ಬಳ್ಳಾರಿಯ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಮ್ಸ್ ಆಸ್ಪತ್ರೆಗೆ ಶನಿವಾರ ಲೋಕಾಯುಕ್ತ ದಾಳಿ ನಡೆದಿದೆ. ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರು ಸಾವನ್ನಪ್ಪಿದ್ದಾರೆ.
ಈ ಹಿನ್ನೆಲೆ ಜಿಲ್ಲಾಸ್ಪತ್ರೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ನೇತೃತ್ವದಲ್ಲಿ ಈ ದಾಳಿ ನಡೆದಿದೆ.
25ಕ್ಕೂ ಹೆಚ್ಚು ಅಧಿಕಾರಿಗಳ ಲೋಕಾಯುಕ್ತ ತಂಡವು ಹೆರಿಗೆ ವಾರ್ಡ್, ಐಸಿಯು ಮತ್ತು ಔಷಧಿ ದಾಸ್ತಾನು ಉಗ್ರಾಣಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಅಧಿಕಾರಿಗಳು ಐವಿ, ಆರ್‌ಎಲ್ ಪ್ಲೂಯಿಡ್ ಔಷಧಿ ಬಗ್ಗೆಯೂ ಮಾಹಿತಿ ತಿಳಿಯುತ್ತಿದ್ದಾರೆ.
ಇದನ್ನು ಓದಿದ್ದೀರಾ? ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು; ಡ್ರಗ್ ಕಂಟ್ರೋಲರ್ ಸಸ್ಪೆಂಡ್: ಸಿ.ಎಂ.ಸಿದ್ದರಾಮಯ್ಯ
ಇನ್ನು ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಬಗ್ಗೆ ಹೇಳಿಕೆ ನೀಡಿರುವ ಕರ್ನಾಟಕ ಆರೋಗ್ಯ ಸಚಿವ ಡಿ ದಿನೇಶ್ ಗುಂಡೂರಾವ್, “ಬಳ್ಳಾರಿಯಲ್ಲಿ 9 ಮಂದಿಯ ಪೈಕಿ ಐವರು ಸಾವನ್ನಪ್ಪಿದ್ದಾರೆ. ಇದು ಅತೀ ಗಂಭೀರ ವಿಷಯ. ನಾವು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಇದಕ್ಕೆ ಯಾರು ಕಾರಣವೋ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.
ಹಾಗೆಯೇ “ಈಗಾಗಲೇ ಒಬ್ಬರ ಅಮಾನತು ಮಾಡಲಾಗಿದೆ. ನಿಜವಾಗಿ ಅಲ್ಲಿ ಏನು ನಡೆದಿದೆ ಎಂಬ ಬಗ್ಗೆ ನಾವು ವರದಿ ಪಡೆಯಬೇಕಿದೆ. ಎಲ್ಲಾ ಪರೀಕ್ಷೆಗಳನ್ನು ಮಾಡಿಸಲಾಗುತ್ತಿದೆ” ಎಂದು ಹೇಳಿದ್ದಾರೆ.
