ಉಡುಪಿ | ನಿರುದ್ಯೋಗದಿಂದ ದೇಶ ತತ್ತರಿಸುತ್ತಿದೆ – ಡಾ ಪ್ರಕಾಶ್

Date:

Advertisements

ಕಳೆದ ಹತ್ತು ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದ ಮೋದಿ ಸರಕಾರ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದರು, ಹತ್ತು ವರ್ಷಕ್ಕೆ 20 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು ಆದರೆ, ಪ್ರತಿ ಹಂತದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪ್ರತಿ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಉದ್ಯೋಗಕ್ಕಾಗಿ ಅರಸಿ ಬರುವವರನ್ನು ನೋಡಬಹುದು. ಉದ್ಯೋಗವಿಲ್ಲದೇ ತಂದ ಬುತ್ತಿಯನ್ನು ತಿಂದು, ಮನೆಗೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ. ಇಂತಹ ಪರಿಸ್ಥಿತಿ ದೇಶವ್ಯಾಪಿ ಇದೆ. ಇದ್ದ ಕೆಲಸಕ್ಕೂ ಕೂಡ ಭದ್ರತೆ ಇಲ್ಲ. 3೦ ಸಾವಿರ ಕಾರ್ಮಿಕರಿರುವ ಕಾರ್ಖಾನೆಗಳಲ್ಲಿ 1 ಸಾವಿರ ಖಾಯಂ ನೌಕರರಿರುತ್ತಾರೆ. ಮೋದಿ ಕಾಲದಲ್ಲಿ ಕಾಂಟ್ರ್ಯಾಕ್ಟ್ ಪದ್ಧತಿ ಜ್ಯಾರಿ ಮಾಡಲಾಗುತ್ತಿದೆ ಎಂದು ಸಿ.ಪಿ.ಎಂ. ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಡಾ. ಪ್ರಕಾಶ್ ಕೆ. ಹೇಳಿದರು. ನಮ್ಮ ದೇಶದ ಸಂವಿಧಾನದಲ್ಲಿ ಅಸಮಾನತೆ ಇಲ್ಲ ಸಮಾನತೆ ಇದೆ ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನದ ಬಗ್ಗೆ ಅಪಸ್ವರ ಎತ್ತಿ ಸಂವಿಧಾನ ವಿರೋಧಿಯಾಗಿ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಅವರು ಕುಂದಾಪುರದ ನಾಡಾದಲ್ಲಿ ನಡೆಯುತ್ತಿರುವ ಉಡುಪಿ ಜಿಲ್ಲಾ ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷದ 8ನೇ ಜಿಲ್ಲಾ ಸಮ್ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಉದ್ಯೋಗವೆಂದರೆ ಬಂಡವಾಳಗಾರರು ಲೂಟಿ ಮಾಡಲು ಅವಕಾಶ ಮಾಡಿಕೊಡುವ ಯೋಜನೆ ಎಂದು ಮೋದಿ ತಿಳಿದುಕೊಂಡಿದ್ದಾರೆ. ಅದಕ್ಕಾಗಿಯೇ ಭಾರತದ ಸಂಪತ್ತನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಡಾ. ಪ್ರಕಾಶ್. ಕೆ. ಹೇಳಿದರು.

