ಉಡುಪಿ | ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ವತಿಯಿಂದ ವಿಶ್ವಮಾನವ ಹಕ್ಕುಗಳ ಪಕ್ಷಾಚರಣೆ

Date:

Advertisements

ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ(ರಿ.) ಕರ್ನಾಟಕ -ಕೇರಳ ಇವರ ಸಂಯೋಜನೆಯಲ್ಲಿ “ವಿಶ್ವಮಾನವ ಹಕ್ಕುಗಳ ಪಕ್ಷಾಚರಣೆ” ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಮೇಲಿನ ಹಿಂಸೆ ದೌರ್ಜನ್ಯಗಳ ವಿರುದ್ಧ ಆಂದೋಲನ ಕಾರ್ಯಕ್ರಮ, ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಸಂಚಾರಿ ಗಿರಿಜನ ಆರೋಗ್ಯ ಪೆರ್ಡೂರು ಇವರ ಸಂಯೋಜನೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವು ಹೆಬ್ರಿ ಬಡಗುಡ್ಡೆಯಲ್ಲಿ ಹಮ್ಮಿಕೊಳ್ಳಲಾಯಿತು.

ಪ್ರಾಸ್ತಾವಿಕವಾಗಿ ಪುತ್ರನ್ ಹೆಬ್ರಿ ಮಾತನಾಡಿ ಡಿಸೆಂಬರ್ 6 ಡಾ.ಬಿ ಆರ್ ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನ ಇದರ ಅಂಗವಾಗಿ ಈ ದಿನ ಜಗತ್ತೆ ದುಃಖ ಪಡುವ ದಿನ. ಅಂದು ಭಾರತ ದೇಶದ ಪ್ರತಿಯೊಬ್ಬ ಬಾಂಧವರು ತಬ್ಬಲಿಯಾದ ದಿನ, ಭಾರತ ರತ್ನ ವಿಶ್ವಮಾನವ ಭಾರತದ ಜನರಿಗೆ ಕಾನೂನು ಸ್ವಾತಂತ್ರ್ಯ ಕೊಟ್ಟ ವಿಶ್ವವೇ ಮೆಚ್ಚುವಂತಹ, ಸಂವಿಧಾನ ಬರೆದಂತಹ, ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರು ನಮ್ಮನ್ನೆಲ್ಲ ಬಿಟ್ಟು ಪರಿನಿರ್ವಹಣಾ ದಿನವನ್ನು ನೆನಪಿಸಿಕೊಂಡು ನಮ್ಮ ಸಮುದಾಯವು ಅಭಿವೃದ್ಧಿಯ ಹಂತಕ್ಕೆ ಸಾಗುವುದೇ ನಮ್ಮ ಉದ್ದೇಶ ಎಂದು ಹೇಳಿದರು.

ಡಾಕ್ಟರ್ ಬಿಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಡಾ. ವಿದ್ಯಾ ರವರು ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಮ್ಮ ಸಮುದಾಯವು ಅಳಿವಿನಂಚಿಗೆ ಹೋಗದೆ ಇರುವ ಹಾಗೆ ಕಾಪಾಡುವುದು ಸಮುದಾಯದ ಜವಾಬ್ದಾರಿ ಇಂತಹ ತರಬೇತಿ, ಕ್ಯಾಂಪ್ ಗಳು ,ಬೀದಿ ನಾಟಕಗಳ ಮುಖಾಂತರ ಸಮುದಾಯದ ಜನರಿಗೆ ಜಾಗೃತಿ ಮೂಡಿಸುವುದು, ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಆರೋಗ್ಯದ ಬಗ್ಗೆ ಗಮನಹರಿಸುವುದು ಬಹಳ ಬಹಳ ಅಗತ್ಯ, ಅಲ್ಲದೆ ರಕ್ತಹೀನತೆ, ಹೃದಯಘಾತ, ಕ್ಯಾನ್ಸರ್ ಇಂತಹ ಕಾಯಿಲೆಗಳು ಹೇಗೆ ಬರುತ್ತದೆ, ಇದರಿಂದ ಮುಕ್ತರಾಗಲು ನಾವು ಆಹಾರ ಶೈಲಿ, ಜೀವನ ಕ್ರಮ ಬದಲಾಯಿಸಿಕೊಳ್ಳಬೇಕು ಮತ್ತು ದುಶ್ಚಟಗಳಿಂದ ಮುಕ್ತರಾಗಿರಬೇಕು ಎಂದು ಈ ಸಂದರ್ಭದಲ್ಲಿ ತಿಳಿಸಿದರು.

