ವಿಜಯಪುರ | ಅನಧಿಕೃತವಾಗಿ ಟೋಲ್ ಹಣ ಸಂಗ್ರಹ; ರಾಜ್ಯ ರೈತ ಸಂಘ ಆಕ್ರೋಶ

Date:

Advertisements

ಮುಳವಾಡ ಸಮೀಪದಲ್ಲಿ ಟೋಲನ್ನು ಏಕಾಏಕಿ ಪ್ರಾರಂಭಿಸಿ ಅನಧಿಕೃತವಾಗಿ ಟೋಲ್ ಹಣ ಸಂಗ್ರಹಣೆ ಮಾಡುತ್ತಿರುವುದನ್ನು ಸ್ಥಗಿತಗೊಳಿಸಿ ರೈಲ್ವೆ ಹಳಿಯ ಮೇಲೆ ನಿರ್ಮಿಸುತ್ತಿರುವ ಮೇಲುಸೇತುವೆ ಕಾಮಗಾರಿ ಮುಗಿದ ಬಳಿಕ ಟೋಲ್ ಹಣ ಸಂಗ್ರಹಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿ‌ಸಿದರು.

ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮನವಿ ಸಲ್ಲಿಸಿ ಮಾತನಾಡಿ, “ರೈಲ್ವೆ ಮೇಲುಸೇತುವೆಯನ್ನು ಸಂಪೂರ್ಣ ನಿರ್ಮಿಸದೆ ಟೋಲ್ ಹಣ ಸಂಗ್ರಹಿಸುತ್ತಿದ್ದಾರೆ. ಇದು ಕಾನೂನು ಬಾಹಿರವಾಗಿದೆ. ಹೆದ್ದಾರಿಯವರು ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ವಾಹನದಲ್ಲಿ ಒಂದು ಗ್ಲಾಸ್ ನೀರು ಇಟ್ಟು ಚಲಿಸುವಾಗ ನೀರು ಚೆಲ್ಲಿದರೆ ಅಂತಹ ರಸ್ತೆಗಳಿಗೆ ತೆರಿಗೆ ಕಟ್ಟುವ ಹಾಗಿಲ್ಲ ಎಂಬಿತ್ಯಾದಿ ನಿಯಮಗಳಿವೆ. ಮೂಲಭೂತವಾಗಿ ಇರಬೇಕಾಗಿರುವ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಿದ ನಂತರವೇ ಟೋಲ್ ಸಂಗ್ರಹ ಮಾಡಬೇಕು” ಎಂದು ಆಗ್ರಹಿಸಿದರು.

ಕೊಲ್ಹಾರ ತಾಲೂಕು ಅಧ್ಯಕ್ಷ ಸೋಮು ಬಿರಾದಾರ ಮಾತನಾಡಿ, “ಟೋಲ್ ಪ್ಲಾಜ಼ಾದಿಂದ ಸುತ್ತಮುತ್ತಲಿನ ಮುಳವಾಡ ಮಲರ್ಘಾಣ, ಕಲಗುರಕಿ, ರೋಣಿಹಾಳ ಕುಬಕಡ್ಡಿ, ದುಡ್ಯಾಳ, ಕಾರಜೋಳ, ತೊನಶ್ಯಾಳ, ಹೊನಗನಹಳ್ಳಿ, ಚಿಕ್ಕ ಆಸಂಗಿ, ಹಿರೇ ಆಸಂಗಿ, ಕೊಲ್ಹಾರ ಸೇರಿದಂತೆ ಎಲ್ಲ ವಾಹನ ಸವಾರರಿಗೆ ಉಚಿತ ಹಾಗೂ ಶಾಶ್ವತವಾಗಿ ಪ್ರಯಾಣ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

Advertisements

ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮನಗೌಡ ಪಾಟೀಲ ಮಾತನಾಡಿ, “ರೈತ ಸಂಘಟನೆ ಹಾಗೂ ಉಳಿದ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ಮಾಡಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಹಾಗೂ ಟೋಲ್‌ ಸಂಬಂಧಿಸಿದ ಅಧಿಕಾರಿಗಳೊಡನೆ ಸಭೆ ಮಾಡಿ ಒಂದು ತಿಂಗಳ ಕಾಲಾವಕಾಶ ತೆಗೆದುಕೊಂಡು ಎಲ್ಲ ಮೂಲಭೂತ ಸೌಕರ್ಯ ಮತ್ತು ರೇಲ್ವೆ ಸೇತುವೆ ಮಾಡಲಾಗುವುದು” ಎಂದು ಭರವಸೆ ನೀಡಿದ್ದಾರೆ. ಎಂದರು.

“ಭರವಸೆ ದೊರೆತ ನಂತರ ಹೋರಾಟದ ನಿರ್ಧಾರ ಕೈ ಬಿಡಲಾಯಿತು. ಒಂದು ವೇಳೆ ಈ ತಿಂಗಳಲ್ಲಿ ನಮ್ಮ ಬೇಡಿಕೆಗಳನ್ನು ಬಗೆಹರೆಸದಿದ್ದರೆ ಟೋಲ್ ಬಂದ್ ಮಾಡಿ ತೀವ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ ಪರಿನಿಬ್ಬಾಣ ದಿನ

ಈ ವೇಳೆ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಹೆದ್ದಾರಿ ಅಧಿಕಾರಿಗಳೊಂದಿಗೆ ಮಾತನಾಡಿ, ಶೀಘ್ರದಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಮತ್ತು ಒಂದು ತಿಂಗಳ ಕಾಲಾವಕಾಶದೊಳಗೆ ರೈಲ್ವೆ ಸೇತುವೆ ಕಾಮಗಾರಿ ಮುಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಸೂಚನೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ ಅಧಿಕಾರಿ ಮಠ, ವಿಜಯಪುರ ತಾಲೂಕು ಅಧ್ಯಕ್ಷ ಮಹಾದೇವಪ್ಪ ತೇಲಿ, ಉಪಾಧ್ಯಕ ಪ್ರಕಾಶ ತೇಲಿ, ರೋಣಿಹಾಳ ಅಧ್ಯಕ್ಷ ಬಸು ನ್ಯಾಮಗೊಂಡ, ಚಡಚಣ ಪ್ರಧಾನ ಕಾರ್ಯದರ್ಶಿ ಸೋಮು ಪಟ್ಟಣಶೆಟ್ಟಿ ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X