ಬಿಡದಿ | ಮಂಚನಾಯಕನಹಳ್ಳಿಯಲ್ಲಿ ಹೆಚ್ಚಿದ ಕಳ್ಳತನ ಪ್ರಕರಣ; ಪೊಲೀಸರ ನಿರ್ಲಕ್ಷ್ಯ, ಆರೋಪ

Date:

Advertisements

ರಾಮನಗರ ಜಿಲ್ಲೆಯ ಬಿಡದಿ ತಾಲೂಕಿನ ಮಂಚನಾಯಕನಹಳ್ಳಿ ಬಳಿ ಹನುಮಂತ ನಗರದಲ್ಲಿ ಪೋಲಿ ಪುಂಡರ ಅಟ್ಟಹಾಸ ಹಾಗೂ ಕಳ್ಳತನ ಪ್ರಕರಣಗಳು ನಿತ್ಯವೂ ಹೆಚ್ಚಾಗುತ್ತಿದ್ದು, ಈ ಬಗ್ಗೆ ಪೊಲೀಸರ ಗಮನಕ್ಕೆ ತಂದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂದು ಸ್ಥಳೀಯ ನಿವಾಸಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ಒಂದು ವರ್ಷಗಳಲ್ಲಿ ನಿರಂತರವಾಗಿ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಮನೆ ಬಿಟ್ಟು ಹೊರ ಹೋಗಲು ಆಗದಂತಾಗಿದೆ. ಮನೆಯಲ್ಲಿಲ್ಲದ್ದನ್ನೇ ನೋಡಿಕೊಂಡಿರುವ ಖದೀಮರು ಈಗಾಗಲೇ ಮೂರು ಮನೆಗಳಲ್ಲಿ ಕಳ್ಳತನ ಮಾಡಿದ್ದು, ಮನೆಯಲ್ಲಿದ್ದ ಬಂಗಾರ, ಹಣವನ್ನು ಹೊತ್ತೊಯ್ತಿದ್ದಾರೆ. ಈ ಬಗ್ಗೆ ಪೊಲೀಸ್‌ ಠಾಣೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಕೂಡಲೇ ಗಮನಹರಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

ಲಭ್ಯ ಮಾಹಿತಿಯ ಪ್ರಕಾರ ಕಳೆದ ಒಂದು ವರ್ಷದಿಂದ ವಾಹನ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿವೆ. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳೇ ಕಳ್ಳರ ಗುರಿಯಾಗಿದ್ದು, ಮಧ್ಯರಾತ್ರಿಯ ಹೊತ್ತಿನಲ್ಲಿ ವಾಹನಗಳನ್ನು ಕಳ್ಳತನ ಮಾಡುತ್ತಿದ್ದಾರೆ. ಹಲವರು ತಮ್ಮ ವಾಹನಗಳನ್ನು ಕಳೆದುಕೊಂಡು ತಿಂಗಳುಗಳೇ ಕಳೆದರೂ ಪೊಲೀಸರು ಯಾವುದೇ ರೀತಿಯ ಕಟ್ಟುನಿಟಿನ ಕ್ರಮ ತೆಗೆದುಕೊಳ್ಳದಿರುವುದಕ್ಕೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

Advertisements

“ಇನ್ನು ಕೆಲವು ಮಾಹಿತಿಗಳ ಪ್ರಕಾರ ವಾಹನ ಕಳ್ಳತನ ಪ್ರಕರಣಗಳನ್ನು ಭೇದಿಸಲು ಪೊಲೀಸರು ತೀವ್ರ ನಿರ್ಲಕ್ಷ್ಯ ವಹಿಸುತ್ತಿದ್ದು, ಈವರೆಗೂ ಪೊಲೀಸರು ಯಾವುದೇ ರೀತಿಯ ಕ್ರಮಗಳನ್ನು ತೆಗೆದುಕೊಂಡಿಲ್ಲ. ಹನುಮಂತನಗರದಲ್ಲಿ ಪೊಲೀಸರು ಒಂದೇ ಒಂದು ಗಸ್ತು ನಿರ್ವಹಣೆ ಮಾಡುವುದಿಲ್ಲ. ಇದರಿಂದ ನಿವಾಸಿಗಳು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದರು.

