ವಾಕಿಂಗ್ ಹೋಗುತ್ತೇನೆಂದು ಹೇಳಿ ಮನೆಯಿಂದ ಹೋಗಿದ್ದ ವೈದ್ಯರೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ತರೀಕೆರೆ ತಾಲೂಕಿನ ಅಜ್ಜಂಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ವೈದ್ಯ ಉತ್ತಮ್ ಮೃತ ದುರ್ದೈವಿ. ಅವರು ಕಟ್ಟೆಹೊಳೆ ಗ್ರಾಮದ ಬಳಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಕಟ್ಟೆಹೊಳೆಯಲ್ಲಿಯೇ ವಾಸವಾಗಿದ್ದ ವೈದ್ಯ ಉತ್ತಮ್ ಗುರುವಾರ ಸಂಜೆ ವಾಕಿಂಗ್‌ಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋಗಿದ್ದಾರೆ. ಆದರೆ, ಮರಳಿ ಬಂದಿಲ್ಲ. ಅವರು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಭದ್ರಾವತಿ ರೈಲ್ವೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
