ತುಮಕೂರು | ಪ್ರತಿ ಮನೆಯಲ್ಲೂ ಅಂಬೇಡ್ಕರ್ ಜನಿಸಬೇಕು : ಜಿಲ್ಲಾಧಿಕಾರಿ ಶುಭ ಕಲ್ಯಾಣ್

Date:

Advertisements

ವಿಶ್ವಕ್ಕೆ ಮಾನವೀಯತೆ ಮತ್ತು ಸಮಾನತೆಯ ಸಂದೇಶ ಸಾರಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಗುಣಗಳುಳ್ಳ ವ್ಯಕ್ತಿಗಳು ಪ್ರತಿ ಮನೆಯಲ್ಲೂ ಜನಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯ ವ್ಯಕ್ತಪಡಿಸಿದರು.

ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ಜರುಗಿದ ಡಾ.ಬಿ.ಆರ್. ಅಂಬೇಡ್ಕರ್ ಅವರ 68ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅತ್ಯಂತ ಕಡು ಬಡತನದಲ್ಲಿ ಹುಟ್ಟಿ ಅಸ್ಪೃಶ್ಯತೆ, ಅಸಮಾನತೆ, ಮಹಿಳಾ ಅಸಮಾನತೆ ವಿರುದ್ಧ ಹೋರಾಡಿ ಸಮ ಸಮಾಜ ನಿರ್ಮಾಣ ಮಾಡಲು ತಮ್ಮ ಜೀವನವನ್ನೇ ಸವೆಸಿ ಧ್ವನಿ ಇಲ್ಲದವರಿಗೆ ದನಿಯಾಗಿದ್ದ ಅಂಬೇಡ್ಕರ್ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ತಿಳಿಸಿದರು. 

1000742683

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ದೀನ-ದಲಿತರಿಗೆ, ನೊಂದವರಿಗೆ ಪ್ರತ್ಯಕ್ಷ ದೇವರಾಗಿ ಕಾಣುವ ಮೂಲಕ ಅವರ ಪುಣ್ಯ ಸ್ಮರಣೆಯನ್ನು ಪರಿನಿರ್ವಾಣ ದಿನವೆಂದು ಆಚರಿಸಲಾಗುತ್ತದೆ. ಏಷ್ಯದ ಉಪ ಖಂಡದಂತಿರುವ ನಮ್ಮ ದೇಶದಲ್ಲಿ ಹಲವು ವೈವಿಧ್ಯತೆಗಳನ್ನು ಏಕೀಕರಣಗೊಳಿಸಿ ಸಂವಿಧಾನದ ಮೂಲಕ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಿದ್ದಾರೆ. ತಮ್ಮ ಅನುಭವದ ರಸಗಟ್ಟಿಯಿಂದ ಸಂವಿಧಾನದಲ್ಲಿ ಮಾನವೀಯ ಮೌಲ್ಯಗಳಿಗೆ ಒತ್ತು ನೀಡುವ ಮೂಲಕ ಪ್ರತಿ ಭಾರತೀಯ ಪ್ರಜೆಗೆ ಆತ್ಮ ವಿಶ್ವಾಸ ತಂದುಕೊಟ್ಟಿದ್ದಾರೆ. ಸಾವಿರಾರು ವರ್ಷಗಳಿಂದ ತುಳಿತಕ್ಕೊಳಗಾದ ಮತ್ತು ಸಮಾಜದಿಂದ ಹಿಂದೆ ಉಳಿದುಕೊಂಡಿದ್ದ ಅನೇಕ ಸಮುದಾಯಗಳು ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ ಬದುಕನ್ನು ಕಟ್ಟಿಕೊಂಡಿವೆ ಎಂದು ತಿಳಿಸಿದರು. 

Advertisements

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ ಮಾತನಾಡಿ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ ನಾವೆಲ್ಲರೂ ಸಮಾಜದಲ್ಲಿ ನೆಮ್ಮದಿಯಾಗಿ ಬದುಕುತ್ತಿದ್ದೇವೆ. ಪ್ರತಿಯೊಬ್ಬರಿಗೂ ಸಮಾನ ನ್ಯಾಯವನ್ನು ಒದಗಿಸುವುದು, ಎಲ್ಲರಿಗೂ ನ್ಯಾಯವನ್ನು ದೊರಕಿಸಿಕೊಡುವುದೇ ಸಂವಿಧಾನದ ಆಶಯವಾಗಿದೆ ಎಂದು ತಿಳಿಸಿದರು.

1000742690

ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಮಾತನಾಡಿ ತಲಾ ತಲಾಂತರದಿಂದ ಬಂದ ಅನಿಷ್ಟ ಪದ್ಧತಿಗಳನ್ನು ಸಮಾಜದಿಂದ ಕಿತ್ತೊಗೆಯಲು ಇಡೀ ವ್ಯವಸ್ಥೆಯನ್ನೇ ಎದುರು ಹಾಕಿಕೊಳ್ಳುವ ಮೂಲಕ ಮನುಷ್ಯರನ್ನು ಮನುಷ್ಯರನ್ನಾಗಿ ಕಾಣುವಂತೆ ಮಾಡಿದವರು ಡಾ. ಬಿ.ಆರ್. ಅಂಬೇಡ್ಕರ್. ಭಾರತದ ಧಾರ್ಮಿಕ ವ್ಯವಸ್ಥೆ, ಜಾತಿ ವ್ಯವಸ್ಥೆ ಮತ್ತು ಪುರುಷ ಪ್ರಧಾನ ವ್ಯವಸ್ಥೆಯಿಂದ ಸ್ವತಂತ್ರವಾಗಿ ಉಸಿರಾಡಲು ಸಹ ಆಗದ ಸ್ಥಿತಿಯಲ್ಲಿ ಸಿಲುಕಿದ್ದ ಜನರನ್ನು ಸಂಕೋಲೆಯಿಂದ ಬಿಡಿಸಿದ ಅವರ ಮಾನವೀಯತೆಯ ವಿಚಾರಧಾರೆಗಳು ಪ್ರಪಂಚಕ್ಕೆ ಪಸರಿಸಿವೆ. ಸಂವಿಧಾನದ ಮೂಲಕ ಸರ್ವರಿಗೂ ಸಮಬಾಳು ಸಮಪಾಲು ಎಂಬ ನ್ಯಾಯವನ್ನು ಒದಗಿಸಿದ ಅವರನ್ನು ಒಂದು ಜಾತಿ, ಧರ್ಮಕ್ಕೆ ಸೀಮಿತಗೊಳಿಸದೆ, ಅವರ ವಿಚಾರಧಾರೆಗಳನ್ನು ಅರಿತು ಬಾಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಭೂ ದಾಖಲೆಗಳ ಇಲಾಖೆ ಉಪನಿರ್ದೇಶಕ ನಿರಂಜನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯಕ್ರಮ ನಿರೂಪಣಾಧಿಕಾರಿ ದಿನೇಶ್, ಸ್ಲಂ ಜನಾಂದೋಲನದ ಎ. ನರಸಿಂಹಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ದಲಿತ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X