Advertisements

ಹೆಬ್ರಿ ಪೊಲೀಸ್ ಠಾಣೆಯ ASI ಆಗಿರುವ ದಯಾಕರ್ ಪ್ರಸಾದ್ ಇವರು ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಹಾಗೂ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ದೌರ್ಜನ್ಯ ಹಿಂಸೆ ಅದಿನಿಯಮ 2013, ಸಂಖ್ಯೆ 14ರ ಕುರಿತು ವಿವರಿಸುತ್ತಾ 10 ಅಥವಾ 10 ಕ್ಕಿಂತ ಹೆಚ್ಚು ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದರೆ ಆ ಸಂಸ್ಥೆಯ ಮಾಲೀಕರು ಮುಖ್ಯಸ್ಥರು ಕೆಲಸದ ಸ್ಥಳಗಳಲ್ಲಿ ಆಂತರಿಕ ದೂರು ಸಮಿತಿಗಳನ್ನು ಕಡ್ಡಾಯವಾಗಿ ರಚನೆ ಮಾಡಬೇಕು. ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳವಾದಾಗ ಅಪರಾಧಿಗಳಿಗೆ 5ರಿಂದ7 ವರ್ಷಗಳ ಕಾಲ ಶಿಕ್ಷೆ ವಿಧಿಸಲಾಗುವುದೆಂದು ತಿಳಿಸಿದರು.

ಬಾಲ್ಯವಿವಾಹದಿಂದ ಆಗುವ ದುಷ್ಪರಿಣಾಮಗಳು ಹಾಗೂ ಕಾನೂನು ಕ್ರಮಗಳ ಬಗ್ಗೆ, ಕಾಯ್ದೆಗಳ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ ಮಹಿಳೆ ಮತ್ತು ಹೆಣ್ಣು ಮಕ್ಕಳ ಸಂದರ್ಭದಲ್ಲಿ good touch ಮತ್ತು bad touch ಕಾನೂನು ಕ್ರಮದ ಬಗ್ಗೆ ಮಾಹಿತಿ ನೀಡಿದರು. ವಿವಿಧ ಕಾಯಿದೆಗಳ ಬಗ್ಗೆ ಹಾಗೂ ಘಟನೆಗಳ ಬಗ್ಗೆ ತಿಳಿಸಿದರು.

ಹೆಬ್ರಿ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಯಾಗಿರುವ ಸದಾಶಿವ ಸರ್ವೇಗಾರ್ ಇವರು ಕಾಲ ಕಾಲಕ್ಕೆ ಸರ್ಕಾರದಿಂದಾಗುವ ಕಾನೂನು ಬದಲಾವಣೆಗಳನ್ನು ಇಲಾಖೆಗಳ ಮುಖಾಂತರ ತಿಳಿದುಕೊಳ್ಳಬೇಕು, ದಾಖಲೆಗಳನ್ನು ಸರಿಪಡಿಸಿಕೊಳ್ಳಬೇಕು ಇದರಿಂದ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆದು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಜೊತೆಗೆ ಶಿಕ್ಷಣ ಮತ್ತು ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಬೇಕು. ಇಲ್ಲಿಯೂ ಕೂಡ ಆರೋಗ್ಯದ ಬದಲಾವಣೆಗಳನ್ನು ಕಾಣಲು ಸಾಧ್ಯ. ಸಂಘಟನೆಯೊಂದಿಗೆ ಪೋಲಿಸ್, ಆಸ್ಪತ್ರೆ, ಪಂಚಾಯತ್ಗಳೊಂದಿಗೆ ನಿರಂತರ ಸಂಪರ್ಕ ಹೊಂದಿರಬೇಕು ಎಂದು ತಿಳಿಸಿದರು.

ಹೆಬ್ರಿ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಸಂತೋಷ್ ಇವರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳಿಗೆ ಇರುವ ಉಚಿತ ವೈದ್ಯಕೀಯ ವ್ಯವಸ್ಥೆ ಮತ್ತು ಸೌಲಭ್ಯದ ಬಗ್ಗೆ ವಿವರಿಸಿದರು. ಹಾಗೆ ಹೆಬ್ರಿ ಆಸ್ಪತ್ರೆಯ ಡಾ.ಚಿದಾನಂದ ಇವರು ಕೂಡ ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ದಿವಾಕರ್ ರವರು ನಿರೂಪಿಸಿ ಸ್ವಾಗತಿಸಿದರು. ಪುತ್ರನ್ ಇವರು ಧನ್ಯವಾದ ವಿತ್ತರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X