ತುಮಕೂರು | ಅಂಬೇಡ್ಕರ್ ಚಿಂತನೆ ಸಾರ್ವತ್ರಿಕವಾಗಿ ಚರ್ಚೆಯಾಗಬೇಕು : ಡಾ.ವೈ.ಕೆ.ಬಾಲಕೃಷ್ಣಪ್ಪ

Date:

Advertisements

ಬಾಬಾ ಸಾಹೇಬ್ ಅಂಬೇಡ್ಕರ್ ಅವರು, ರಕ್ತ ರಹಿತ ಕ್ರಾಂತಿಯ ಮೂಲಕ ಈ ದೇಶದ ನಿಮ್ನ ವರ್ಗಗಳಿಗೆ ರಾಜಕೀಯ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆಯ ಸವಲತ್ತುಗಳನ್ನು ಸಂವಿಧಾನದ ಮೂಲಕ ನೀಡಿದರು ಎಂದು ಕರ್ನಾಟಕ ರಾಜ್ಯ ಸರ್ಕಾರಿ  ಎಸ್. ಸಿ ,ಎಸ್. ಟಿ ನೌಕರರ ಸಮನ್ವಯ ಸಮಿತಿಯ ಜಿಲ್ಲಾಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ ತಿಳಿಸಿದರು.

ತುಮಕೂರು ನಗರದ ಟಿ.ಎ.ಪಿ.ಎಂಎಸ್ ಕಟ್ಟಡದಲ್ಲಿರುವ ಕರ್ನಾಟಕ ರಾಜ್ಯ ಸರಕಾರಿ ಎಸ್. ಸಿ,ಎಸ್. ಎಸ್. ಟಿ ನೌಕರರ ಸಮನ್ವಯ ಸಮಿತಿ ವತಿಯಿಂದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 76ನೇ ಪರಿನಿಬ್ಬಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಇಡೀ ವಿಶ್ವದಲ್ಲಿಯೇ ದೇಶದ ಎಲ್ಲಾ ವರ್ಗದ ಜನರನ್ನು ಒಳಗೊಂಡ ಸಂವಿಧಾನವಿದ್ದರೆ,ಆದು ಭಾರತದ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವಾಗಿದೆ. ಇದು ಭಾರತೀಯರೆಲ್ಲರೂ ಹೆಮ್ಮೆ ಪಡುವಂತಹ ವಿಚಾರ ಎಂದರು.

1000742748

ಭಾರತದ ಸಂವಿಧಾನ ಜಾತಿ, ವರ್ಗ, ವರ್ಣ, ಲಿಂಗಭೇಧವಿಲ್ಲದೆ ಎಲ್ಲರಿಗೂ ಸಮಾನತೆಯನ್ನು ಕಲ್ಪಿಸುವ ಸಮ ಸಮಾಜದ ಪರಿಕಲ್ಪನೆ ಹೊಂದಿರುವ ಸಂವಿಧಾನವಾಗಿದೆ.ಇದರ ಅಡಿಯಲ್ಲಿ ಭಾರತ ಸಧೃಢವಾಗಿ ಮುನ್ನೆಡೆಯಲು ಹಾಕಿಕೊಟ್ಟ ಮಾರ್ಗವಾಗಿದೆ.ಇಡೀ ವಿಶ್ವದಲ್ಲಿ ಬಾಬಾ ಸಾಹೇಬರಷ್ಟು ಪದವಿಗಳನ್ನು ಪಡೆದ ಜ್ಞಾನವಂತರು ಮೊತ್ತಬ್ಬರಿಲ್ಲ.ಹಾಗಾಗಿ ಬಾಬಾ ಸಾಹೇಬರು ಹುಟ್ಟಿದ ದಿನವನ್ನು ವಿಶ್ವಸಂಸ್ಥೆ ಜ್ಞಾನದ ದಿನವಾಗಿ ಘೋಷಿಸಿದೆ.ಸ್ವಾತಂತ್ರ ಭಾರತದ ಮೊಟ್ಟ ಮೊದಲ ಕಾನೂನು ಮಂತ್ರಿಯಾಗಿ, ಮಹಿಳೆಯರಿಗೆ ಆಸ್ತಿ ಸೇರಿದಂತೆ ಸಮಾನತೆ ಹಕ್ಕು ಪ್ರತಿಪಾದಿಸುವ ಹಿಂದೂ ಕೋಡ್ ಬಿಲ್‌ಗೆ ಅಧಿವೇಶದಲ್ಲಿ ಬೆಂಬಲ ದೊರೆಯದ ಹಿನ್ನೆಲೆಯಲ್ಲಿ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ತ್ಯಾಗ ಜೀವಿ.ಅವರು ಎಳೆದ ಸಮಾನತೆ ರಥವನ್ನು ಸಾಧ್ಯವಾದರೆ ಮುಂದಕ್ಕೆ ತೆಗೆದುಕೊಂಡು ಹೋಗಿ, ಹಿಂದಕ್ಕೆ ತರಬೇಡಿ ಎಂದು ದೇಶದ ವಿದ್ಯಾವಂತ ಯುವಜನತೆಗೆ ಕರೆ ನೀಡಿದ್ದರು ಎಂದು ಡಾ.ವೈ.ಕೆ.ಬಾಲಕೃಷ್ಣಪ್ಪ ತಿಳಿಸಿದರು.

