ಪ ಹಡಗಿನಾಳ ಹಾಗೂ ಸಚಿನ್ ಕಂಟೆನ್ನವ‌ರ ಎಂಬ ಆರೋಪಿಗಳನ್ನು ಬಂಧಿಸಿ, ಮುಂದಿನ ಕ್ರಮ ಕೈಗೊಳ್ಳಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಬೆಳಗಾವಿ : ಜಿಲ್ಲೆಯಲ್ಲಿ ಮೋಡ ಕವಿದ ಹವಾಮಾನ – ಅಲ್ಪ ಮಳೆಯ ಸಾಧ್ಯತೆ

ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನ 20 ರಿಂದ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X