ಬೀದರ್‌ | ಆನ್‌ಲೈನ್ ಗೇಮ್ಸ್ ನಿಷೇಧಕ್ಕೆ ನಮ್ಮ ಕರ್ನಾಟಕ ಸೇನೆ ಆಗ್ರಹ

Date:

Advertisements

ಬೀದರ್, ಭಾಲ್ಕಿ ತಾಲೂಕು ಸೇರಿದಂತೆ ರಾಜ್ಯಾದ್ಯಂತ ವಿದ್ಯಾರ್ಥಿ ಮತ್ತು ಯುವ ಸಮುದಾಯದ ಬದುಕು ಹಾಳು ಮಾಡುತ್ತಿರುವ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟ (ರಮ್ಮಿ) ಗೇಮ್‌ಗಳನ್ನು ನಿಷೇಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾ ಘಟಕ ಒತ್ತಾಯಿಸಿದೆ.

ಈ ಕುರಿತು ಪಟ್ಟಣದ ತಹಸೀಲ್ ಕಚೇರಿಯಲ್ಲಿ ನಮ್ಮ ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ಗಣೇಶ ಪಾಟೀಲ್ ನೇತೃತ್ವದಲ್ಲಿ ಸೇನೆಯ ಪದಾಧಿಕಾರಿಗಳು ಬುಧವಾರ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

‌ʼರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್, ಜೂಜಾಟ ಜಾರಿಯಲ್ಲಿರುವುದರಿಂದ ವಿದ್ಯಾರ್ಥಿಗಳು, ಯುವಕರು ದಾರಿ ತಪ್ಪುತ್ತಿದ್ದಾರೆ. ಆನಲೈನ್ ಗೇಮ್ ಚಟಕ್ಕೆ ಯುವಕರು ತಮ್ಮ ಅಮೂಲ್ಯ ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ವಿದ್ಯಾಭ್ಯಾಸ ಅರ್ಧಕ್ಕೆ ಮೊಟಕುಗೊಳಿಸುತ್ತಿದ್ದಾರೆ. ಪಾಲಕರು ಕೂಡಿಟ್ಟ ಹಣವನ್ನು ಆನ್ ಲೈನ್ ಗೇಮ್‌ನಲ್ಲಿ ಕಳೆದುಕೊಂಡು ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ’ ಎಂದರು.

Advertisements

ನಮ್ಮ ಕರ್ನಾಟಕ ಸೇನೆಯ ಜಿಲ್ಲಾಧ್ಯಕ್ಷ ಗಣೇಶ ಪಾಟೀಲ್ ಮಾತನಾಡಿ, ʼರಾಜ್ಯದಲ್ಲಿ ಆನ್‌ಲೈನ್ ಗೇಮ್ ರದ್ದುಪಡಿಸಲು ಸರಕಾರ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಬೆಳಗಾವಿಯಲ್ಲಿ ನಮ್ಮ ಕರ್ನಾಟಕ ಸೇನೆ ರಾಜ್ಯಾಧ್ಯಕ್ಷ ಎಂ.ಬಸವರಾಜ ಪಡಕೋಟೆ ನೇತೃತ್ವದಲ್ಲಿ ಹೋರಾಟ ನಡೆಸಿ ಸರಕಾರದ ಗಮನ ಸೆಳೆಯುತ್ತಿವೆ. ಸಿಕ್ಕಿಂ, ಮೇಘಾಲಯ ಮಾದರಿಯಂತೆ ರಾಜ್ಯದಲ್ಲಿ ಕೂಡ ಆನ್‌ಲೈನ್ ಆಪ್‌ ಹಾಗೂ ಆನ್‌ಲೈನ್ ಗೇಮ್ಸ್‌ಗಳನ್ನು ಕೂಡಲೇ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಪತ್ರಕರ್ತ ಡಿ.ಉಮಾಪತಿ ಅವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆ ತಾಲೂಕಾಧ್ಯಕ್ಷ ಬಸವರಾಜ ಕಾರಬಾರಿ, ಪ್ರಮುಖರಾದ ಕಾಶಿನಾಥ ಚಳಕಾಪೂರೆ, ದತ್ತಾತ್ರಿ ಜಗತಾಪ, ದೀಪಕ ಠಮಕೆ, ಲೋಕೇಶ ಪಾಟೀಲ್, ಭದ್ರೇಶ ಸ್ವಾಮಿ, ವೀರೇಶ ಬಿರಾದಾರ್, ರಾಜಕುಮಾರ ಕುಂಬಾರ, ಜಗದೀಶ ಪಾಟೀಲ್, ಮಹೇಶ ರಾಚೋಟೆ, ಲೋಕೇಶಕುಮಾರ ಚಿಂಚೋಳೆ, ಶೈಲೇಶ ಕರಂಜೆ, ಸಾಗರ ಸ್ವಾಮಿ, ಆನಂದ ಸಾಗರ, ಓಂ ಪಾಟೀಲ್ ಸೇರಿದಂತೆ ಹಲವರು ಇದ್ದರು. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

Download Eedina App Android / iOS

X