Advertisements

ಇಂದು ಹಿಂದೂ ನಾವೆಲ್ಲ ಒಂದು ಎಂದು ಹೇಳುತ್ತಿರುವ ನಮ್ಮ ನಾಡಿನಲ್ಲಿ ಪ್ರತಿ ಹತ್ತು ನಿಮಿಷಕ್ಕೆ ಒರ್ವ ದಲಿತ ಹೆಣ್ಣು ಮಗಳ ಮೇಲೆ ಅತ್ಯಾಚಾರ,ಕೊಲೆ ನಡೆಯತ್ತಿದೆ.ದಲಿತರು ದೇವಾಲಯ ಪ್ರವೇಶಿಸಿದರು ಎಂಬ ಕಾರಣಕ್ಕೆ ಬೇರೆ ದೇವಾಲಯ ನಿರ್ಮಿಸಿದಾಗ, ದೇವರನ್ನು ಗುಡಿಯಿಂದ ಹೊರತಂದಾಗ ಬಾಯಿ ಬಿಡದ, ತಪ್ಪು ಮಾಡಿದವರಿಗೆ ಜಾಗೃತಿ ಮೂಡಿಸಿದ ಜನರು,ಬಾಬಾ ಸಾಹೇಬರ ಹುಟ್ಟಿದ ದಿನ, ಪರಿನಿಬ್ಬಾಣ ದಿನವನ್ನು ಆಚರಿಸಿ, ಕಣ್ಣೀರು ಹರಿಸಿ, ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತಿದ್ದಾರೆ.ಇದರ ಹಿಂದಿನ ಅಜೆಂಡಾ ತಿಳಿದೇ ಅಂಬೇಡ್ಕರ್ ಅವರು ತಮ್ಮ ಲಕ್ಷಾಂತರ ಅನುಯಾಯಿ ಗಳೊಂದಿಗೆ ಬೌದ್ಧ ಧರ್ಮ ಸ್ವೀಕರಿಸಿದರು.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿಗಳು ಸಂವಿಧಾನವನ್ನು ರಕ್ಷಿಸುವ ಕೆಲಸ ಮಾಡಬೇಕಿದೆ. ಆ ಮೂಲಕ ಪ್ರಜಾಪ್ರಭುತ್ವವನ್ನು ರಕ್ಷಿಸಿಕೊಳ್ಳೋಣ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಎಸ್,ಎಸ್. ಟಿ ಸರಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ನಾಗರಾಜು ಉಪಾಧ್ಯಕ್ಷ ಹನುಮಂತರಾಜು, ಪದಾಧಿಕಾರಿಗಳಾದ ಹೆಚ್.ಗೋಪಿನಾಥ್,ಪ್ರಕಾಶ್, ಗಿರೀಶ್, ಚಂದ್ರಶೇಖರ್, ರವಿಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು. 

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X