ಬೀದರ ತಾಲೂಕು ವ್ಯಾಪ್ತಿಯ ಹಲವು ಗ್ರಾಮಗಳ ಹಿರಿಯ ನಾಗರಿಕರು, ಅಂಗವಿಕಲರು ಹಾಗೂ ವಿಧವೆಯವರಿಗೆ ಪ್ರತಿ ತಿಂಗಳು ಮಸಾಶನ ತಲುಪುತ್ತಿಲ್ಲ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆ ಬಗೆಹರಿಸಬೇಕೆಂದು ಎಂದು ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಈ ಸಂಬಂಧ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ ಅವರಿಗೆ ಶುಕ್ರವಾರ ಸಲ್ಲಿಸಿದರು.
ಮಾಶಾಸನ ಹಣ ಸಿಗದೆ ವೃದ್ಧರು ಉಪಜೀವನ ನಡೆಸಲು ಪರದಾಡುವಂತಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಫಲಾನುಭವಿಗಳಿಗೆ ಹಣ ಜಮೆಯಾಗುತ್ತಿಲ್ಲ ಎಂಬುದು ಗಮನಕ್ಕೆ ಬಂದಿದೆ. ಇದರಿಂದ ವಯೋವೃದ್ಧರು ನಿತ್ಯ ಕಚೇರಿಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ಬಂದೊದಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಆನ್‌ಲೈನ್ ಜೂಜಿನಲ್ಲಿ ₹80 ಲಕ್ಷ ಹಣ ಕಳೆದುಕೊಂಡ ವಿದ್ಯಾರ್ಥಿ ಆತ್ಮಹತ್ಯೆ
ಈ ಸಂದರ್ಭದಲ್ಲಿಕರ್ನಾಟಕ ಯುವ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಗುರುದಾಸ ಅಮದಲಪಾಡ, ಕರ್ನಾಟಕ ದಲಿತ ಸೇನೆ ಜಿಲ್ಲಾಧ್ಯಕ್ಷ ಧನರಾಜ ಕೊಳಾರ(ಕೆ) ಹಾಗೂ ಮುಖಂಡರಾದ ಬಸವರಾಜ, ಗಜಸೂರ್ಯ ಇದ್ದರು.