ಸಮ್ಮೇಳನದ ಧ್ವಜಾರೋಹಣವನ್ನು ಸಿ.ಪಿ.ಎಂ. ಪಕ್ಷದ ಹಿರಿಯ ಮುಖಂಡರಾದ ಎ.ಎಸ್. ಆಚಾರ್ಯ ನೆರವೇರಿಸಿ ಮಾತನಾಡುತ್ತಾ, ನಿಜವಾದ ಪ್ರಜಾಪ್ರಭುತ್ವ ವ್ಯವಸ್ಥೆ ಇರುವುದು ಸಿ.ಪಿ.ಎಂ. ಪಕ್ಷದಲ್ಲಿ ಮಾತ್ರ. ಗ್ರಾಮ, ವಲಯ, ತಾಲೂಕು, ಜಿಲ್ಲೆ, ರಾಜ್ಯ ಹೀಗೆ ರಾಷ್ಟ್ರ ಸಮ್ಮೇಳನ ನಡೆದು ಸದಸ್ಯರೇ ಪಕ್ಷದ ನಾಯಕತ್ವ ಆಯ್ಕೆ ಮಾಡುತ್ತಾರೆ. ಆದರೆ, ಬೇರೆಲ್ಲಾ ಪಕ್ಷದಲ್ಲಿ ಅದರ ಹೈಕಮಾಂಡ್ ನಿರ್ಧರಿಸುತ್ತಿದೆ ಎಂದು ಹೇಳಿದರು.

Advertisements

ಸಮಾರಂಭದ ಅಧ್ಯಕ್ಷತೆಯನ್ನು ಸಿ.ಪಿ.ಎಂ. ರಾಜ್ಯ ಕಂಟ್ರೋಲ್ ಕಮಿಟಿ ಅಧ್ಯಕ್ಷರಾದ ಕೆ. ಶಂಕರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಿ.ಪಿ.ಎಂ.ನ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಯಾದವ ಶೆಟ್ಟಿ ಮಾತನಾಡಿ ಜನರ ಧಾರ್ಮಿಕ ಭಾವನೆಗಳನ್ನು ಬಿಜೆಪಿ ರಾಜಕೀಯಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಆದರೆ ಸಿಪಿ‌ಎಂ ಪಕ್ಷ ನಿವೇಶನ ಇಲ್ಲದವರ, ಸಂಬಳವಿಲ್ಲದ ಅಕ್ಷರ ದಾಸೋಹ ನೌಕರರ ಪರ, ಆಟೋ ,ಅಂಗನವಾಡಿ ನೌಕರರ ಸಮಸ್ಯೆಗಳ ಬಗ್ಗೆ, ಉದ್ಯೋಗ ಖಾತ್ರಿ ಕೂಲಿ ಮಾಡುವವರ ಕೂಲಿ ಬಗ್ಗೆ, ಬೀಡಿ, ಕಟ್ಟಡ ಕಾರ್ಮಿಕರ ಪರ ಮಾತನಾಡಿ ಹೋರಾಟ ನಡೆಸುವ ಏಕೈಕ ಪಕ್ಷ ಸಿಪಿ‌ಎಂ ಪಕ್ಷವಾಗಿದೆ ಎಂದರು.

ಸಿ.ಪಿ‌ಎಂ. ಜಿಲ್ಲಾ ಸಮ್ಮೇಳನದ ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ನಿರ್ಣಯ ಅಂಗೀಕರಿಸಿತು. ವೇದಿಕೆಯಲ್ಲಿ ಜಿಲ್ಲಾ ಸಮಿತಿ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಸ್ವಾಗತ ಸಮಿತಿ ಕಾರ್ಯದರ್ಶಿ ರಾಜೀವ ಪಡುಕೋಣೆ, ಸ್ವಾಗತ ಸಮಿತಿ ಕೋಶಾಧಿಕಾರಿ ನಾಗರತ್ನ ನಾಡ, ಸಿ.ಪಿ.ಎಂ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಎಚ್. ನರಸಿಂಹ, ಸುರೇಶ್ ಕಲ್ಲಾಗರ, ಚಂದ್ರಶೇಖರ ಉಪಸ್ಥಿತರಿದ್ದರು. ರಾಜೀವ ಪಡುಕೋಣೆ ಸ್ವಾಗತಿಸಿ, ಶ್ರೀಧರ ನಾಡಾ ಕಾರ್ಯಕ್ರಮ ನಿರೂಪಿಸಿ, ನಾಗರತ್ನ ನಾಡಾ ವಂದಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X