ಡಿಸೆಂಬರ್ 07-08 ನಾಡ ಪಡುಕೋಣೆ ಯಲ್ಲಿ ನಡೆದ ಸಿಪಿಎಂ ಪಕ್ಷದ ಉಡುಪಿ ಜಿಲ್ಲಾ 8 ನೇ ಜಿಲ್ಲಾ ಸಮ್ಮೇಳನದಲ್ಲಿ ನೂತನ ಕಾರ್ಯದರ್ಶಿಯಾಗಿ ಸುರೇಶ್ ಕಲ್ಲಾಗರ ಆಯ್ಕೆ ಆಗಿದ್ದಾರೆ.
ಕಳೆದ 9 ವರ್ಷಗಳಿಂದ ಜಿಲ್ಲಾ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಪಕ್ಷದ ಹಿರಿಯ ಮುಖಂಡರಾದ ಬಾಲಕ್ರಷ್ಣ ಶೆಟ್ಟಿ ಪಕ್ಷದ ಬಾವುಟವನ್ನು ಸುರೇಶ್ ಕಲ್ಲಾಗರ ಅವರಿಗೆ ಹಸ್ತಾಂತರಿಸಿದರು. ಜಿಲ್ಲೆಯಿಂದ ಸಮ್ಮೇಳನದಲ್ಲಿ ಭಾಗವಹಿಸಿದ ಪ್ರತಿನಿಧಿಗಳು 16 ಮಂದಿಯ ನೂತನ ಜಿಲ್ಲಾ ಸಮಿತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಿತು. ಜಿಲ್ಲಾ ಸಮಿತಿಯು ನೂತನ ಕಾರ್ಯದರ್ಶಿಯನ್ನು ಆಯ್ಕೆ ಮಾಡಿತು.
ಜಿಲ್ಲಾ ಕಾರ್ಯದರ್ಶಿ ಮಂಡಳಿಗೆ ಎಚ್ ನರಸಿಂಹ,ಶಶಿಧರ ಗೊಲ್ಲ, ನಾಗರತ್ನ ನಾಡ, ಚಂದ್ರಶೇಖರ ವಿ,ರಾಜೀವ ಪಡುಕೋಣೆ ಆಯ್ಕೆಯಾಗಿದ್ದಾರೆ ಎಂದು ಪಕ್ಷದ ಜಿಲ್ಲಾ ಸಮಿತಿ ಪ್ರಕಟಣೆ ತಿಳಿಸಿದೆ.
