ಉಡುಪಿ | ನಾಳೆ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಮಾಹಿತಿ ಕಾರ್ಯಾಗಾರ ಮತ್ತು ಸವಲತ್ತು ವಿತರಣೆ

Date:

Advertisements

ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ, ಮಾಹಿತಿ ಕಾರ್ಯಾಗಾರ ಮತ್ತು ಸವಲತ್ತು ವಿತರಣಾ ಕಾರ್ಯಕ್ರಮವು ಡಿಸೆಂಬರ್ 7 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳು, ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್, ಸಂಸದರಾದ ಬಿ.ವೈ ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ, ಮಂಗಳೂರು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಆರ್ ಜಯಕುಮಾರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X