ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಬೈಪಾಸ್ ರಸ್ತೆಯ ಮಳಲಿ ಬಳಿ ಖಾಸಗಿ ಬಸ್‌ನ ಬ್ರೇಕ್ ಫೇಲಾದ ಕಾರಣ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾದ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್, ರಾಷ್ಟ್ರೀಯ ಹೆದ್ದಾರಿ 75ರ ಮಳಲಿ ಬೈಪಾಸ್ ಬಳಿ ಬ್ರೇಕ್ ಫೇಲ್ ಆಗಿದ್ದು, ಡಿವೈಡರ್‌ಗೆ ಡಿಕ್ಕಿ ಹೊಡೆದಿತ್ತು. ಬಸ್‌ನಲ್ಲಿದ್ದ ಹತ್ತಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ. ಅಪಘಾತದಿಂದ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಗಾಯಾಳುಗಳನ್ನು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿದ್ದೀರಾ? ಹಾಸನದಲ್ಲಿ ದೇವೇಗೌಡರ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ; ಸಭಿಕರಿಂದ ಚಪ್ಪಾಳೆಯ ಸುರಿಮಳೆ
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
