ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ.
ತಾಲೂಕಿನ ಭೂಮಿಶೆಟ್ಟಿಹಳ್ಳಿ ನಿವಾಸಿ ಶ್ರೀನಿವಾಸ್(28) ಮೃತಪಟ್ಟ ವ್ಯಕ್ತಿ. ಬೈಕ್ ಸವಾರ ಅದೇ ಗ್ರಾಮದ ಮುನಿರೆಡ್ಡಿ ಗಾಯಗೊಂಡಿದ್ದು, ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೈಕ್ ಸವಾರರು ಚಿಂತಾಮಣಿಗೆ ಬರುತ್ತಿದ್ದರು. ಚಿಂತಾಮಣಿಗೆ ಮಾರ್ಗವಾಗಿ ಬರುತ್ತಿದ್ದ ಕಾರು ಸಿದ್ದೇಪಲ್ಲಿ ಕ್ರಾಸ್ ಸಮೀಪ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಆಗ ಬೈಕ್‌ನಲ್ಲಿದ್ದವರು ಕೆಳಗೆ ಬಿದ್ದಿದ್ದು ಗಾಯಗೊಂಡಿದ್ದರು. ಗಾಯಾಳುಗಳನ್ನು ಕೂಡಲೇ ನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು.
ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಪಡಿತರ ತಿದ್ದುಪಡಿ ವಿರೋಧಿಸಿ ಕೃಷಿ ಕೂಲಿಕಾರರ ಸಂಘ ಪ್ರತಿಭಟನೆ
ಗಂಭೀರವಾಗಿ ಗಾಯಗೊಂಡಿದ್ದ ಶ್ರೀನಿವಾಸ್‌ಗೆ ತುರ್ತು ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರಕ್ಕೆ ಕಳುಹಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಕಾರಣ ಬೆಂಗಳೂರಿನ ನಿಮಾನ್ಸ್‌ಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಕೆಂಚಾರ್ಲಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.