ತಮಿಳುನಾಡಿನಲ್ಲಿ ಹಾಲು ಸಂಗ್ರಹ ನಿಲ್ಲಿಸುವಂತೆ ಅಮೂಲ್‌ಗೆ ನಿರ್ದೇಶಿಸುವಂತೆ ಅಮಿತ್‌ ಶಾಗೆ ಸ್ಟಾಲಿನ್ ಪತ್ರ

Date:

Advertisements
  • ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ ಅಮೂಲ್‌ ಮೂಲಕ ಹಾಲು ಸಂಗ್ರಹ
  • ಅಮೂಲ್‌ ನಿರ್ಧಾರದಿಂದ ಸಹಕಾರ ಸಂಘಗಳಲ್ಲಿ ಅನಾರೋಗ್ಯಕರ ಸ್ಪರ್ಧೆ

ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಗುಜರಾತ್ ಮೂಲದ ಡೇರಿ ಅಮುಲ್‌ಗೆ ದಕ್ಷಿಣ ರಾಜ್ಯದಿಂದ ಹಾಲು ಸಂಗ್ರಹಿಸುವುದನ್ನು ಸ್ಥಗಿತಗೊಳಿಸಲು ನಿರ್ದೇಶಿಸಬೇಕೆಂದು ಒತ್ತಾಯಿಸಿದ್ದಾರೆ.

ತಮಿಳುನಾಡಿನ ಹಾಲಿನ ಶೆಡ್ ಪ್ರದೇಶಗಳಲ್ಲಿ ಅಮುಲ್ ಹಾಲು ಸಂಗ್ರಹಿಸುತ್ತಿರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೆಚ್ಚಿನ ಸಮಸ್ಯೆ ಉಂಟಾಗುವ ಸಾಧ್ಯತೆಯಿದೆ. ಇತ್ತೀಚೆಗಷ್ಟೇ ಕೃಷ್ಣಗಿರಿ ಜಿಲ್ಲೆಯಲ್ಲಿ ಅಮುಲ್ ಚಿಲ್ಲಿಂಗ್ ಸೆಂಟರ್ ಮತ್ತು ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ಅಮುಲ್ ತನ್ನ ಬಹು-ರಾಜ್ಯ ಸಹಕಾರಿ ಪರವಾನಗಿಯನ್ನು ಬಳಸಿಕೊಂಡಿರುವುದು ರಾಜ್ಯ ಸರ್ಕಾರದ ಗಮನಕ್ಕೆ ಬಂದಿದೆ ಎಂದು ಸ್ಟಾಲಿನ್‌ ಪತ್ರದಲ್ಲಿ ತಿಳಿಸಿದ್ದಾರೆ.

ತಮಿಳುನಾಡಿನ ಕೃಷ್ಣಗಿರಿ, ಧರ್ಮಪುರಿ, ವೆಲ್ಲೂರು, ರಾಣಿಪೇಟ್, ತಿರುಪತ್ತೂರ್, ಕಾಂಚೀಪುರಂ ಮತ್ತು ತಿರುವಳ್ಳೂರು ಜಿಲ್ಲೆಗಳಲ್ಲಿ ಸ್ವಸಹಾಯ ಸಂಘಗಳ ಮೂಲಕ ಹಾಲನ್ನು ಸಂಗ್ರಹಿಸಲು ಅಮುಲ್ ಯೋಜಿಸಿದೆ. ಅಮುಲ್‌ನ ಈ ಕ್ರಮವು ಹಾಲು ಮತ್ತು ಹಾಲಿನ ಉತ್ಪನ್ನಗಳ ಸಂಗ್ರಹಣೆ ಮತ್ತು ಮಾರಾಟದಲ್ಲಿ ತೊಡಗಿರುವ ಸಹಕಾರಿ ಸಂಸ್ಥೆಗಳ ನಡುವೆ ಅನಾರೋಗ್ಯಕರ ಸ್ಪರ್ಧೆಗೆ ಕಾರಣವಾಗುತ್ತದೆ ಎಂದು ಉಲ್ಲೇಖಿಸಿದ್ದಾರೆ.

Advertisements

ಸಹಕಾರಿ ಸಂಘಗಳು ಪರಸ್ಪರರ ಡೈರಿ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡದೆ ಅಭಿವೃದ್ಧಿ ಹೊಂದಲು ಅವಕಾಶ ನೀಡುವುದು ಭಾರತದಲ್ಲಿ ರೂಢಿಯಲ್ಲಿದೆ. ಇಂತಹ ಅಡ್ಡ-ಸಂಗ್ರಹಣೆಯು 1970ರಲ್ಲಿ ಪ್ರಾರಂಭವಾದ ಶ್ವೇತ ಕ್ರಾಂತಿಯ ಸ್ಪೂರ್ತಿಗೆ ವಿರುದ್ಧವಾಗಿದೆ,  ಪ್ರಸ್ತುತ ಯೋಜನೆಯು ದೇಶದಲ್ಲಿ ಹಾಲಿನ ಕೊರತೆಯ ಸನ್ನಿವೇಶದ ದೃಷ್ಟಿಯಿಂದ ಗ್ರಾಹಕರಿಗೆ ಸಮಸ್ಯೆಗಳನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯೋಗಿ ಸಿಎಂ ಆದ ನಂತರ ರಾಜ್ಯದಲ್ಲಿ 15 ದಿನಕ್ಕೊಂದು ಎನ್‌ಕೌಂಟರ್‌

