ಮಂಡ್ಯ | ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜತೆಗೆ ಮಾಂಸಾಹಾರವು ಇರಲಿ

Date:

Advertisements

87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆಗೆ ಮಾಂಸಾಹಾರವು ಇರಲಿ ಎಂದು ಆಗ್ರಹಿಸಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಸೋಮವಾರ ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು, ಕೈಯಲ್ಲಿ ಮೊಟ್ಟೆ ಹಿಡಿದು ಪ್ರತಿಭಟನೆ ನಡೆಸಿದರು. ಸಮ್ಮೇಳನದಲ್ಲಿ ಮಾಂಸಾಹಾರ ನಿರಾಕರಿಸುವುದು ಮಾಂಸಾಹಾರದ ಸಂಸ್ಕೃತಿಗೆ ಅವಮಾನ ಮಾಡಿದಂತೆ. ಬೇಳೆಯ ಜತೆ ಮೂಳೆಯು ಇರಲಿ, ಅಪ್ಪಳದ ಜತೆ ಕಬಾಬ್ ಇರಲಿ, ಕೋಸಂಬರಿ ಜತೆ ಎಗ್ ಬುರ್ಜಿ ಇರಲಿ. ಮುದ್ದೆಯ ಜತೆ ಬೋಟಿಯು ಇರಲಿ ಎಂದು ಘೋಷಣೆ ಕೂಗಿದರು.

87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮಂಡ್ಯ ನಗರದಲ್ಲಿ ನಡೆಯುವುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಜಿಲ್ಲಾಡಳಿತ, ಕನ್ನಡ ಸಾಹಿತ್ಯ ಪರಿಷತ್ತು ಇದಕ್ಕಾಗಿ ಕೆಲಸ ಮಾಡುತ್ತಿರುವುದು ಸರಿಯಷ್ಟೇ. ಆದರೆ ಸಾಹಿತ್ಯ ಸಮ್ಮೇಳನದ ವಾಣಿಜ್ಯ ಮಳಿಗೆಗಳಲ್ಲಿ ಮಾಂಸಾಹಾರಕ್ಕೆ ನಿಷೇಧ ಹೇರಲಾಗಿದೆ. ಹಾಗೆಯೇ ಸಮ್ಮೇಳನಕ್ಕೆ ಬರುತ್ತಿರುವ ಲಕ್ಷಾಂತರ ಜನರಿಗೆ ಸಸ್ಯಾಹಾರವನ್ನು ಮಾತ್ರ ವಿತರಿಸುವ ಸುದ್ದಿಗಳು ಈಗಾಗಲೇ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಇವೆರಡು ವಿಚಾರಗಳು ಜನರ ಆಹಾರದ ಹಕ್ಕನ್ನ ಉಲ್ಲಂಘಿಸುತ್ತಿವೆ. ಆದ್ದರಿಂದ ಮಾಂಸಾಹಾರಕ್ಕೆ ಅವಕಾಶ ನೀಡಬೇಕೆಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಮನವಿ ಸಲ್ಲಿಸಿದರು.

Advertisements

ನಿಷೇಧಗಳು ಯಾತಕ್ಕಾಗಿ? :

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಂಸಾಹಾರವು ನಿರ್ಬಂಧಿಸುವುದು ಸಾಧುವಲ್ಲ. ಅದರಲ್ಲೂ ಮಂಡ್ಯ ಜಿಲ್ಲೆಯ ಹಬ್ಬ, ಸಂಭ್ರಮ, ಸಮ್ಮೇಳನಗಳು ಮಾಂಸಾಹಾರಿ ಊಟೋಪಚಾರಗಳಿಂದ ಹೆಸರುವಾಸಿಯಾಗಿವೆ. ಅಲ್ಲದೇ ಸಮ್ಮೇಳನದಲ್ಲಿ ಭಾಗವಹಿಸುವ ಬಹುಸಂಖ್ಯಾತರು ಮಾಂಸಾಹಾರಿಗಳೇ ಆಗಿರುವಾಗ ಈ ನಿಷೇಧಗಳು ಯಾತಕ್ಕಾಗಿ? ಎಂದು ಮನವಿ ಪತ್ರದಲ್ಲಿ ಪ್ರಶ್ನಿಸಲಾಗಿದೆ.

