ಕಾರು-ಕಬ್ಬು ಕಟಾವು ಮಷೀನ್ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಮೃತರು ವಿಜಯಪುರ ಜಿಲ್ಲೆಯ ಅಲಿಯಾಬಾದ್ ನಿವಾಸಿಗಳು ಎಂದು ಗುರುತಿಸಲಾಗಿದೆ.
ಇಬ್ಬರು ಮಹಿಳೆಯರು, ಮೂವರು ಪುರುಷರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿಗೆ ಕಬ್ಬು ಕಟಾವು ಮಷೀನ್ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಜಾತಿ ತಾರತಮ್ಯ ಹೋಗಲಾಡಿಸಲು ಸಂಘಟಿತರಾಗಬೇಕು: ಡಿ ಎಸ್ ಶರಣಬಸವ
ಸ್ಥಳಕ್ಕೆ ತಾಳಿಕೋಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.