ಸಿರಿಯಾ ಅಧ್ಯಕ್ಷ ಬಶರ್ ಅಲ್ ಅಸ್ಸಾದ್ ಅವರು ಡಮಾಸ್ಕಸ್‌ನಿಂದ ಪಲಾಯನ ಮಾಡಲು ಯತ್ನಸಿದ್ದು, ಅವರ ವಿಮಾನವು ಪತನವಾಗಿದೆ ಎಂದು ಹೇಳಲಾಗುತ್ತಿದೆ. ಅಸ್ಸಾದ್ ಅವರು ಬದುಕಿದ್ದಾರೆಯೇ ಅಥವಾ ಮೃತಪಟ್ಟಿದ್ದಾರೆಯೇ ಎಂಬ ಬಗ್ಗೆ ಆಂತಕ ವ್ಯಕ್ತವಾಗಿದೆ.
ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿರಬಹುದು ಅಥವಾ ವಿಮಾನವನ್ನು ಹೊಡೆದು ಉರುಳಿಸಿರಬಹುದು ಎಂದು ವರದಿಯಾಗಿದೆ.
“ಬಂಡುಕೋರರು ಸಿರಿಯಾ ರಾಜಧಾನಿ ಡಮಾಸ್ಕಸ್‌ಅನ್ನು ವಶಕ್ಕೆ ಪಡೆದಿದ್ದಾರೆ. ಹೀಗಾಗಿ, ಸಿರಿಯಾ ಅಧ್ಯಕ್ಷ ಅಸ್ಸಾದ್ ಅವರು ಡಮಾಸ್ಕಸ್‌ನಿಂದ ಪಲಾಯನ ಮಾಡಲು ಮುಂದಾಗಿದ್ದರು. ಅವರ ಪ್ರಯಾಣಿಸುತ್ತಿದ್ದ ಸಿರಿಯನ್ ಏರ್ ವಿಮಾನವು ಡಮಾಸ್ಕಸ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿದ್ದು, ಆರಂಭದಲ್ಲಿ ಸಿರಿಯಾದ ಕರಾವಳಿ ಪ್ರದೇಶದ ಕಡೆಗೆ ಹೋಗುತ್ತಿತ್ತು. ಆದರೆ, ಹಠಾತ್ತನೆ ಮಾರ್ಗವನ್ನು ಬದಲಾಯಿಸಿದೆ. ಹೋಮ್ಸ್ ನಗರದ ಬಳಿ ಕಣ್ಮರೆಯಾಗಿದೆ” ಎಂದು Flightradar24.com ವರದಿ ಮಾಡಿದೆ.
ಈ ಬೆಳವಣಿಗೆಯು ವಿಮಾನವು ಪತನವಾಗಿದೆಯೇ? ಅಥವಾ ಹೊಡೆದುರುಳಿಸಲಾಗಿದೆಯೇ? ಅಸ್ಸಾದ್ ಅವರ ಬದುಕಿದ್ದಾರೆಯೇ, ಇಲ್ಲವೇ ಎಂಬ ಅನುಮಾನಗಳನ್ನು ಹುಟ್ಟುಹಾಕಿದೆ. ಹಲವಾರು ವದಂತಿಗಳು ಹರಿದಾಡುತ್ತಿವೆ. ಆದರೆ, ಸಿರಿಯಾದ ಅಧಿಕಾರಿಗಳು ಈ ಬಗ್ಗೆ ಯಾವುದೇ ರೀತಿಯ ಸ್ಪಷ್ಟನೆಯನ್ನು ನೀಡಿಲ್ಲ.
ಅಸ್ಸಾದ್ ಮೃತಪಟ್ಟಿರುವ ಸಾಧ್ಯತೆ ಹೆಚ್ಚಿದೆ ಎಂದು ಸಿರಿಯನ್ ಮೂಲಗಳು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.
ಈ ನಡುವೆ ಅಸ್ಸಾದ್ ಪ್ರಯಾಣಿಸುತ್ತಿದ್ದ ವಿಮಾನ ಪತನಗೊಂಡಿರುವ ದೃಶ್ಯವೆಂದು ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಡಿದಾಡುತ್ತಿವೆ. ಆದರೆ, ಅಸ್ಸಾದ್ ಪ್ರಯಾಣಿಸುತ್ತಿದ್ದ ವಿಮಾನ ತಪನಗೊಂಡಿರುವ ಬಗ್ಗೆ ಇನ್ನೂ ಖಾತ್ರಿಯಾಗಿಲ್ಲ. ಆ ಘಟನೆಯ ಯಾವುದೇ ವಿಡಿಯೋಗಳು ದೊರೆತಿಲ್ಲ ಎಂದು ಫ್ಯಾಕ್ಟ್‌ಚೆಕ್ ಸಂಸ್ಥೆಗಳು ವರದಿ ಮಾಡಿವೆ.