ವಿಜಯಪುರ | ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ ಪರಿನಿಬ್ಬಾಣ ದಿನ

Date:

Advertisements

ಆಧುನಿಕ ಭಾರತದ ನಿರ್ಮಾತೃ ಹಾಗೂ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತ್ಯಾಗ ಮತ್ತು ಸಮಾಜ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಗುಲಬರ್ಗಾ ವಿವಿಯ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಎಚ್ ಟಿ ಪೋತೆ ಹೇಳಿದರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಡಾ. ಬಿ ಆರ್ ಅಂಬೇಡ್ಕರ್ ಆಧ್ಯಯನ ಕೇಂದ್ರ ಮತ್ತು ಪಜಾ/ಪಪಂ ಘಟಕದ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಡಾ. ಬಿ ಆರ್ ಅಂಬೇಡ್ಕರ್ ಅವರ 68ನೇ ಮಹಾ ಪರಿನಿಬ್ಬಾಣ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.

“ಡಾ. ಅಂಬೇಡ್ಕರ್ ಅವರ ಆಂದೋಲನಗಳು ಮತ್ತು ದೃಷ್ಟಿಕೋನವು ದೇಶದ ಅಭಿವೃದ್ಧಿಗೆ ಮಹತ್ವಪೂರ್ಣವಾದ ಕೊಡುಗೆ ನೀಡಿವೆ. ಕಾರ್ಮಿಕರ ಹಕ್ಕು, ಸಮಾನತೆ ಮತ್ತು ನ್ಯಾಯವನ್ನು ಎತ್ತಿಹಿಡಿದ ಅವರು, ಹೆಣ್ಣುಮಕ್ಕಳ ಶಿಕ್ಷಣ ಮತ್ತು ಸಾಮಾಜಿಕ ಸ್ಥಾನಮಾನವನ್ನು ಹೆಚ್ಚಿಸಲು ಹಲವಾರು ಕ್ರಮಗಳನ್ನು ತೆಗೆದುಕೊಂಡರು. ಅಂಬೇಡ್ಕರ್ ಅವರ ಸಾಹಸ ಮತ್ತು ಸಮರ್ಥ ಕಾರ್ಯಗಳು ಸಮಾಜದಲ್ಲಿ ಬದಲಾವಣೆ ತರಲು ಮತ್ತು ನವೀನ ಭಾರತದ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಿವೆ” ಎಂದರು.

Advertisements

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ. ಬಿ ಕೆ ತುಳಸಿಮಾಲ ಮಾತನಾಡಿ, “ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತದ ಆರ್ಥಿಕ ಪ್ರಗತಿಗೆ ಮಹತ್ವಪೂರ್ಣ ಕೊಡುಗೆಗಳನ್ನು ನೀಡಿದ ಮಹಾನ್ ವ್ಯಕ್ತಿಯಾಗಿದ್ದಾರೆ. ಅವರು ಆರ್ಥಿಕ ಸಮಾನತೆ ಮತ್ತು ನ್ಯಾಯವನ್ನು ಸ್ಥಾಪಿಸಲು ತತ್ವಗಳನ್ನು ರೂಪಿಸಿ, ದಲಿತರು ಹಾಗೂ ಹಿಂದುಳಿದ ವರ್ಗಗಳ ಆರ್ಥಿಕ ಮತ್ತು ಸಾಮಾಜಿಕ ಹಕ್ಕುಗಳನ್ನು ರಕ್ಷಿಸಲು ಹಲವು ಕ್ರಮಗಳನ್ನು ಜಾರಿಗೆ ತಂದರು” ಎಂದರು.

“ಅಂಬೇಡ್ಕರ್ ಅವರು ಈ ದೇಶಕ್ಕೆ ಮಹಾನ್ ಕೊಡುಗೆ ನೀಡಿದ್ದಾರೆ. ಅವರ ಜೀವನ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು” ಎಂದರು.

ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್ ಎಂ ಚಂದ್ರಶೇಖರ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ದೇಶದ ಅಪರೂಪದ ಮಹಾನಾಯಕ ಅಂಬೇಡ್ಕರ್:‌ ದೂಗೂರು ಪರಮೇಶ್ವರ್

ಇದೇ ಸಂದರ್ಭದಲ್ಲಿ ಸಂವಿಧಾನದ ಕುರಿತು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಸಂಘಟಿಸಿ ವಿಜೇತರಿಗೆ ನಗದು ಬಹುಮಾನ ನೀಡಿದರು.

ಕಾರ್ಯಕ್ರಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಆಧ್ಯಯನ ಕೇಂದ್ರದ ನಿರ್ದೇಶಕ ಡಾ.‌ ಸಂಜೀವಕುಮಾರ ಗಿರಿ ಸ್ವಾಗತಿಸಿದರು. ಪ.ಜಾ/ಪ.ಪಂ ಘಟಕದ ನಿರ್ದೇಶಕ ಪ್ರೊ.ಹನುಮಂತಯ್ಯ ಪೂಜಾರಿ ನಿರೂಪಿಸಿದರು ಮತ್ತು ಡಾ.ಬಾಬು ಲಮಾಣಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X