ಉಡುಪಿ | ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ವಿಶ್ವ ಸ್ವಯಂ ಸೇವಕರ ದಿನಾಚರಣೆ

Date:

Advertisements

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಡಾ. ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಹಾಗೂ ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್ ಇವರ ಸಂಯುಕ್ತ ಆಶ್ರಯದಲ್ಲಿ, ನಗರದ ಡಾ. ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ವಿಶ್ವ ಸ್ವಯಂ ಸೇವಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ರೆಡ್‌ಕ್ರಾಸ್ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಮಾತನಾಡಿ, ನಿಜವಾದ ಸ್ವಯಂಸೇವಕರು ಯಾವುದೇ ಫಲಾಪೇಕ್ಷೆ ಇಲ್ಲದೆ ಮಾನವೀಯ ದೃಷ್ಟಿಯಿಂದ ಸೇವೆ ಮಾಡುತ್ತಾರೆ. ಇದರಿಂದ ಅವರ ವ್ಯಕ್ತಿತ್ವ ರೂಪುಗೊಳ್ಳುವುದಲ್ಲದೆ ಆತ್ಮತೃಪ್ತಿ ದೊರೆಯುತ್ತದೆ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜಿಲ್ಲಾ ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಮಾತನಾಡಿ, ಸ್ವಯಂ ಸೇವೆ ಒಂದು ಸಾಮಾಜಿಕ ಜವಾಬ್ದಾರಿ ಎಂದ ಅವರು, ಸ್ವಯಂ ಸೇವಕರ ಕರ್ತವ್ಯಗಳ ಕುರಿತು ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ ಪ್ರಸಾದ್ ಕೆ. ಅಧ್ಯಕ್ಷತೆ ವಹಿಸಿದ್ದರು.

Advertisements

ಲಯನ್ಸ್ ವಲಯಾಧ್ಯಕ್ಷ ಅನಂತ ಶೆಟ್ಟಿ, ರೆಡ್ ಕ್ರಾಸ್ ಖಚಾಂಚಿ ರಮಾದೇವಿ, ಲಯನ್ಸ್ ಖಚಾಂಚಿ ರೇಖಾ ಎ. ಶೆಟ್ಟಿ, ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಡಾ. ನಿಕೇತನ ಸ್ವಾಗತಿಸಿ, ಎನ್.ಎಸ್. ಎಸ್. ಯೋಜನಾಧಿಕಾರಿ ವಿದ್ಯಾ ಡಿ. ನಿರೂಪಿಸಿ, ರೆಡ್‌ಕ್ರಾಸ್ ಸಂಯೋಜಕಿ ಡಾ. ದಿವ್ಯ ಎಂ.ಎಸ್. ವಂದಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ...

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

Download Eedina App Android / iOS

X