ಟ್ರ್ಯಾಕ್ಟರ್-ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಒಂದೇ ಮನೆಯ ಇಬ್ಬರು ಯುವತಿಯರು ಮೃತಪಟ್ಟಿದ್ದರೆ, ಒಬ್ಬರು ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ದೀಪ(19) ಹಾಗೂ ತೇಜಸ್ವಿನಿ (20) ಮೃತಪಟ್ಟಿರುವ ದುರ್ದೈವಿಗಳು. ಆಕಾಶ್(16) ಗಂಭೀರ ಗಾಯಗೊಂಡ ಯುವಕ. ಈ ಮೂವರೂ ಒಂದೇ ಕುಟುಂಬದ ಹಟ್ಟಿ ಪಟ್ಟಣದ ನಿವಾಸಿಗಳು ಎನ್ನಲಾಗಿದೆ.
ಗಂಭೀರ ಗಾಯಗೊಂಡಿದ್ದ ದೀಪ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಆಕಾಶ್‌ಗೆ ಕಾಲು ಮುರಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಹಟ್ಟಿ ಪೊಲೀಸ್ ಠಾಣೆಯ ಸಿಪಿಐ ಹೊಸಕೇರಪ್ಪ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
