ಹಿರಿಯ ರಾಜಕಾರಣಿ, ಕರ್ನಾಟಕದ ಮಾಜಿ‌ ಸಿಎಂ ಎಸ್‌ಎಂ ಕೃಷ್ಣ ನಿಧನ

Date:

Advertisements

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ದೇಶದ ಮಾಜಿ ವಿದೇಶಾಂಗ ಸಚಿವ, ಹಿರಿಯ ರಾಜಕಾರಣಿ ಎಸ್​ಎಂ ಕೃಷ್ಣ ಅವರು ನಿಧನ ಹೊಂದಿದ್ದಾರೆ.

92 ವರ್ಷ ವಯಸ್ಸಿನ ಎಸ್‌ಎಂ ಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್​ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಒಳ ಮೀಸಲಾತಿ ತೀರ್ಮಾನ: ಹೋರಾಟಕ್ಕೆ ಸಂದ ಜಯ, ಕಾಯಿಸದಿರಲಿ ಸರ್ಕಾರ

Advertisements

1932ರ ಮೇ 1ರಂದು ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ ಜನಿಸಿದ ಎಸ್ಎಂ ಕೃಷ್ಣ ಅವರ ಪೂರ್ಣ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಮದ್ದೂರಿನಲ್ಲೇ ಪ್ರಾಥಮಿಕ ಶಿಕ್ಷಣ ಪಡೆದ ಕೃಷ್ಣ ಅವರು ಬಳಿಕ ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ ಮುಗಿಸಿದರು.

ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿಎ, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದರು. ಬಳಿಕ ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್​ನಲ್ಲಿ ಪದವಿ ಪಡೆದರು.

ಎಸ್‌ಎಂ ಕೃಷ್ಣ ಅವರು ಕರ್ನಾಟಕದ ಹತ್ತನೇ ಮುಖ್ಯಮಂತ್ರಿಯಾಗಿದ್ದರು. ಹಾಗೆಯೇ ದೇಶದ ವಿದೇಶಾಂಗ ಸಚಿವರಾಗಿದ್ದರು. ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಎಸ್‌ಎಂ ಕೃಷ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

Download Eedina App Android / iOS

X