ಬೆಳಗಾವಿ | ಆರು ತಿಂಗಳಲ್ಲಿ 322 ಶಿಶುಗಳು – 29 ತಾಯಂದಿರು ಸಾವು

Date:

Advertisements

ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕದಲ್ಲಿ ತಾಯಂದಿರು ಮತ್ತು ಶಿಶುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿವೆ. ಆರೋಗ್ಯ ಕ್ಷೇತ್ರದಲ್ಲಿನ ಕೊರತೆಗಳ ಬಗ್ಗೆ ಆತಂಕ ಹುಟ್ಟಿಸುತ್ತಿವೆ. ಇತ್ತೀಚೆಗೆ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ತಾಯಂದಿರು ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ಔಷಧ ನಿಯಂತ್ರಕರನ್ನು ಅಮಾನತು ಮಾಡಲಾಗಿದೆ. ತನಿಖೆ ನಡೆಯುತ್ತಿದೆ. ಇದೇ ಹೊತ್ತಿನಲ್ಲಿ ಮತ್ತೊಂದು ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಹಲವು ಆಸ್ಪತ್ರೆಗಳಲ್ಲಿ ಕಳೆದ ಆರು ತಿಂಗಳೊಳಗೆ ಒಟ್ಟು 322 ನವಜಾತ ಶಿಶುಗಳು ಮತ್ತು 29 ತಾಯಂದಿರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಜಿಲ್ಲಾ ಪ್ರಭಾರಿ ಆರೋಗ್ಯಾಧಿಕಾರಿ ಶರಣಪ್ಪ ನೀಡಿರುವ ಮಾಹಿತಿ ಪ್ರಕಾರ, 2024ರ ಏಪ್ರಿಲ್​ನಿಂದ ಅಕ್ಟೋಬರ್​ವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯದೇ ಇರುವುದು, ರಕ್ತಸ್ರಾವ, ವೈದ್ಯರ ನಿರ್ಲಕ್ಷ್ಯ ಸೇರಿದಂತೆ ನಾನಾ ಕಾರಣಗಳಿಂದಾಗಿ 29 ಮಂದಿ ತಾಯಂದಿರುವ ಸಾವನ್ನಪ್ಪಿದ್ದಾರೆ. ಹಲವು ಕಾರಣದಿಂದ ಬಾಣಂತಿಯರು ಮೃತಪಟ್ಟಿದ್ದಾರೆ.

ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿಯೇ 172 ನವಜಾತ ಶಿಶುಗಳು ಮೃತಪಟ್ಟಿದ್ದರೆ, ಉಳಿದ ಆಸ್ಪತ್ರೆಗಳಲ್ಲಿ 150 ಶಿಶುಗಳು ಸಾವನ್ನಪ್ಪಿದ್ದಾರೆ. ಕಡಿಮೆ ತೂಕ, ಬೆಳವಣಿಗೆಯಲ್ಲಿ ಕುಂಠಿತ, ಚಿಕಿತ್ಸೆ ಕೊರತೆ, ನ್ಯುಮೋನಿಯಾ, ಉಸಿರುಗಟ್ಟುವಿಕೆ ಹಾಗೂ ಅಪೌಷ್ಟಿಕತೆಯಿಂದ ಶಿಶುಗಳು ಮೃತಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisements

ಇನ್ನು, ದಾವಣಗೆರೆ ಜಿಲ್ಲೆಯಲ್ಲಿಯೂ ಕಳೆದ 7 ತಿಂಗಳಲ್ಲಿ 125 ನವಜಾತ ಶಿಶುಗಳು ಮತ್ತು 28 ಮಂದಿ ಬಾಣಂತಿಯರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಅತೀ ಹೆಚ್ಚು ಮಂದಿ ಸರ್ಕಾರಿ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X