ಬೈಕ್ ಚಲಾಯಿಸುವಾಗ ನಿಯಂತ್ರಣ ತಪ್ಪಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಾನ್ವಿ ತಾಲೂಕಿನ ಹೊರವಲಯದಲ್ಲಿ ನಡೆದಿದೆ.
ರಾಯಚೂರು ತಾಲೂಕಿನ ಹುಣಸಿಹಾಳ ಹುಡಾ ಗ್ರಾಮದ ನಿವಾಸಿ ಸಿದ್ಧಲಿಂಗ(26) ಮೃತಪಟ್ಟ ದುರ್ದೈವಿ ಎನ್ನಲಾಗಿದೆ.
ರಾಯಚೂರು-ಮಾನ್ವಿ ಮುಖ್ಯ ಹೆದ್ದಾರಿಯಲ್ಲಿ ಬೈಕ್ ಚಲಾಯಿಸುವಾಗ ನಿಯಂತ್ರಣ ತಪ್ಪಿ ಬಿದ್ದಿದ್ದು ತೆಲೆಗೆ ತೀವ್ರಪೆಟ್ಟು ಬಿದ್ದ ಕಾರಣ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಬೈಕ್ ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ರಾಯಚೂರು ಜಿಲ್ಲಾ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಬೈಕ್ ಸವಾರ ಸಿದ್ಧಲಿಂಗ ಕುಟುಂಬಸ್ಥರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಈ ಸುದ್ದಿ ಓದಿದ್ದೀರಾ? ಉಡುಪಿ | ರಕ್ಷಿಸಲ್ಪಟ್ಟಿರುವ ಭಿಕ್ಷುಕಿಯ ಸಂಬಂಧಿಕರು ಪತ್ತೆ; ಹಸ್ತಾಂತರ
ಮೃತ ವ್ಯಕ್ತಿ ಪತ್ನಿ ಸೇರಿದಂತೆ ಇಬ್ಬರು ಪುತ್ರಿಯರು, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮಾನ್ವಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