ತಮಿಳುನಾಡಿನ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವನ್ನು(ಆವಿನ್) ದಶಕಗಳಿಂದ ಪೋಷಿಸಿಕೊಂಡು ಬರಲಾಗಿದೆ. ಅಮೂಲ್‌ನ ಈಗಿನ ಯೋಜನೆಯು ಸಹಕಾರ ಸಂಘಗಳ ನಿಯಮವನ್ನು ಉಲ್ಲಂಘಿಸುತ್ತದೆ. ಪ್ರಾದೇಶಿಕ ಸಹಕಾರಿ ಸಂಘಗಳು ರಾಜ್ಯಗಳಲ್ಲಿ ಡೇರಿ ಅಭಿವೃದ್ಧಿಗೆ ಮೂಲಾಧಾರವಾಗಿವೆ ಮತ್ತು ಉತ್ಪಾದಕರನ್ನು ತೊಡಗಿಸಿಕೊಳ್ಳಲು, ಪೋಷಿಸಲು ಮತ್ತು ಅನಿಯಂತ್ರಿತ ಬೆಲೆ ಏರಿಕೆಯಿಂದ ಗ್ರಾಹಕರನ್ನು ರಕ್ಷಿಸಲು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಆದ್ದರಿಂದ, ತಮಿಳುನಾಡಿನ ಆವಿನ್‌ನ ಹಾಲಿನ ಶೆಡ್ ಪ್ರದೇಶದಿಂದ ತಕ್ಷಣವೇ ಜಾರಿಗೆ ಬರುವಂತೆ ಹಾಲು ಸಂಗ್ರಹಿಸುವುದನ್ನು ನಿಲ್ಲಿಸುವಂತೆ ಅಮುಲ್‌ಗೆ ನಿರ್ದೇಶಿಸಲು ನಿಮ್ಮ ತಕ್ಷಣದ ಮಧ್ಯಸ್ಥಿಕೆಯನ್ನು ನಾನು ವಿನಂತಿಸುತ್ತೇನೆ ಎಂದು ಸ್ಟಾಲಿನ್ ಪತ್ರದಲ್ಲಿ ಮನವಿ ಮಾಡಿದ್ದಾರೆ. 

ಗ್ರಾಮೀಣ ಹಾಲು ಉತ್ಪಾದಕರು ಮತ್ತು ಗ್ರಾಹಕರ ಅನುಕೂಲಕ್ಕಾಗಿ ರಾಜ್ಯ ಸರ್ಕಾರದ ಒಡೆತನದೊಂದಿಗೆ ತಮಿಳುನಾಡು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಡಿಯಲ್ಲಿ(ಆವಿನ್) 9,673 ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿವೆ. ಸಂಘಗಳಲ್ಲಿ 4.5 ಲಕ್ಷ  ಸದಸ್ಯರು ನಿತ್ಯವು 35 ಲಕ್ಷಕ್ಕೂ ಹೆಚ್ಚಿನ ಲೀಟರ್ ಹಾಲನ್ನು ಸಂಗ್ರಹಿಸುತ್ತಾರೆ. ಈ ಕಸುಬನ್ನು ನಂಬಿಕೊಂಡು ರಾಜ್ಯದಲ್ಲಿ ಸಾವಿರಾರು ಕುಟುಂಬಗಳು ಜೀವನ ನಡೆಸುತ್ತಿವೆ. ಆವಿನ್ ಜಾನುವಾರು ಆಹಾರ, ಮೇವು, ಖನಿಜ ಮಿಶ್ರಣ, ಪ್ರಾಣಿಗಳ ಆರೋಗ್ಯ ರಕ್ಷಣೆ ಮತ್ತು ಹಾಲು ಉತ್ಪಾದಕರ ಪ್ರಾಣಿಗಳಿಗೆ ತಳಿ ಸೇವೆಗಳನ್ನು ಒದಗಿಸುತ್ತದೆ. ಇದಲ್ಲದೆ, ನಮ್ಮ ದೇಶದಲ್ಲಿ ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ಗುಣಮಟ್ಟದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಪೂರೈಸುತ್ತಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಅಮೂಲ್‌ ಸಂಸ್ಥೆ ಕರ್ನಾಟಕದ ಚುನಾವಣಾ ಪೂರ್ವದಲ್ಲಿ ಬಿಜೆಪಿ ಸರ್ಕಾರದ ಮೂಲಕ ಕರ್ನಾಟಕದ ಹಾಲು ಸಹಕಾರಿ ಸಂಸ್ಥೆಯಾದ ನಂದಿನಿಯನ್ನು ಆಪೋಷನ ತೆಗೆದುಕೊಳ್ಳಲು ಹೊರಟಿತ್ತು. ಕರ್ನಾಟಕದ ವಿಪಕ್ಷಗಳು ಹಾಗೂ ಕನ್ನಡಪರ ಹೋರಾಟಗಾರರ ಪ್ರತಿಭಟನೆಯ ಫಲವಾಗಿ ಅಮೂಲ್‌ ಕರ್ನಾಟಕಕ್ಕೆ ಕಾಲಿಡಲು ಸಾಧ್ಯವಾಗಲಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X