ಬೆಲೆಕೇರಿ ಅಕ್ರಮ ಗಣಿ ಅದಿರು ಪ್ರಕರಣ | ಅದಾನಿ ಕಂಪನಿ ವಿರುದ್ಧ ಪ್ರಕರಣ ದಾಖಲಾಗಲಿ: ಬಿ.ಕೆ. ಹರಿಪ್ರಸಾದ್

Date:

Advertisements

ಬೆಲೆಕೇರಿ ಅಕ್ರಮ ಗಣಿ ಅದಿರು ಪ್ರಕರಣದಲ್ಲಿ ಅದಾನಿ ಕಂಪನಿ ವಿರುದ್ಧ ಪ್ರಕರಣ ದಾಖಲಾಗಬೇಕು. ಹಾಗೆಯೇ ಈ ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಆಗ್ರಹಿಸಿದರು.

ಈ ಬಗ್ಗೆ ಬೆಂಗಳೂರು ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹರಿಪ್ರಸಾದ್ ಅವರು, “ಬೆಲೆಕೇರಿ ಅಕ್ರಮ ಅದಿರು ಕಳ್ಳ ಸಾಗಾಣೆ ಪ್ರಕರಣದಲ್ಲಿ ಅರಣ್ಯದ ಅಧಿಕಾರಿಗಳು ಸುಮಾರು 8,05,991.083 ಟನ್ ಅಕ್ರಮ ಅದಿರನ್ನು ವಶಪಡಿಸಿಕೊಂಡಿದ್ದರು. ಆದರೆ ಈ ಅದಿರನ್ನು ಅದಾನಿ ಸಂಸ್ಥೆ ಭಾರೀ ಪ್ರಮಾಣದಲ್ಲಿ ಕಳ್ಳ ಸಾಗಾಣಿಕೆ ಮಾಡಿದೆ” ಎಂದು ಆರೋಪಿಸಿದರು. ಈ ವೇಳೆ ಲೋಕಾಯುಕ್ತ ವರದಿಯನ್ನೂ ಉಲ್ಲೇಖಿಸಿದರು.

ಇದನ್ನು ಓದಿದ್ದೀರಾ? ‘ಮೋದಿ-ಅದಾನಿ ಭಾಯಿ ಭಾಯಿ’; ಕಪ್ಪು ಮಾಸ್ಕ್‌ ಧರಿಸಿ ವಿಪಕ್ಷಗಳ ಸಂಸದರ ಪ್ರತಿಭಟನೆ

Advertisements

ಅದಿರನ್ನು ವಿದೇಶಕ್ಕೆ ಕಳ್ಳಸಾಗಾಣಿಕೆ ಮಾಡುವ ಬಗ್ಗೆ ಲೋಕಾಯುಕ್ತ ತನಿಖೆಯಲ್ಲಿ ಬಹಿರಂಗವಾಗಿದೆ. ಅದಾನಿ ಎಂಟರ್‌ಪ್ರೈಸಸ್, ಸಲ್ಗಾಂವಕರ್ ಮೈನಿಂಗ್ ಇಂಡಸ್ಟ್ರಿ, ರಾಜ್ ಮಹಲ್ ಕಂಪನಿ ಮತ್ತು ಮಲ್ಲಿಕಾರ್ಜುನ ಶಿಪ್ಪಿಂಗ್‌ ಈ ಕೃತ್ಯವನ್ನು ಮಾಡಿದೆ. ಈ ಎಲ್ಲಾ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಸಂಸ್ಥೆ ಶಿಫಾರಸು ಮಾಡಿದೆ.

ಈಗಾಗಲೇ ತನಿಖೆ ನಡೆಸಿರುವ ಸಿಬಿಐ ಸಲ್ಗಾಂವಕರ್ ಮೈನಿಂಗ್ ಇಂಡಸ್ಟ್ರಿ, ರಾಜ್ ಮಹಲ್ ಕಂಪನಿ ಮತ್ತು ಮಲ್ಲಿಕಾರ್ಜುನ ಶಿಪ್ಪಿಂಗ್‌ ಕಂಪನಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದೆ. ಈ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಸೇರಿದಂತೆ ಆರೋಪಿಗಳು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಇದಾದ ಬಳಿಕ ಸದ್ಯ ಶಿಕ್ಷೆಯನ್ನು ಹೈಕೋರ್ಟ್ ಅಮಾನತ್ತಿನಲ್ಲಿಟ್ಟಿದೆ. ಆದರೆ ಅದಾನಿ ಸಂಸ್ಥೆ ವಿರುದ್ಧ ಯಾವುದೇ ತನಿಖೆ ನಡೆದಿಲ್ಲ. ಈ ಬಗ್ಗೆ ನಿರಂತರವಾಗಿ ವಿಪಕ್ಷಗಳು ಬೊಟ್ಟು ಮಾಡುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X