ಟೆಸ್ಟ್‌ ಕ್ರಿಕೆಟ್‌ನಲ್ಲಿ 5 ಲಕ್ಷ ರನ್; ಹೊಸ ಇತಿಹಾಸ ಬರೆದ ಇಂಗ್ಲೆಂಡ್

Date:

Advertisements

147 ವರ್ಷಗಳ ಸುದೀರ್ಘ ಆಟದೊಂದಿಗೆ ಟೆಸ್ಟ್ ಕ್ರಿಕೆಟ್​​ನಲ್ಲಿ ಇಂಗ್ಲೆಂಡ್ ತಂಡವು ಬರೋಬ್ಬರಿ 5 ಲಕ್ಷ ರನ್‌ಗಳನ್ನು ದಾಖಲಿಸಿದೆ. ಬೃಹತ್‌ ರನ್‌ಗಳೊಂದಿಗೆ ಹೊಸ ಇತಿಹಾಸ ನಿರ್ಮಿಸಿದೆ.

ಯಾವುದೇ ತಂಡವು ಟೆಸ್ಟ್‌ ಕ್ರಿಕೆಟ್‌ನಲ್ಲಿ ಈವರೆಗೆ 5 ಲಕ್ಷ ರನ್‌ಗಳನ್ನು ಗಳಿಸಲಾಗಿಲ್ಲ. ಇಂಗ್ಲೆಂಡ್‌ ತಂಡವು 5 ಲಕ್ಷ ರನ್‌ಗಳನ್ನು ಕಲೆ ಹಾಕಿರುವ ಮೊದಲ ತಂಡವೆಂಬ ಹೆಗ್ಗಳಿಕೆ ಪಾತ್ರವಾಗಿದೆ. ವಿಶ್ವ ದಾಖಲೆ ಬರೆದಿದೆ. ಈ ದಾಖಲೆಯ ರನ್‌ಗಳನ್ನು ಇನ್ನೂ 10 ವರ್ಷಗಳ ಕಾಲ ಯಾರೂ ತಲುಪಲಾರರು ಎಂದೂ ಹೇಳಲಾಗುತ್ತಿದೆ.

ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್​​ನಲ್ಲಿ ಇಂಗ್ಲೆಂಡ್‌ ಮತ್ತು ನ್ಯೂಜಿಲೆಂಡ್‌ ಕ್ರಿಕೆಟ್‌ ತಂಡಗಳ ನಡುವೆ ಟೆಸ್ಟ್‌ ಸರಣಿ ನಡೆಯುತ್ತಿದೆ. ಶನಿವಾರ ನಡೆದ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವು 378 ರನ್‌ಗಳನ್ನು ಗಳಿಸಿದೆ. ಈ ರನ್‌ಗಳೊಂದಿಗೆ ಟೆಸ್ಟ್‌ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್‌ 5 ಲಕ್ಷ ರನ್‌ಗಳ ಗಡಿ ದಾಟಿದೆ.

ಇಂಗ್ಲೆಂಡ್‌ ತಂಡವು 147 ವರ್ಷಗಳಲ್ಲಿ 1,082 ಟೆಸ್ಟ್‌ ಪಂದ್ಯಗಳನ್ನು ಆಡಿದೆ. ಈ ಎಲ್ಲ ಪಂದ್ಯಗಳಿಂದ ಒಟ್ಟು 5 ಲಕ್ಷ ರನ್‌ಗಳನ್ನು ಕಲೆ ಹಾಕಿದೆ. ಇಂಗ್ಲೆಂಡ್‌ ನಂತರದ ಸ್ಥಾನದಲ್ಲಿ ಆಸ್ಟ್ರೇಲಿಯಾ ತಂಡವಿದೆ. ತಂಡವು 4,28,794 ರನ್‌ಗಳೊಂದಿಗೆ ದ್ವೀತೀಯ ಸ್ಥಾನದಲ್ಲಿದೆ.

ಮೂರನೇ ಸ್ಥಾನದಲ್ಲಿ ಭಾರತ ತಂಡವಿದೆ. ಆದರೆ, ರನ್‌ಗಳ ಅಂತರದಲ್ಲಿ ಭಾರೀ ದೂರವಿದೆ. ಭಾರತ ತಂಡವು ಈವರೆಗೆ 586 ಟೆಸ್ಟ್‌ ಪಂದ್ಯಗಳನ್ನು ಆಡಿದ್ದು, ಒಟ್ಟು 2,78,700 ರನ್‌ಗಳಿಗೆ ಕಲೆ ಹಾಕಿದೆ.

ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಪಟ್ಟಿಯಲ್ಲಿಯೂ ಇಂಗ್ಲೆಂಡ್‌ ಅಗ್ರ ಸ್ಥಾನದಲ್ಲಿದೆ. ತಂಡದಲ್ಲಿ ಆಡಿರುವ ಆಟಗಾರರು 929 ಶತಕಗಳನ್ನು ಭಾರಿಸಿದ್ದಾರೆ. 892 ಶತಕಗಳೊಂದಿಗೆ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದ್ದರೆ, 552 ಶತಕಗಳನ್ನು ಗಳಿಸಿ ಭಾರತ ತಂಡ ಮೂರನೇ ಸ್ಥಾನದಲ್ಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೋಹಾ | ಕರ್ನಾಟಕ ಸಂಘ ಕತಾರ್, ಐಸಿಸಿ ಸಹಯೋಗದೊಂದಿಗೆ ‘ಎಂಜಿನಿಯರ್ಸ್‌ ಡೇ’ ಆಚರಣೆ

ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ 164ನೇ ಜನ್ಮದಿನದ ಅಂಗವಾಗಿ, ಕರ್ನಾಟಕ...

ಭಾರತ-ಭೂತಾನ್ ನಡುವೆ 2 ಗಡಿಯಾಚೆಗಿನ ರೈಲು ಯೋಜನೆ ಘೋಷಣೆ

ಭೂತಾನ್ ಮತ್ತು ಭಾರತದ ನಡುವೆ ಎರಡು ಗಡಿಯಾಚೆಗಿನ ರೈಲು ಸಂಪರ್ಕ ನಿರ್ಮಿಸುವ...

ಭಯೋತ್ಪಾದಕ ಸಂಘಟನೆ ಸಾಲಿಗೆ ಬಿಷ್ಣೋಯ್ ಗ್ಯಾಂಗ್: ಕೆನಡಾ ಸರ್ಕಾರ ಘೋಷಣೆ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಕೆನಡಾ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು,...

ಎಡಗೈ ತುಂಡಾದರೂ ಬತ್ತದ ಉತ್ಸಾಹ; ಜಾವೆಲಿನ್ ಥ್ರೋ ವಿಭಾಗದಲ್ಲಿ ಭಾರತದ ರಿಂಕು ವಿಶ್ವ ದಾಖಲೆ

ನವದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಸೋಮವಾರ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ಸ್...

Download Eedina App Android / iOS

X