“ಈ ಹಿಂದೆಯೂ ಕೂಡ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಹಲವು ಬಾರಿ ಮನೆ ಕಳ್ಳತನ ಪ್ರಕರಣಗಳು ಕೇಳಿಬಂದಿವೆ. ಹೀಗಾಗಿ ಹಲವು ವರ್ಷಗಳಿಂದಲೂ ಹನುಮಂತನಗರ ನಿವಾಸಿಗಳು ಕಳ್ಳತನದ ಭೀತಿಯನ್ನು ಎದುರಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಆದರೆ ಕಳೆದ ಒಂದು ವರ್ಷಗಳಿಂದ ಮತ್ತೆ ಕಳ್ಳತನದ ಪ್ರಕರಣಗಳಲ್ಲಿ ಗಣನೀಯ ಪ್ರಮಾಣದ ಏರಿಕೆ ಕಂಡಿರುವುದರಿಂದ ಇಲ್ಲಿ ಜೀವಿಸುವುದಕ್ಕೇ ಭಯಪಡುವಂತಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿ ಸದಸ್ಯರುಗಳು ನಿರ್ಲಕ್ಷ್ಯ

“ಒಂದು ಕಡೆ ಪೊಲೀಸರ ನಿರ್ಲಕ್ಷ್ಯ ಹೆಚ್ಚಾದರೆ ಮತ್ತೊಂದು ಕಡೆ ಮಂಚನಾಯಕನಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ನಿರ್ಲಕ್ಷ್ಯವೂ ಹೆಚ್ಚಾಗಿದೆ. ಗ್ರಾಮದಲ್ಲಿ ಒಂದೇ ಒಂದು ಕಾರ್ಯ ನಿರ್ವಹಿಸುವ ಸಿಸಿಟಿವಿಗಳು ಇಲ್ಲದಿರುವುದು ಕಳ್ಳತನ ಪ್ರಕರಣ ಹೆಚ್ಚಾಗುವಂತೆ ಮಾಡಿದೆ. ನಿವಾಸಿಗಳ ಭದ್ರತೆಗೆ ಯಾವುದೇ ರೀತಿಯ ಕ್ರಮ ತೆಗೆದುಕೊಳ್ಳದಿರುವುದು ಇಲ್ಲಿನ ಗ್ರಾಮ ಪಂಚಾಯಿತಿ ಸದಸ್ಯರ ನಿರ್ಲಕ್ಷ್ಯವನ್ನು ಸಾಬೀತುಪಡಿಸಿದೆ” ಎಂದು ಛೀಮಾರಿ ಹಾಕಿದರು.

“ಸಿಸಿಟಿವಿ ಕ್ಯಾಮೆರಾಗಳ ಕುರಿತು ಗ್ರಾಮ ಪಂಚಾಯಿತಿ ಸದಸ್ಯರುಗಳನ್ನು ನಿವಾಸಿಗಳು ಪ್ರಶ್ನಿಸಿದರೆ ನಿವಾಸಿಗಳೇ ಸಿಸಿಟಿವಿಯನ್ನು ಅಳವಡಿಸಬೇಕು ಎಂದು ಸದಸ್ಯರು ಮೊಂಡು ವಾದ ಮಾಡುತ್ತಿದ್ದಾರೆಂಬ ಆರೋಪಗಳು ಕೇಳಿಬಂದಿವೆ. ಹೀಗಾಗಿ ಚುನಾವಣೆಯ ಸಂದರ್ಭದಲ್ಲಿ ಮತಗಳನ್ನು ಕೇಳಲು ಬರುವಾಗ ನಾವೂ ಕೂಡ ಪಾಠ ಕಲಿಸುತ್ತೇವೆ” ಎಂದು ಸ್ಥಳೀಯರು ಕಿಡಿ ಕಾರಿದ್ದಾರೆ.

“ಒಟ್ಟಾರೆಯಾಗಿ ಮಂಚನಾಯಕನಹಳ್ಳಿಯ ಗ್ರಾಮ ಪಂಚಾಯಿತಿಯ ಸದಸ್ಯರ ನಿರ್ಲಕ್ಷ್ಯ ಮತ್ತು ಬಿಡದಿ ಪೊಲೀಸರ ಬೇಜವಾಬ್ದಾರಿತನದಿಂದಾಗಿ ಇಂದು ಮಂಚನಾಯಕನಹಳ್ಳಿಯಲ್ಲಿ ವಾಹನ ಕಳ್ಳತನ, ಮನೆಗಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ಇನ್ನು ಮುಂದಿನ ದಿನಗಳಲ್ಲಿ ಈ ಬಗ್ಗೆ ಸಂಬಂಧಪಟ್ಟವರು ಸೂಕ್ತ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಾಗಿದೆ” ಎಂದು ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.

ಮಂಚನಾಯಕನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮೂರ್ತಿ ಎಂಬುವವರು ಈ ದಿ.ಕಾಮ್‌ನೊಂದಿಗೆ ಮಾತನಾಡಿ, “ಹನುಮಂತನಗರದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಲೇ ಇವೆ. ಮನೆಗಳಲ್ಲಿ ಯಾರೂ ಇಲ್ಲದ್ದನ್ನು ನೋಡಿಕೊಂಡು ಮನೆಗಳಿಗೆ ನುಗ್ಗಿ ಪೂರಾ ಜಪ್ತಿ ಮಾಡಿದ್ದಾರೆ. ಬೈಕ್‌ಗಳ ಕಳ್ಳತನವಾಗಿದೆ. ಒಂದು ಆಟೊ ಕಳ್ಳತನವಾಗಿತ್ತು. ಈ ಆಟೊ ಬೆಂಗಳೂರಿನಲ್ಲಿರುವುದಾಗಿ ತಿಳಿದುಬಂದ ಬಳಿಕ ಹೋಗಿ ತೆಗೆದುಕೊಂಡುಬಂದರು. ಯಾರು ಕದ್ದಿದ್ದಾರೆಂಬುದು ತಿಳಿದುಬಂದಿಲ್ಲ. ಅನಾಥವಾಗಿ ಪತ್ತೆಯಾಗಿತ್ತು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯ ಮನೆಗೆ ನುಗ್ಗಿದ ಕಾರು!

ಕಳ್ಳತನಗಳಾಗುವುದನ್ನು ಪತ್ತೆ ಮಾಡುವ ಕುರಿತು ಆರು ತಿಂಗಳ ಹಿಂದೆಯೇ ಬಿಡದಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು. ಬಳಿಕ ಪೊಲೀಸರು ಬಂದು ಊರಿನಲ್ಲಿ ಪರಿಶೀಲನೆ ನಡೆಸಿ ತೆರಳಿದ್ದರು. ಯಾವುದೇ ಮಾಹಿತಿ ತಿಳಿದುಬಂದಿರಲಿಲ್ಲ. ಮತ್ತೆ ಮತ್ತೆ ಕೇಳಿದರೆ, ಪರಿಶೀಲಿಸುತ್ತೇವೆ, ನಿಮ್ಮದೇ ಕೆಲಸ ಮಾಡುತ್ತಿದ್ದೇವೆಂದು ಹೇಳುತ್ತಿದ್ದಾರೆ. ನವು ಎಷ್ಟು ಬಾರಿ ಕೇಳುವುದು, ಕೇಳಿ ಕೇಳಿ ಬೇಸರವಾಗಿದೆ. ಇನ್ನುಂದೆ ಎಸ್‌ಪಿಯವರ ಗಮನಕ್ಕೆ ತರುವುದೊಂದೇ ಬಾಕಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಬಿಡದಿ ಪೊಲೀಸ್‌ ಠಾಣೆಗೆ ಸಂಪರ್ಕಿಸಿದ್ದು, “ಆ ರೀತಿ ಯಾವುದೇ ಪ್ರಕರಣಗಳು ನಮ್ಮ ಗಮನಕ್ಕೆ ಬಂದಿಲ್ಲ. ದೂರು ನೀಡಿದ ಪ್ರಕರಣಗಳನ್ನು ಬಗೆಹರಿಸಿದ್ದೇವೆ. ಆ ಪ್ರಕರಣದ ದೂರು ಹಾಗೆಯೇ ಉಳಿದಿದೆ ಎಂಬುದರ ಕುರಿತು ಒಂದು ದೂರು ಕೊಡಿಸಿ ಪರಿಶೀಲಿಸುತ್ತೇವೆ” ಎಂದು ಹೇಳಿ ಜಾರಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X