ರಾಯಚೂರು | ಮನರೇಗಾ ಕಾರ್ಮಿಕರ ಕೆಲಸ ಕಸಿದ ಕೇಂದ್ರ ಸರ್ಕಾರದ ಹೊಸ ನಿಯಮ; ಗ್ರಾಕೂಸ ಪ್ರತಿಭಟನೆ

Date:

Advertisements

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆಯಡಿ ಕೇಂದ್ರ ಸರ್ಕಾರದ ಹೊಸ ನೀತಿ ನಿಯಮಗಳ ಬದಲಾವಣೆಯಿಂದಾಗಿ 100 ದಿನಗಳ ಕೆಲಸ ಸಿಗದೆ ಸಾವಿರಾರು ಜನರು ವಲಸೆ ಹೋಗುತ್ತಿದ್ದಾರೆ. ನಮ್ಮ ಕೆಲಸದ ಹಕ್ಕನ್ನು ಕೇಂದ್ರ ಸರ್ಕಾರ ಕಿತ್ತುಕೊಳ್ಳುತ್ತಿ‌ದ್ದುದ್ದನ್ನು ಖಂಡಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ(ಗ್ರಾಕೂಸ)ಯಿಂದ ಪ್ರತಿಭಟನೆ ನಡೆಸಿದರು.

ರಾಯಚೂರು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಿದರು.

“ಮನರೇಗಾ ಕಾನೂನು ಅಡಿಯಲ್ಲಿ ಗ್ರಾಮೀಣ ಭಾಗದ ಕಾರ್ಮಿಕರಿಗೆ ನೂರು ದಿನಗಳ ಕೆಲಸದ ಗ್ಯಾರಂಟಿ ನೀಡಿತ್ತು. ಈ ಕಾನೂನು ಅಡಿಯಲ್ಲಿ ಕೋಟ್ಯಂತರ ಕಾರ್ಮಿಕರು ಕೆಲಸ ಮಾಡಿ ತಮ್ಮ ಸಂಕಷ್ಟದ ಜೀವನ ನಿರ್ವಹಣೆ ಮಾಡುತ್ತಿದ್ದರು. ಕೂಲಿ ಕಾರ್ಮಿಕರು ನಗರ ಪ್ರದೇಶಗಳಿಗೆ ವಲಸೆ ಹೋಗುವುದು ಕಡಿಮೆಯಾಗಿತ್ತು. ಕೇಂದ್ರ ಸರ್ಕಾರ ಹೊಸ ನಿಯಮ ತರುವುದರಿಂದ ಸಾಕಷ್ಟು ಸಮಸ್ಯೆ ಎದುರಾಗಿದೆ” ಎಂದು ಆಗ್ರಹಿಸಿದರು.

Advertisements

“ಇತ್ತೀಚಿನ ದಿನಗಳಲ್ಲಿ ಸರ್ಕಾರದ ಹೊಸ ನೀತಿಗಳ ಬದಲಾವಣೆಯಿಂದಾಗಿ ಕಾರ್ಮಿಕರಿಗೆ ಸರಿಯಾಗಿ 100 ದಿನಗಳ ಖಾತ್ರಿ ಕೆಲಸ ಸಿಗುತ್ತಿಲ್ಲ.‌ ಕುಟುಂಬಕ್ಕೆ 200 ದಿನಗಳ ಕೆಲಸ ನೀಡಬೇಕು, ಪ್ರತಿ ಕೂಲಿಗೆ ₹600ರಂತೆ ನಿಗದಿಪಡಿಸಬೇಕು. ಕೆಲಸದ ವೇಳೆ ಸಾವನಪ್ಪಿದವರಿಗೆ ₹5 ಲಕ್ಷ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.

1000045059

“ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಬಜೆಟ್‌ನಲ್ಲಿ ಮೀಸಲಿಡಬೇಕಾದ ಹಣವನ್ನು ಕೇಂದ್ರ ಸರ್ಕಾರ ಪ್ರತಿವರ್ಷ ಕಡಿಮೆ ಮಾಡುತ್ತ ಬರುತ್ತಿದೆ. ಇದರಿಂದ ಕಾರ್ಮಿಕರಿಗೆ ನೂರು ದಿನಗಳ ಉದ್ಯೋಗ ಖಾತ್ರಿ ಕೆಲಸದ ಹಕ್ಕು ಕೇಂದ್ರ ಸರ್ಕಾರ ಕಿತ್ತುಕೊಳ್ಳುತ್ತಿದೆ. ಸಮಯಕ್ಕೆ ಕೆಲಸ ಮಾಡಿದ ಕಾರ್ಮಿಕರಿಗೆ ಪಾವತಿಯಾಗುತ್ತಿಲ್ಲ. ಆದ್ದರಿಂದ ಕೇಂದ್ರ ಸರ್ಕಾರ ತಮ್ಮ ಬಜೆಟ್‌ನಲ್ಲಿ ₹2 ಲಕ್ಷ ಕೋಟಿ ಹಣ ಮೀಸಲಿಡಬೇಕು. ಈ ವರ್ಷ ಕೆಲಸ ಮಾಡಿದ ಕೂಲಿ ಕಾರ್ಮಿಕರ ಬಾಕಿ ಕೂಲಿ ಹಣವನ್ನು ಕೂಡಲೇ ಬಿಡುಗಡೆಗೊಳಿಸಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯ ಮುಖ್ಯಸ್ಥೆ ಮಾರೆಮ್ಮ ನೀರಮಾನ್ವಿ, ಬಸವರಾಜ್ ಗಬ್ಬೂರು, ಗೋವಿಂದ, ಹುಚ್ಚಪ್ಪ ಕುರ್ಡಿ, ಕೊಂಡಯ್ಯ ಜಾನೇಕಲ್, ತಾಯಪ್ಪ, ನರಸಮ್ಮ ಸೇರಿದಂತೆ ನೂರಾರು ಮಂದಿ ಕೂಲಿ ಕಾರ್ಮಿಕರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X