ಮಾಂಸಾಹಾರ ನಿಷೇಧ ಎಂಬುದು ಅಪಾಯಕಾರಿ ಅಜೆಂಡಾ :

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ಬೇಡಿಕೆ ಯಾಕೆ ಎಂದು ಪ್ರಶ್ನಿಸುವುದೇ ಅಸಮಂಜಸ. ಆಹಾರ ಎಂಬುದು ಆಹಾರವಷ್ಟೇ!. ಅದನ್ನು ಸಸ್ಯಾಹಾರ ಮತ್ತು ಮಾಂಸಾಹಾರ ಎಂಬ ಬೈನರಿಗೆ ಒಳಪಡಿಸಿ ಇದು ಶ್ರೇಷ್ಠ ಮತ್ತು ಪವಿತ್ರ. ಮಾಂಸವು ಅಧಮ, ಅಪವಿತ್ರ ಎಂಬೆಲ್ಲಾ ಭಾವವನ್ನು ಜನರಲ್ಲಿ ಬಿತ್ತುವ ಕೆಲಸ ನಡೆಯುತ್ತಲೇ ಇದೆ. ಬಹುಜನರ ಆಹಾರ ಪದ್ದತಿಗಳನ್ನು ಈ ಮೂಲಕ ಅಸ್ಪೃಶ್ಯ ಮತ್ತು ಅಕ್ರಮವಾಗಿಸುವ ಪ್ರಯತ್ನಗಳು ಶತಮಾನಗಳಿಂದಲೂ ನಡೆಯುತ್ತಿವೆ. ಹಾಗೆ ನೋಡಿದರೆ ಕನ್ನಡ ಸಾಹಿತ್ಯ ಪರಂಪರೆಯಲ್ಲಿ 12- 13 ಶತಮಾನದ ಚಾಲುಕ್ಯ ಅರಸ ಮೂರನೇ ಸೋಮೇಶ್ವರನು ಬರೆದ ‘ಮಾನಸೋಲ್ಲಾಸ’ ಕೃತಿಯಲ್ಲಿ ‘ ಮಾಂಸಾಹಾರಗಳ ಬಹುದೊಡ್ಡ ಪಟ್ಟಿಯೇ ಇದೆ’. ಹೀಗಿರುವಾಗ ಮಾಂಸಾಹಾರ ನಿಷೇಧ ಎಂಬುದು ಅಪಾಯಕಾರಿ ಅಜೆಂಡವಾಗಿ ಕಾಣುತ್ತಿದೆ ಎಂದು ಖಂಡಿಸಿದ್ದಾರೆ.

ನಾಗರೀಕರ ಮೂಲಭೂತ ಅಗತ್ಯವಾದ ಆಹಾರದ ವಿಚಾರದಲ್ಲಿ ಸಮ್ಮೇಳನದ ಆಯೋಜಕರು ಇಷ್ಟು ತಾರತಮ್ಯ ಮತ್ತು ಕೀಳು ಮನೋಭಾವವನ್ನು ಹೊಂದಿರುವುದು ಪ್ರಜಾಪ್ರಭುತ್ವ ವಿರೋಧಿ ನಿಲುವು ಎಂಬುದನ್ನ ನಿಮ್ಮ ಗಮನಕ್ಕೆ ತರಬಯಸುತ್ತೇವೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮಾಂಸಾಹಾರ ವಿತರಿಸುವ ದೊಡ್ಡ ಪ್ರತಿಭಟನೆ :

