ಪಂಚಮಸಾಲಿ 2ಎ ಮೀಸಲಾತಿ | ಸುಪ್ರೀಂ ಕೋರ್ಟ್‌ ಆದೇಶ ಸದನದ ಮುಂದೆ ಮಂಡಿಸುವೆ: ಸಿದ್ದರಾಮಯ್ಯ

Date:

Advertisements

ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ, ಪತ್ರಿಪಕ್ಷಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿ, “ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ” ಎಂದು ತಿಳಿಸಿದರು.

“ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಸಲಾಗಿದೆ. ವೀರಶೈವ ಲಿಂಗಾಯಿತ ಹಾಗೂ ಪಂಚಮಸಾಲಿ ಜಾತಿಗಳು 3ಬಿ ಅಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2ಎ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಟಗಾರರಿಗೆ ತಿಳಿಸಿದ್ದೇನೆ” ಎಂದರು.

Advertisements

“ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಪಂಚಮಸಾಲಿಗಳನ್ನು 2ಎ ಸೇರಿಸಿಲ್ಲ ಬದಲಾಗಿ, ಅಲ್ಪಸಂಖ್ಯಾತ ಮುಸ್ಲಿಂರಿಗೆ ನೀಡಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, 3ಎ ಹಾಗೂ 3ಬಿ ಗೆ ತಲಾ ಶೇ.2 ರಂತೆ ಮೀಸಲಾತಿ ಹಂಚಿಕೆ ಮಾಡಿತ್ತು. ಇದನ್ನು ಆಕ್ಷೇಪಿಸಿ ಮುಸ್ಲಿಮರು ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಹಿಂದಿನ ಬಿಜೆಪಿ ಸರ್ಕಾರ ಮುಸ್ಲಿಮರ ಮೀಸಲಾತಿ ರದ್ದು ಪಡಿಸುವುದಿಲ್ಲ. ಯತಾಸ್ಥಿತಿಯನ್ನು ಮುಂದುವರಿಸಿಕೊಂಡು ಹೋಗುವುದಾಗಿ ಅಫಿಡೆವಿಡ್ ಸಲ್ಲಿಸಿದೆ. ಇದರ ಆಧಾರದ ಮೇಲೆ ಸರ್ವೋಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾದ್ಯವಿಲ್ಲ. ಇದರ ಪ್ರತಿಯನ್ನು ನಾಳೆಯೇ ಸದನ ಮುಂದೆ ಮಂಡಿಸುವೆ” ಎಂದು ಸ್ಪಷ್ಟಪಡಿಸಿದರು.

ಶಾಸಕ ಅರವಿಂದ ಬೆಲ್ಲದ್ ಮಂಗಳವಾರ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ನಡೆಯಲಿದೆ. ಆದ್ದರಿಂದ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಬುಧವಾರ ಸದನದ ಮುಂದೆ ಮಂಡಿಸುವಂತೆ ಮುಖ್ಯಮಂತ್ರಿಗಳಲ್ಲಿ ಸಭಾಧ್ಯಕ್ಷರ ಮೂಲಕ ಕೋರಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X