ನಮ್ಮ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗದೇ ಹೋದರೆ ನಾವು ಸಾರ್ವಜನಿಕರಿಂದ ಕೋಳಿ, ಮೊಟ್ಟೆ ಮತ್ತು ಪಡಿತರವನ್ನು ಸಂಗ್ರಹಿಸಿ ಜನರಿಗೆ ಮಾಂಸಾಹಾರ ವಿತರಿಸುವ ದೊಡ್ಡ ಪ್ರತಿಭಟನೆಯನ್ನು ಸಾಹಿತ್ಯ ಸಮ್ಮೇಳನದಲ್ಲಿ ಹಮ್ಮಿಕೊಳ್ಳುತ್ತೇವೆ. ಈ ವಿಚಾರದಲ್ಲಿ ರಾಜಿಯಾಗಲು ಸಾಧ್ಯವೇ ಇಲ್ಲ. ಇದು ನಾಗರೀಕರ ಆಹಾರ ಮತ್ತು ಆಯ್ಕೆಯ ಹಕ್ಕು. ಜವಾಬ್ದಾರಿಯುತ ಸ್ಥಾನದಲ್ಲಿರುವ ಜಿಲ್ಲಾಡಳಿತ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧ ಮಾಡಿರುವುದಕ್ಕೆ ಸಂವಿಧಾನಾತ್ಮಕ ಕಾರಣಗಳನ್ನು ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಾಡಿನ ಮೂಲೆ ಮೂಲೆಗಳಿಂದ ಸಮಾನ ಮನಸ್ಕ ಗೆಳೆಯರು ಮಂಡ್ಯದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುತ್ತಿದ್ದಾರೆ. ಅವರೆಲ್ಲರ ಸಹಯೋಗದೊಂದಿಗೆ ನಮ್ಮ ಮಾಂಸಾಹಾರದ ಹಕ್ಕನ್ನು ಕಸಿಯುವ ಮತ್ತು ಅದನ್ನು ತುಚ್ಛವಾಗಿ ಕಾಣುವ ಅಧಿಕಾರಸ್ಥ ಮನಸ್ಥಿತಿಗಳ ವಿರುದ್ದ ಬಹುದೊಡ್ಡ ಪ್ರತಿಭಟನೆಯು ನಡೆಯುಲಿದೆ ಎಂಬುದನ್ನ ನಿಮ್ಮ ಗಮನಕ್ಕೆ ತರಬಯಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಮೋದಿ-ಅದಾನಿಗಳನ್ನು ಅಣಕಿಸುವುದಲ್ಲ; ಬಿಚ್ಚಿಟ್ಟು ಬಹಿರಂಗಗೊಳಿಸಬೇಕಿದೆ

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಸಿಪಿಐಎಂ ನ ಟಿ.ಎಲ್.ಕೃಷ್ಣಗೌಡ, ಸಿಐಟಿಯು ಕುಮಾರಿ, ಜಾಗೃತ ಕರ್ನಾಟಕ ಸಂತೋಷ್, ನಾವು ದ್ರಾವಿಡ ಕನ್ನಡಿರು ಸಂಘಟನೆಯ ಅಭಿಗೌಡ, ವಕೀಲರಾದ ಬಿ.ಟಿ.ವಿಶ್ವನಾಥ್, ಚೀರನಹಳ್ಳಿ ಲಕ್ಷ್ಮಣ್, ಜೆ.ರಾಮಯ್ಯ, ದಸಂಸ ಎಂ.ವಿ.ಕೃಷ್ಣ, ದೇವರಾಜ ಅರಸು ಹಿಂದುಳಿದ ವೇದಿಕೆಯ ಎಲ್.ಸಂದೇಶ್, ಕರುನಾಡ ಸೇವಕರು ಸಂಘಟನೆಯ ನಾಗಣ್ಣಗೌಡ, ಚಂದ್ರು, ಕೀಲಾರ ಸುರೇಶ್, ನೆಲದನಿ ಬಳಗದ ಲಂಕೇಶ್, ಅಂಬೇಡ್ಕ‌ರ್ ವಾರಿಯರ್ಸ್ ನ ಗಂಗರಾಜು, ಕರವೇ ಮುಖಂಡ ಹೆಚ್.ಡಿ.ಜಯರಾಂ, ಸಮಾನ ಮನಸ್ಕರ ವೇದಿಕೆ ನರಸಿಂಹಮೂರ್ತಿ, ಟಿ.ಡಿ.ನಾಗರಾಜು, ಶಂಕರಲಿಂಗೇಗೌಡ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X